ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

April 17th, 11:10 am

ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ಶ್ರೀ ಹರಿವಂಶ್ ಅವರಿಗೆ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಜ್ಯಸಭೆ ಉಪಸಭಾಪತಿಯಾಗಿ ಸತತ 3ನೇ ಬಾರಿಗೆ ಆಯ್ಕೆಯಾಗಿರುವುದು, ಈ ಸದನವು ನಿಮ್ಮ ಮೇಲೆ ಹೊಂದಿರುವ ಆಳವಾದ ನಂಬಿಕೆಗೆ ಸಾಕ್ಷಿಯಾಗಿದೆ. ಹಿಂದಿನ ಅವಧಿಯಲ್ಲಿ ನಿಮ್ಮ ಅನುಭವ ಮತ್ತು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ನಿಮ್ಮ ಪ್ರಯತ್ನಗಳಿಂದ ಪಡೆದ ಪ್ರಯೋಜನಕ್ಕೆ ಸದನವು ಪರಿಣಾಮಕಾರಿಯಾಗಿ ತನ್ನ ಅನುಮೋದನೆಯ ಮುದ್ರೆ ಹೊತ್ತಿದೆ. ಇದು ಅನುಭವಕ್ಕೆ ಸಂದ ಗೌರವ, ಸ್ವಾಭಾವಿಕ ಕಾರ್ಯ ಶೈಲಿಗೆ ಸಂದ ಗೌರವ ಮತ್ತು ಆ ಸ್ವಾಭಾವಿಕ ಕಾರ್ಯ ಶೈಲಿಯ ಸ್ವೀಕಾರವೂ ಆಗಿದೆ. ಹರಿವಂಶ್ ಜಿ ಅವರ ನಾಯಕತ್ವದಲ್ಲಿ ಸದನದ ಶಕ್ತಿ ಹೆಚ್ಚು ಪರಿಣಾಮಕಾರಿಯಾಗುವುದನ್ನು ನಾವೆಲ್ಲರೂ ನೋಡಿದ್ದೇವೆ. ಅವರು ಸದನದ ಕಲಾಪಗಳನ್ನು ಕೇವಲ ನಡೆಸುವುದಿಲ್ಲ ಎಂದು ನಾನು ಹೇಳಬಲ್ಲೆ; ಅವರು ತಮ್ಮ ಹಿಂದಿನ ಜೀವನದ ಅನುಭವಗಳನ್ನು ಸದನವನ್ನು ಉತ್ಕೃಷ್ಟಗೊಳಿಸಲು ಅತ್ಯಂತ ನಿಖರವಾದ ರೀತಿಯಲ್ಲಿ ಬಳಸಿಕೊಳ್ಳುತ್ತಾರೆ. ಅವರ ಅನುಭವವು ಸದನದ ಸಂಪೂರ್ಣ ಕಲಾಪಗಳು, ನಡವಳಿಕೆ ಮತ್ತು ವಾತಾವರಣವನ್ನು ಹೆಚ್ಚು ಪ್ರಬುದ್ಧಗೊಳಿಸುತ್ತದೆ. ಉಪಸಭಾಪತಿಯ ಹೊಸ ಅವಧಿಯು ಅದೇ ಮನೋಭಾವ, ಸಮತೋಲನ ಮತ್ತು ಸಮರ್ಪಣೆಯೊಂದಿಗೆ ಮುಂದುವರಿಯುತ್ತದೆ. ನಮ್ಮ ಎಲ್ಲಾ ಪ್ರಯತ್ನಗಳ ಮೂಲಕ ಸದನದ ಘನತೆ ಹೊಸ ಎತ್ತರವನ್ನು ತಲುಪುತ್ತದೆ ಎಂಬ ವಿಶ್ವಾಸ ನನಗಿದೆ.

ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 17th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು ಮತ್ತು ಐತಿಹಾಸಿಕ ಸತತ ಮೂರನೇ ಅವಧಿಗೆ ರಾಜ್ಯಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಶ್ರೀ ಹರಿವಂಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಐತಿಹಾಸಿಕ ಸಾಧನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಅವರು, ಇದು ಶ್ರೀ ಹರಿವಂಶ್ ಅವರ ಮೇಲಿನ ಸದನದ ಆಳವಾದ ನಂಬಿಕೆ ಮತ್ತು ಸಂಸ್ಥೆಗೆ ಅವರು ತಂದಿರುವ ಅಮೂಲ್ಯ ಅನುಭವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. “ಸತತ ಮೂರನೇ ಅವಧಿಗೆ ಆಯ್ಕೆಯಾಗಿರುವುದು ಅವರ ಅನುಭವ, ಎಲ್ಲರನ್ನೂ ಒಳಗೊಳ್ಳುವ ವಿಧಾನ ಮತ್ತು ಅವರ ಘನತೆಯ ಕಾರ್ಯ ಶೈಲಿಗೆ ಸದನದಿಂದ ಅನುಮೋದನೆಯ ಮುದ್ರೆಯಾಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ನೇಪಾಳ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

March 27th, 01:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಮಂತ್ರಿಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ. “ನಿಮ್ಮ ಆಯ್ಕೆಯು ನೇಪಾಳದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಎರಡು ರಾಷ್ಟ್ರಗಳ ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ನೇಪಾಳ ಸ್ನೇಹ ಮತ್ತು ಸಹಕಾರವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

Cabinet approves 4 lane construction from Barabanki to Bahraich in Uttar Pradesh worth Rs.6969.04 crore

March 18th, 04:10 pm

The Cabinet Committee on Economic Affairs, chaired by PM Narendra Modi has approved construction of 4-Lane Access-Controlled National Highway-927 from Barabanki to Bahraich in Uttar Pradesh worth Rs.6969.04 crore. The project will bypass major habitations, increase average travel speeds, reduce travel time to about one hour, and improve overall road safety, fuel efficiency, and vehicle operating costs.

ನೇಪಾಳದ ಚುನಾವಣೆಯಲ್ಲಿ ಯಶಸ್ಸು ಸಾಧಿಸಿರುವ ರಾಷ್ಟ್ರೀಯ ಸ್ವತಂತ್ರ ಪಕ್ಷದ ನಾಯಕರಿಗೆ ಪ್ರಧಾನಮಂತ್ರಿ ಅಭಿನಂದನೆ

March 09th, 10:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ (ಆರ್‌ ಎಸ್‌ ಪಿ) ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಮತ್ತು ಆರ್‌ ಎಸ್‌ ಪಿಯ ಹಿರಿಯ ನಾಯಕರಾದ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಆತ್ಮೀಯವಾದ ದೂರವಾಣಿ ಸಂಭಾಷಣೆ ನಡೆಸಿದರು.

ನೇಪಾಳದಲ್ಲಿ ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ನಡೆದ ಚುನಾವಣೆಗೆ ಅಲ್ಲಿನ ನಾಗರಿಕರು ಹಾಗೂ ಸರ್ಕಾರಕ್ಕೆ ಪ್ರಧಾನಮಂತ್ರಿ ಅಭಿನಂದನೆ

March 07th, 05:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದಲ್ಲಿ ಯಶಸ್ವಿಯಾಗಿ ಹಾಗೂ ಶಾಂತಿಯುತವಾಗಿ ನಡೆದ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಗರಿಕರಿಗೆ ಮತ್ತು ನೇಪಾಳ ಸರ್ಕಾರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ನೇಪಾಳದಲ್ಲಿ ಭಾರಿ ಮಳೆಯಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 05th, 04:20 pm

ನೇಪಾಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಜೀವಹಾನಿ ಮತ್ತು ವ್ಯಾಪಕ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನೇಪಾಳದ ಜನರಿಗೆ ಮತ್ತು ನೇಪಾಳ ಸರ್ಕಾರಕ್ಕೆ ಭಾರತದ ದೃಢವಾದ ಬೆಂಬಲವನ್ನು ಅವರು ಪುನರುಚ್ಚರಿಸಿದರು. ಸ್ನೇಹಪರ ನೆರೆಯ ಮತ್ತು ಬಿಕ್ಕಟ್ಟಿನ ಸಮಯದಲ್ಲಿಮೊದಲ ಪ್ರತಿಸ್ಪಂದಕನಾಗಿ ರಾಷ್ಟ್ರದ ಪಾತ್ರವನ್ನು ಒತ್ತಿಹೇಳುವ ಮೂಲಕ ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುವ ಭಾರತದ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಅವರು ದೃಢಪಡಿಸಿದರು.

ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಸುಶೀಲಾ ಕರ್ಕಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ

September 18th, 01:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿ ಶ್ರೀಮತಿ ಸುಶೀಲಾ ಕರ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

Manipur is the crown jewel adorning the crest of Mother India: PM Modi in Imphal

September 13th, 02:45 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

PM Modi inaugurates multiple development projects worth over Rs 1,200 crore at Imphal, Manipur

September 13th, 02:30 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀಮತಿ ಸುಶೀಲಾ ಕರ್ಕಿ ಅವರಿಗೆ ಶುಭಕೋರಿದ ಪ್ರಧಾನಮಂತ್ರಿ

September 13th, 08:57 am

ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀಮತಿ ಸುಶೀಲಾ ಕರ್ಕಿಯವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಶುಭಾಶಯಗಳನ್ನು ಕೋರಿದ್ದಾರೆ. ನೇಪಾಳದ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ದೃಢವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ನೇಪಾಳದಲ್ಲಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ

September 09th, 10:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶ ಮತ್ತು ಪಂಜಾಬ್ ಗೆ ಅಧಿಕೃತ ಭೇಟಿ ನೀಡಿ ಹಿಂದಿರುಗಿದ ಬಳಿಕ ಇಂದು ನೇಪಾಳದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅನೇಕ ಯುವಜನರ ಜೀವವನ್ನು ಕಸಿದ ಹಿಂಸಾಚಾರದ ಬಗ್ಗೆ ಪ್ರಧಾನಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದರು. ನೇಪಾಳದ ಎಲ್ಲಾ ನಾಗರಿಕರು ಶಾಂತಿ ಮತ್ತು ಏಕತೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕೆಂದು ಎಂದು ಅವರು ಮನಃಪೂರ್ವಕವಾಗಿ ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ನೇಪಾಳ ಪ್ರಧಾನಮಂತ್ರಿಯವರ ಭೇಟಿ

April 04th, 04:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಕೆ.ಪಿ.ಶರ್ಮಾ ಓಲಿ ಅವರನ್ನು ಬ್ಯಾಂಕಾಕ್‌ ನಲ್ಲಿ ಇಂದು 6ನೇ ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿದರು.

ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ

April 02nd, 02:00 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.

ಥೈಲ್ಯಾಂಡ್ ನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 14th, 08:30 am

ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ನಿಮ್ಮೆಲ್ಲರೊಂದಿಗೆ ಭಾಗಿಯಾಗುತ್ತಿರುವುದು ನನಗೆ ಗೌರವ ತಂದಿದೆ. ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ, ಆ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಹಾಗೂ ಭಾಗವಹಿಸಿದ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ

February 14th, 08:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ವಿಶ್ವ ನಾಯಕರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

January 26th, 05:56 pm

ಭಾರತದ 76ನೇ ಗಣರಾಜ್ಯೋತ್ಸವದ ಶುಭಾಶಯಗಳು ಮತ್ತು ಶುಭಸಂದೇಶಗಳಿಗಾಗಿ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು

January 25th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ (2025ರ ಜನವರಿ 24) ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಮುಂಬರುವ ಗಣರಾಜ್ಯೋತ್ಸವದ ಮೆರವಣಿಗೆಯ ಭಾಗವಾಗಲಿರುವ ಎನ್ ಸಿ ಸಿ ಕೆಡೆಟ್ ಗಳು, ಎನ್ ಎಸ್ ಎಸ್ ಸ್ವಯಂಸೇವಕರು, ಬುಡಕಟ್ಟು ಅತಿಥಿಗಳು ಮತ್ತು ಸ್ತಬ್ಧಚಿತ್ರ ಕಲಾವಿದರೊಂದಿಗೆ ಸಂವಾದ ನಡೆಸಿದರು. ಸಂವಾದದ ಸಮಯದಲ್ಲಿ, ಅನೇಕ ಭಾಗವಹಿಸುವವರು ಪ್ರಧಾನಿಯನ್ನು ವೈಯಕ್ತಿಕವಾಗಿ ಭೇಟಿಯಾದ ಸಂತಸವನ್ನು ವ್ಯಕ್ತಪಡಿಸಿದರು. ಇದಕ್ಕೆ ಪ್ರಧಾನಮಂತ್ರಿ ಇದು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಉತ್ತರಿಸಿದರು.