ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
September 04th, 05:35 pm
ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 04th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನ ಮಂತ್ರಿಗಳು
September 05th, 09:51 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಕನಸುಗಳಿಗೆ ಸ್ಫೂರ್ತಿ ನೀಡುವ, ಭವಿಷ್ಯಕ್ಕೆ ರೂಪ ನೀಡುವ ಹಾಗೂ ಕುತೂಹಲವನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸುವ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಅಭಿನಂದನೆ ಸಲ್ಲಿಸಿದರು.ಶಿಕ್ಷಕರ ದಿನದಂದು ಶಿಕ್ಷಕರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 05th, 09:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶಿಕ್ಷಕರ ದಿನದಂದು ನಮ್ಮ ಭವಿಷ್ಯ ಮತ್ತು ಸ್ಫೂರ್ತಿದಾಯಕ ಕನಸುಗಳನ್ನು ನಿರ್ಮಿಸುವಲ್ಲಿ ಶಿಕ್ಷಕರ ಅಚಲ ಸಮರ್ಪಣೆ ಮತ್ತು ಮಹತ್ತರ ಪ್ರಭಾವಕ್ಕಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.ಶಿಕ್ಷಕರ ದಿನಾಚರಣೆಯ ಮುನ್ನಾದಿನದಂದು, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ
September 04th, 10:33 pm
ಶಿಕ್ಷಕರ ದಿನಾಚರಣೆಯ ಮುನ್ನಾದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ರ ವಿಜೇತರೊಂದಿಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿ ಸಂವಾದ ನಡೆಸಿದರು. ಸಂವಾದದಲ್ಲಿ 75 ಪ್ರಶಸ್ತಿ ವಿಜೇತರು ಭಾಗವಹಿಸಿದ್ದರು.ಸೆಪ್ಟೆಂಬರ್ 5 ರಂದು ರಾಷ್ಟ್ರೀಯ ಪ್ರಶಸ್ತಿ 2022 ಪುರಸ್ಕೃತ ಶಿಕ್ಷಕರೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಲಿದ್ದಾರೆ
September 04th, 01:29 pm
ಶಿಕ್ಷಕರ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಸಾಲಿನಲ್ಲಿ ಶಿಕ್ಷಕರಿಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗಳ ಪುರಸ್ಕೃತರೊಂದಿಗೆ 5 ಸೆಪ್ಟೆಂಬರ್, 2022 ರಂದು ಸಂಜೆ 4:30 ಕ್ಕೆ 7, ಲೋಕ ಕಲ್ಯಾಣ ಮಾರ್ಗದಲ್ಲಿ ಸಂವಾದ ನಡೆಸಲಿದ್ದಾರೆ.PM interacts with the recipients of National Teacher Awards’ 2018
September 03rd, 06:14 pm
PM Narendra Modi interacted with the recipients of National Teacher Awards 2018, at Lok Kalyan Marg. The Prime Minister congratulated the award winners for their exceptional work. He urged them to continue striving hard to transform the life of every student.