ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
February 20th, 10:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರನ್ನು ಭೇಟಿ ಮಾಡಿದರು. ಸೆಪ್ಟೆಂಬರ್ 2025 ರಲ್ಲಿ ಅವರ ರಾಜ್ಯ ಭೇಟಿಯ ನಂತರ, ಪ್ರಧಾನಮಂತ್ರಿ ರಾಮ್‌ಗೂಲಂ ಅವರ ಪ್ರಸ್ತುತ ಅವಧಿಯಲ್ಲಿ ಭಾರತಕ್ಕೆ ಇದು ಎರಡನೇ ಭೇಟಿಯಾಗಿದೆ. ಫೆಬ್ರವರಿ 09, 2026 ರಂದು ನಡೆದ ಅವರ ಇತ್ತೀಚಿನ ದೂರವಾಣಿ ಸಂಭಾಷಣೆಯ ನಂತರ ಇದು ಮೊದಲ ಭೇಟಿಯಾಗಿದೆ.ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
September 11th, 12:30 pm
ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
September 10th, 01:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 25th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.ಬ್ರಿಟನ್ ಮತ್ತು ಮಾಲ್ಡೀವ್ಸ್ ಗೆ ಅಧಿಕೃತ ಭೇಟಿ ಮುನ್ನಾದಿನದಂದು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 23rd, 01:05 pm
ಭಾರತ ಮತ್ತು ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಅದು ಗಮನಾರ್ಹ ಪ್ರಗತಿಗೆ ಸಾಕ್ಷಿಯಾಗಿದೆ. ನಮ್ಮ ಸಹಯೋಗವು ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಶಿಕ್ಷಣ, ಸಂಶೋಧನೆ, ಸುಸ್ಥಿರತೆ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಕ್ಷೇತ್ರಗಳನ್ನು ವ್ಯಾಪಿಸಿದೆ. ಪ್ರಧಾನಮಂತ್ರಿ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರೊಂದಿಗಿನ ನನ್ನ ಭೇಟಿಯ ವೇಳೆ, ಉಭಯ ದೇಶಗಳ ಸಮೃದ್ಧಿ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ನಮಗೆ ಅವಕಾಶ ಸಿಗಲಿದೆ. ಈ ಭೇಟಿಯ ವೇಳೆ ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ.