ಪ್ರಧಾನಮಂತ್ರಿ ಅವರನ್ನು ಭೇಟಿಯಾದ ನೆದರ್‌ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ
June 25th, 10:40 pm
ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿಗಳ ಆರ್ಥಿಕ ಆರೋಗ್ಯದ ವಿಶೇಷ ವಕೀಲರೂ ಆಗಿರುವ ನೆದರ್‌ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ನೇತೃತ್ವದ ಕ್ರಾಂತಿಯು ಹಣಕಾಸು ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಕುರಿತು ನಾವು ಚರ್ಚಿಸಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಪ್ರಪಂಚದಾದ್ಯಂತದ ಪಾಲುದಾರ ರಾಷ್ಟ್ರಗಳೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳುವ ಭಾರತದ ಬದ್ಧತೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್‌ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್‌ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಅವರ ಜೊತೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ
May 17th, 02:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರೊಂದಿಗೆ ಹೇಗ್ ನಲ್ಲಿರುವ ಡಚ್ ಪ್ರಧಾನಮಂತ್ರಿಯವರ ಅಧಿಕೃತ ನಿವಾಸದಲ್ಲಿ (ಕ್ಯಾಟ್ಶುಯಿಸ್) ಅಧಿಕೃತ ಮಾತುಕತೆ ನಡೆಸಿದರು.ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ರಾಬ್ ಜೆಟ್ಟನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
May 16th, 11:58 pm
ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸುಮಾರು 1 ದಶಕದ ನಂತರ ನೆದರ್‌ಲ್ಯಾಂಡ್ಸ್ ಗೆ ಭೇಟಿ ನೀಡಿರುವುದು ನನಗೆ ಸಂತೋಷ ತಂದಿದೆ. ಕಳೆದ 10 ವರ್ಷಗಳಲ್ಲಿ ಭಾರತ- ನೆದರ್‌ಲ್ಯಾಂಡ್ಸ್ ಪಾಲುದಾರಿಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ.ಎಎಸ್ಎಂಎಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ನಡುವಿನ ಸೆಮಿಕಂಡಕ್ಟರ್ ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭಕ್ಕೆ ಪ್ರಧಾನಮಂತ್ರಿ ಅವರು ಸಾಕ್ಷಿಯಾದರು
May 16th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೆದರ್ಲ್ಯಾಂಡ್ಸ್ ದೇಶದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರೋಬ್ ಜೆಟ್ಟೆನ್ ಅವರೊಂದಿಗೆ ಇಂದು ಗುಜರಾತ್ನ ಧೋಲೇರಾದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಬೆಂಬಲ ನೀಡಲು ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಎಎಸ್ಎಂಎಲ್ ನಡುವೆ ನಡೆದ ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆಗೆ ಸಾಕ್ಷಿಯಾದರು.ಚೋಳರ ತಾಮ್ರದ ಫಲಕಗಳ ಮರುಸ್ಥಾಪನೆ
May 16th, 10:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ಲೆಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರಾಬ್ ಜೆಟ್ಟನ್ ಅವರ ಉಪಸ್ಥಿತಿಯಲ್ಲಿ, ಲೈಡನ್ ವಿಶ್ವವಿದ್ಯಾಲಯದ ಗ್ರಂಥಾಲಯವು ಇಂದು 11ನೇ ಶತಮಾನದ ಚೋಳ ತಾಮ್ರದ ಫಲಕಗಳನ್ನು ಭಾರತ ಸರ್ಕಾರಕ್ಕೆ ಮರುಸ್ಥಾಪಿಸಿದೆ.ನೆದರ್‌ಲ್ಯಾಂಡ್ಸ್‌ನಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 10:00 pm
ವಿಶ್ವದ ಕೆಲವು ಅತ್ಯಂತ ನವೀನ ಕಂಪನಿಗಳ ನಾಯಕರ ಜತೆ ಇಂದು ನಾನು ಇಲ್ಲಿರುವುದು ನನಗೆ ತುಂಬಾ ಸಂತೋಷ ತಂದಿದೆ. ಇಂದು 300ಕ್ಕೂ ಹೆಚ್ಚು ಡಚ್ ಕಂಪನಿಗಳು ಭಾರತದ ಯಶೋಗಾಥೆಯ ಭಾಗವಾಗಿವೆ. ಭಾರತದ ಮೇಲಿನ ನಿಮ್ಮ ದೃಷ್ಟಿಕೋನ ಮತ್ತು ವಿಶ್ವಾಸದಿಂದಾಗಿ, ಯುರೋಪ್ ಪೈಕಿ ನೆದರ್‌ಲ್ಯಾಂಡ್ಸ್ ಭಾರತದ ಅತಿದೊಡ್ಡ ಹೂಡಿಕೆದಾರರಾಗಿ ಮತ್ತು 2ನೇ ಅತಿದೊಡ್ಡ ವ್ಯಾಪಾರ ಪಾಲುದಾರರಾಗಿ ಮಾರ್ಪಟ್ಟಿದೆ.ಪ್ರಧಾನಮಂತ್ರಿ ಅವರು ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು
May 16th, 08:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿ ಹೇಗ್ ನ ಪ್ಯಾಲೇಸ್ ಹೌಸ್ ಟೆನ್ ಬೋಷ್ನಲ್ಲಿ ನೆದರ್ ಲ್ಯಾಂಡ್ಸ್ ನ ಘನತೆವೆತ್ತ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಮತ್ತು ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದರು.ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು
May 15th, 11:35 pm
ಐದು ರಾಷ್ಟ್ರಗಳ ಪ್ರವಾಸದ ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್‌ಗೆ ಆಗಮಿಸಿದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
May 15th, 07:56 am
ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)
May 11th, 09:00 pm
ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.Prime Minister speaks with Prime Minister of Netherlands
March 30th, 09:34 pm
PM Modi spoke with the Netherlands PM Rob Jetten. The two leaders discussed ways to further strengthen India-Netherlands ties. The PM highlighted the potential of their partnership in multiple areas and reiterated the need for early restoration of peace and stability in the West Asia region.ನೆದರ್ ಲ್ಯಾಂಡ್ಸ್ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ರಾಬ್ ಜೆಟ್ಟನ್ ಅವರರನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 24th, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್ ಲ್ಯಾಂಡ್ಸ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ರಾಬ್ ಜೆಟ್ಟನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.Visit of H.E. Mr. Dick Schoof, Prime Minister of the Netherlands, to India
February 19th, 08:47 pm
PM Modi held a bilateral meeting with H.E. Mr. Dick Schoof, Prime Minister of the Netherlands. Prime Minister Schoof underscored the importance of the Summit and expressed confidence that the Summit Declaration will steer future policy discussions. Reviewing the bilateral relationship, both leaders welcomed the steady progress in the India-Netherlands partnership.ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
February 15th, 02:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ಅಧಿಕಾರ ವಹಿಸಿಕೊಂಡ ನೆದರ್ಲ್ಯಾಂಡ್ ಪ್ರಧಾನ ಮಂತ್ರಿಗೆ ಪ್ರಧಾನಿ ಮೋದಿ ಅಭಿನಂದನೆ
July 02nd, 08:22 pm
ನೆದರ್ಲ್ಯಾಂಡ್ ನ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕ್ ಸ್ಕೂಫ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.