ನಮೋ ಭಾರತ್ ರೈಲಿನಲ್ಲಿ, ಸಾಹಿಬಾಬಾದ್ ಆರ್‌ಆರ್‌ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್‌ಆರ್‌ಟಿಎಸ್ ನಿಲ್ದಾಣದ ವರೆಗೆ ಮಾಡಿದ ಪ್ರಯಾಣದ ಸಮಯದಲ್ಲಿ, ವಿದ್ಯಾರ್ಥಿಗಳು ಮತ್ತು ರೈಲು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂವಾದ

January 05th, 08:50 pm

ನಮ್ಮ ಮನದಲ್ಲಿ ಒಂದು ಗುರಿಯನ್ನಿಟ್ಟು, ಗಮ್ಯದ ಕಡೆಗೆ ಗಮನವ ಇಟ್ಟು

ನಮೋ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳು ಮತ್ತು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

January 05th, 08:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಮೋ ಭಾರತ್ ರೈಲಿನಲ್ಲಿ ಸಹಿಬಾಬಾದ್ ಆರ್ ಆರ್ ಟಿ ಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ ಆರ್ ಟಿ ಎಸ್ ನಿಲ್ದಾಣದವರೆಗೆ ಸಂಚರಿಸಿದರು. ಪ್ರಯಾಣದ ಸಂದರ್ಭದಲ್ಲಿ ಅವರು ಯುವ ಸ್ನೇಹಿತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಯುವಸಮೂಹ ಪ್ರಧಾನಿ ಅವರಿಗೆ ಹಲವು ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಉಡುಗೊರೆಯಾಗಿ ನೀಡಿದರು.

ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 05th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು.

ಜನವರಿ 5 ರಂದು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

January 04th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 5 ರಂದು ದೆಹಲಿಯಲ್ಲಿ ಸುಮಾರು ಸುಮಾರು 12,200 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ನಮೋ ಭಾರತ್ ರೈಲಿನಲ್ಲಿ ಬೆಳಗ್ಗೆ 11:15 ರ ಸುಮಾರಿಗೆ ಸಾಹಿಬಾಬಾದ್ RRTS ನಿಲ್ದಾಣದಿಂದ ನ್ಯೂ ಅಶೋಕ್ ನಗರ RRTS ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ.