ಎಸ್.ಸಿ.ಒ. ಶೃಂಗಸಭೆಯ ಸಂದರ್ಭದಲ್ಲಿ ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
August 31st, 04:50 pm
ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮ್ಯಾನ್ಮಾರ್ ನ ರಾಷ್ಟ್ರೀಯ ಭದ್ರತೆ ಮತ್ತು ಶಾಂತಿ ಆಯೋಗದ ಅಧ್ಯಕ್ಷರಾದ ಹಿರಿಯ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದರು.ಪ್ರಧಾನಿಯವರ ಯುನೈಟೆಡ್ ಕಿಂಗ್‌ಡಮ್ ಮತ್ತು ಮಾಲ್ಡೀವ್ಸ್ ಭೇಟಿ (ಜುಲೈ 23 - 26, 2025)
July 20th, 10:49 pm
ಪ್ರಧಾನಿ ಮೋದಿ ಜುಲೈ 23 - 26 ರವರೆಗೆ ಯುಕೆಗೆ ಅಧಿಕೃತ ಭೇಟಿ ಮತ್ತು ಮಾಲ್ಡೀವ್ಸ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ. ಅವರು ಪ್ರಧಾನಿ ಸ್ಟಾರ್ಮರ್ ಅವರೊಂದಿಗೆ ವ್ಯಾಪಕ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಅವರು ಸಿಎಸ್‌ಪಿಯ ಪ್ರಗತಿಯನ್ನು ಸಹ ಪರಿಶೀಲಿಸಲಿದ್ದಾರೆ. ಜುಲೈ 26 ರಂದು ಮಾಲ್ಡೀವ್ಸ್‌ನ 60 ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಆಚರಣೆಯಲ್ಲಿ ಪ್ರಧಾನಿ ಮೋದಿ 'ಗೌರವ ಅತಿಥಿ'ಯಾಗಿರುತ್ತಾರೆ. ಅವರು ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.ಮಾರಿಷಸ್ ಪ್ರಧಾನಮಂತ್ರಿಯವರೊಂದಿಗೆ ಪ್ರಧಾನಮಂತ್ರಿ ದೂರವಾಣಿ ಸಂಭಾಷಣೆ ನಡೆಸಿದರು
June 24th, 09:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 05th, 11:30 am
ಇಂದು ಅಧ್ಯಕ್ಷರಾದ ದಿಸ್ಸೆನಾಯಕೆ ಅವರಿಂದ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪಡೆದಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಈ ಪ್ರಶಸ್ತಿ ನನ್ನನ್ನು ಗೌರವಿಸುವುದಷ್ಟೇ ಅಲ್ಲ, 140 ಕೋಟಿ ಭಾರತೀಯರನ್ನು ಗೌರವಿಸುತ್ತದೆ. ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಆಳವಾದ ಸ್ನೇಹಕ್ಕೆ ಗೌರವವಾಗಿದೆ.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ
March 10th, 06:18 pm
ಮಾರಿಷಸ್ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.