ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸುವ ಮತ್ತು ಶಕ್ತಿ, ನ್ಯಾಯ, ಏಕತೆಯನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
December 30th, 10:10 am
1943ರ ಡಿಸೆಂಬರ್ 30ರಂದು ಪೋರ್ಟ್ ಬ್ಲೇರ್ ನಲ್ಲಿ ನೇತಾಜಿ ಅವರು ತ್ರಿವರ್ಣ ಧ್ವಜವನ್ನು ಹಾರಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದರು.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಮಹಾರಾಷ್ಟ್ರದ ನಾಗಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರದ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 30th, 11:53 am
ಗುಡಿ ಪಾಡ್ವ ಮತ್ತು ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕವಾಗಿ ಶುಭಾಶಯಗಳನ್ನು ಕೋರುತ್ತೇನೆ! ಅತ್ಯಂತ ಗೌರವಾನ್ವಿತ ಸರ್ಸಂಘಚಾಲಕ್ ಜಿ, ಡಾ. ಮೋಹನ್ ಭಾಗವತ್ ಜಿ, ಸ್ವಾಮಿ ಗೋವಿಂದ್ ಗಿರಿ ಜಿ ಮಹಾರಾಜ್, ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜಿ, ಡಾ. ಅವಿನಾಶ್ ಚಂದ್ರ ಅಗ್ನಿಹೋತ್ರಿ ಜಿ, ಇತರ ಗಣ್ಯರೇ ಹಾಗು ಇಲ್ಲಿ ಉಪಸ್ಥಿತರಿರುವ ಎಲ್ಲಾ ಹಿರಿಯ ಸಹೋದ್ಯೋಗಿಗಳೇ, ಇಂದು ರಾಷ್ಟ್ರ ಯಜ್ಞದ ಈ ಪವಿತ್ರ ಆಚರಣೆಯಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಇಂದು, ಚೈತ್ರ ಶುಕ್ಲ ಪ್ರತಿಪದದ ಈ ದಿನವು ತುಂಬಾ ವಿಶೇಷವಾಗಿದೆ. ನವರಾತ್ರಿಯ ಪವಿತ್ರ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಇಂದು ದೇಶದ ವಿವಿಧ ಭಾಗಗಳಲ್ಲಿ ಗುಡಿ-ಪಾಡ್ವ, ಯುಗಾದಿ ಮತ್ತು ನವರೆಹ್ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂದು ಭಗವಾನ್ ಜುಲೇಲಾಲ್ ಜಿ ಮತ್ತು ಗುರು ಅಂಗದ್ ದೇವ್ ಜಿ ಅವರ ಜನ್ಮ ದಿನಾಚರಣೆಯೂ ಆಗಿದೆ. ಇದು ನಮ್ಮ ಸ್ಫೂರ್ತಿ, ಅತ್ಯಂತ ಗೌರವಾನ್ವಿತ ಡಾಕ್ಟರ್ ಸಾಹೇಬ್ ಅವರ ಜನ್ಮ ದಿನಾಚರಣೆಯೂ ಆಗಿದೆ. ಮತ್ತು ಈ ವರ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅದ್ಭುತ ಪ್ರಯಾಣದ 100 ವರ್ಷಗಳು ಪೂರ್ಣಗೊಂಡಿವೆ. ಇಂದು ಈ ಸಂದರ್ಭದಲ್ಲಿ, ಸ್ಮೃತಿ ಮಂದಿರಕ್ಕೆ ಭೇಟಿ ನೀಡುವ ಮತ್ತು ಗೌರವಾನ್ವಿತ ಡಾಕ್ಟರ್ ಸಾಹೇಬ್ ಮತ್ತು ಗೌರವಾನ್ವಿತ ಗುರೂಜಿ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು
March 30th, 11:52 am
ಮಹಾರಾಷ್ಟ್ರದ ನಾಗ್ಪುರದಲ್ಲಿ ಇಂದು ಪ್ರಧಾನಮಂತ್ರಿಯವರು ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪವಿತ್ರ ನವರಾತ್ರಿ ಉತ್ಸವದ ಆರಂಭವನ್ನು ಸೂಚಿಸುವ ಚೈತ್ರ ಶುಕ್ಲ ಪ್ರತಿಪದದ ಮಹತ್ವದ ಬಗ್ಗೆ ತಿಳಿಸಿದರು. ದೇಶಾದ್ಯಂತ ಇಂದು ಗುಡಿ ಪಡ್ವಾ, ಯುಗಾದಿ ಮತ್ತು ನವರೇಹ್‌ನಂತಹ ಹಬ್ಬಗಳನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು. ಭಗವಾನ್ ಜುಲೇಲಾಲ್ ಮತ್ತು ಗುರು ಅಂಗದ್ ದೇವ್ ಅವರ ಜನ್ಮ ದಿನಾಚರಣೆಯೊಂದಿಗೆ ಈ ದಿನವು ಹೊಂದಿಕೆಯಾಗುವುದರಿಂದ ಈ ದಿನದ ಮಹತ್ವವನ್ನು ಅವರು ವಿವರಿಸಿದರು. ಈ ಸಂದರ್ಭವನ್ನು ಸ್ಪೂರ್ತಿದಾಯಕ ಡಾ. ಕೆ. ಬಿ. ಹೆಡ್ಗೆವಾರ್ ಅವರ ಜನ್ಮ ವಾರ್ಷಿಕೋತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶ್ರೇಷ್ಠ ಪ್ರಯಾಣದ ಶತಮಾನೋತ್ಸವ ವರ್ಷವೆಂದು ತಿಳಿಸಿದರು. ಈ ಮಹತ್ವದ ದಿನದಂದು ಡಾ. ಹೆಡ್ಗೆವಾರ್ ಮತ್ತು ಶ್ರೀ ಗೋಲ್ವಾಲ್ಕರ್ ಗುರೂಜಿ ಅವರಿಗೆ ಗೌರವ ಸಲ್ಲಿಸಲು ಸ್ಮೃತಿ ಮಂದಿರಕ್ಕೆ ಭೇಟಿ ನೀಡಿರುವುದು ನನಗೆ ಸಿಕ್ಕ ಗೌರವ ಎಂದು ಸಂತಸ ವ್ಯಕ್ತಪಡಿಸಿದರು.ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ
March 12th, 06:07 am
10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು
March 11th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.Netaji Subhas Chandra Bose's legacy will continue to inspire us in building a Viksit Bharat: PM Modi
January 23rd, 11:30 am
PM Modi addressed the nation on Parakram Diwas, paying tribute to Netaji Subhas Chandra Bose. He emphasized Netaji’s legacy of unity, sacrifice, and determination, urging everyone to step out of their comfort zones to achieve a Viksit Bharat. He highlighted the global opportunities for India and the need to stay united and vigilant against pisive forces."ಪರಾಕ್ರಮ್ ದಿವಸ್" ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
January 23rd, 11:25 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ ಪರಾಕ್ರಮ್ ದಿವಸ್ ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು.ಜನರು ಬಿಜೆಪಿಯ ‘ಸಂಕಲ್ಪ ಪತ್ರ’ವನ್ನು ಮೋದಿ ಕಿ ಗ್ಯಾರಂಟಿ ಕಾರ್ಡ್ ಎಂದು ಪರಿಗಣಿಸುತ್ತಿದ್ದಾರೆ: ತಿರುನಲ್ವೇಲಿಯಲ್ಲಿ ಪ್ರಧಾನಿ ಮೋದಿ
April 15th, 04:33 pm
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ 2024 ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ನಡೆಸಿದರು. ಸಭಿಕರು ಪ್ರಧಾನಿಯನ್ನು ಪ್ರೀತಿ ಮತ್ತು ಆರಾಧನೆಯಿಂದ ಸ್ವಾಗತಿಸಿದರು. ಮೂರನೇ ಅವಧಿಯನ್ನು ಪ್ರಕಟಿಸಿದ ಪ್ರಧಾನಿ ಮೋದಿ ಅವರು ತಮಿಳುನಾಡು ಮತ್ತು ಇಡೀ ರಾಷ್ಟ್ರಕ್ಕೆ ತಮ್ಮ ದೃಷ್ಟಿಕೋನವನ್ನು ಉದಾಹರಿಸಿದರು.ತಮಿಳುನಾಡಿನ ತಿರುನಲ್ವೇಲಿಯಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆ ನಡೆಸಿದರು
April 15th, 04:23 pm
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ 2024 ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ನಡೆಸಿದರು. ಸಭಿಕರು ಪ್ರಧಾನಿಯನ್ನು ಪ್ರೀತಿ ಮತ್ತು ಆರಾಧನೆಯಿಂದ ಸ್ವಾಗತಿಸಿದರು. ಮೂರನೇ ಅವಧಿಯನ್ನು ಪ್ರಕಟಿಸಿದ ಪ್ರಧಾನಿ ಮೋದಿ ಅವರು ತಮಿಳುನಾಡು ಮತ್ತು ಇಡೀ ರಾಷ್ಟ್ರಕ್ಕೆ ತಮ್ಮ ದೃಷ್ಟಿಕೋನವನ್ನು ಉದಾಹರಿಸಿದರು.ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 08th, 01:00 pm
ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು
February 08th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.ಕೆಂಪು ಕೋಟೆಯಲ್ಲಿ ನಡೆದ “ಪರಾಕ್ರಮ್ ದಿವಸ್” ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ
January 23rd, 06:31 pm
ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಕಿಶನ್ ರೆಡ್ಡಿ ಜಿ, ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಶ್ರೀಮತಿ ಮೀನಾಕ್ಷಿ ಲೇಖಿ ಜಿ, ಶ್ರೀ ಅಜಯ್ ಭಟ್ ಜಿ, ಬ್ರಿಗೇಡಿಯರ್ ಆರ್. ಎಸ್. ಚಿಕಾರಾ ಜಿ, ಐ.ಎನ್.ಎ. ಮುಸ್ಸದ್ದಿ ಲೆಫ್ಟಿನೆಂಟ್ ಆರ್ ಮಾಧವನ್ ಜಿ, ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ!ದಿಲ್ಲಿಯ ಕೆಂಪು ಕೋಟೆಯಲ್ಲಿ ಪರಾಕ್ರಮ ದಿವಸ್ ಆಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 23rd, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ಕೆಂಪು ಕೋಟೆಯಲ್ಲಿ ನಡೆದ ಪರಾಕ್ರಮ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ರಾಷ್ಟ್ರದ ಶ್ರೀಮಂತ ವೈವಿಧ್ಯತೆಯನ್ನು ಪ್ರದರ್ಶಿಸುವ ಭಾರತ್ ಪರ್ವ್ ಗೆ ಅವರು ಚಾಲನೆ ನೀಡಿದರು. ನೇತಾಜಿ ಕುರಿತ ಛಾಯಾಚಿತ್ರಗಳು, ವರ್ಣಚಿತ್ರಗಳು, ಪುಸ್ತಕಗಳು ಮತ್ತು ಶಿಲ್ಪಗಳನ್ನು ಒಳಗೊಂಡ ರಾಷ್ಟ್ರೀಯ ಪತ್ರಾಗಾರದ ತಂತ್ರಜ್ಞಾನ ಆಧಾರಿತ ಸಂವಾದಾತ್ಮಕ ಪ್ರದರ್ಶನವನ್ನು ಪ್ರಧಾನಿ ವೀಕ್ಷಿಸಿದರು ಮತ್ತು ರಾಷ್ಟ್ರೀಯ ನಾಟಕ ಶಾಲೆ ಪ್ರಸ್ತುತಪಡಿಸಿದ ನೇತಾಜಿ ಅವರ ಜೀವನವನ್ನು ಕುರಿತ ಪ್ರೊಜೆಕ್ಷನ್ ಮ್ಯಾಪಿಂಗ್ ನೊಂದಿಗೆ ಸಂಯೋಜಿಸಿ ಮಾಡಿದ ನಾಟಕಕ್ಕೆ ಸಾಕ್ಷಿಯಾದರು. ಐಎನ್ಎ ನಿವೃತ್ತ ಲೆಫ್ಟಿನೆಂಟ್ ಆರ್.ಮಾಧವನ್ ಅವರನ್ನು ಪ್ರಧಾನ ಮಂತ್ರಿ ಸನ್ಮಾನಿಸಿದರು. ಮಾಧವನ್ ಅವರು ಬದುಕಿರುವ ಏಕೈಕ ಐ.ಎನ್.ಎ. ಹಿರಿಯರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಗಣ್ಯರ ಕೊಡುಗೆಯನ್ನು ಗೌರವಿಸುವ ಪ್ರಧಾನ ಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, 2021 ರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ್ ಆಚರಿಸಲಾಗುತ್ತಿದೆ.Campaign of Viksit Bharat is getting new energy from Ayodhya: PM Modi
December 30th, 02:15 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.PM inaugurates, dedicates to nation and lays the foundation stone of multiple development projects worth more than Rs 15,700 crore
December 30th, 02:00 pm
PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.