ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬಹು ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 17th, 02:00 pm
ಇಂದು, ಮಾಲ್ಡಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಇನ್ನೂ ಹೆಚ್ಚಿನ ವೇಗವನ್ನು ಪಡೆದುಕೊಂಡಿದೆ. ಸ್ವಲ್ಪ ಸಮಯದ ಹಿಂದೆ, ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸಲಾಯಿತು ಅಥವಾ ಅವುಗಳಿಗೆ ಶಂಕುಸ್ಥಾಪನೆ ಮಾಡಲಾಯಿತು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಯೋಜನೆಗಳು ಇಲ್ಲಿನ ಜನರಿಗೆ ಪ್ರಯಾಣವನ್ನು ಸುಲಭಗೊಳಿಸುತ್ತವೆ ಮತ್ತು ವ್ಯಾಪಾರ ಮತ್ತು ವ್ಯವಹಾರವನ್ನು ಸರಳಗೊಳಿಸುತ್ತವೆ. ರೈಲು ನಿರ್ವಹಣೆಗಾಗಿ ಇಲ್ಲಿ ರಚಿಸಲಾದ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ₹3,250 ಕೋಟಿಗೂ ಅಧಿಕ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
January 17th, 01:45 pm
ಪಶ್ಚಿಮ ಬಂಗಾಳ ಮತ್ತು ಈಶಾನ್ಯ ವಲಯದಲ್ಲಿ ಸಂಪರ್ಕವನ್ನು ಬಲಪಡಿಸುವ ಮತ್ತು ಅಭಿವೃದ್ಧಿಯನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ₹3,250 ಕೋಟಿ ಮೌಲ್ಯದ ವಿವಿಧ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಇಂದು ಮಾಲ್ದಾದಿಂದ ಪಶ್ಚಿಮ ಬಂಗಾಳದ ಪ್ರಗತಿಯನ್ನು ವೇಗಗೊಳಿಸುವ ಅಭಿಯಾನವು ಮತ್ತಷ್ಟು ವೇಗವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಇದೀಗ ಉದ್ಘಾಟಿಸಲಾಗಿದೆ ಮತ್ತು ದೇಶಕ್ಕೆ ಸಮರ್ಪಿಸಲಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳಕ್ಕೆ ಹೊಸ ರೈಲು ಸೇವೆಗಳನ್ನು ಪರಿಚಯಿಸಲಾಗಿದೆ ಎಂದು ಹೇಳಿದ ಪ್ರಧಾನಿಯವರು, ಈ ಯೋಜನೆಗಳು ಜನರ ಪ್ರಯಾಣವನ್ನು ಸುಲಭಗೊಳಿಸುವುದಲ್ಲದೆ ವ್ಯಾಪಾರ ಮತ್ತು ವಾಣಿಜ್ಯಕ್ಕೂ ಅನುಕೂಲ ಮಾಡಿಕೊಡುತ್ತವೆ ಎಂದು ತಿಳಿಸಿದರು. ಇಲ್ಲಿ ಸ್ಥಾಪಿಸಲಾದ ಹೊಸ ರೈಲು ನಿರ್ವಹಣಾ ಸೌಲಭ್ಯಗಳು ಬಂಗಾಳದ ಯುವಕರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತವೆ ಎಂದು ಅವರು ಉಲ್ಲೇಖಿಸಿದರು.ಜನವರಿ 17-18 ರಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಭೇಟಿ
January 16th, 01:55 pm
ಜನವರಿ 17 ರಂದು ಮಧ್ಯಾಹ್ನ 12:45 ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಮಾಲ್ಡಾಕ್ಕೆ ಭೇಟಿ ನೀಡಿ ಮಾಲ್ಡಾ ಪಟ್ಟಣ ರೈಲು ನಿಲ್ದಾಣದಲ್ಲಿ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಮಾಲ್ಡಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ₹3,250 ಕೋಟಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 20th, 03:20 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು
December 20th, 03:10 pm
ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 574 ಕಿ.ಮೀ.ಗಳಷ್ಟು ಹೆಚ್ಚಿಸುವ ನಾಲ್ಕು ಬಹು-ಮಾರ್ಗ ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 13 ಜಿಲ್ಲೆಗಳನ್ನು ಒಳಗೊಂಡಿವೆ
July 31st, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಇಂದು ರೈಲ್ವೆ ಸಚಿವಾಲಯದ 4 (ನಾಲ್ಕು) ಯೋಜನೆಗಳಿಗೆ ಅಂದಾಜು ರೂ. 11,169 ಕೋಟಿಗಳ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:Today’s projects are one more step towards Viksit West Bengal: PM Modi
March 09th, 04:10 pm
Prime Minister Narendra Modi addressed ‘Viksit Bharat Viksit West Bengal’ program in Siliguri, West Bengal. He inaugurated and dedicated to the nation multiple projects of rail and road sector worth more than Rs 4500 crores in West Bengal. Speaking on the occasion, the Prime Minister expressed happiness to be present in the beautiful land of tea. He called today’s projects another step towards Viksit West Bengal. ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
March 09th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ 'ವಿಕಸಿತ ಭಾರತ, ವಿಕಸಿತ ಪಶ್ಚಿಮ ಬಂಗಾಳ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ 4500 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ರೈಲು ಹಾಗೂ ರಸ್ತೆ ವಲಯದ ಅನೇಕ ಯೋಜನೆಗಳನ್ನು ಅವರು ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು.ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮೇ 29 ರಂದು ಅಸ್ಸಾಂನಿಂದ ಪ್ರಧಾನಮಂತ್ರಿ ಅವರು ಚಾಲನೆ ನೀಡಲಿದ್ದಾರೆ
May 28th, 05:35 pm
ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 29 ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೊ ಸಮಾವೇಶ ಮೂಲಕ ಚಾಲನೆ ನೀಡಲಿದ್ದಾರೆ.ವೀಡಿಯೊ ಕಾನ್ಫರೆನ್ಸಿಂಗ್ ಮುಖೇನ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಫ್ಲ್ಯಾಗ್‌ಆಫ್ ಮತ್ತು ಕೋಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟ್ಲಾ ವಿಭಾಗದ ಉದ್ಘಾಟನೆಯ ಪ್ರಧಾನಮಂತ್ರಿಯವರ ಭಾಷಣದ ಪಠ್ಯ..
December 30th, 11:50 am
ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ.ಆನಂದ ಬೋಸ್ ಅವರೇ, ಮುಖ್ಯಮಂತ್ರಿ ಗೌರವಾನ್ವಿತ ಮಮತಾ ಬ್ಯಾನರ್ಜಿ ಅವರೇ ಹಾಗೂ ನನ್ನ ಕೇಂದ್ರ ಸಂಪುಟದ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಸುಭಾಷ್ ಸರ್ಕಾರ್, ನಿಸಿತ್ ಪ್ರಮಾಣಿಕ್, ಜಾನ್ ಬಾರ್ಲಾ, ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸದ ಪ್ರಸೂನ್, ವೇದಿಕೆಯ ಮೇಲೆ ಕುಳಿತಿರುವ ಇತರ ಸಹೋದ್ಯೋಗಿಗಳೇ.. ಮಹಿಳೆಯರೇ ಮತ್ತು ಪುರುಷರೇ..ಈ ದೇಶದ ಸಜ್ಜನರೇ...PM flags off Vande Bharat Express connecting Howrah to New Jalpaiguri via video conferencing
December 30th, 11:25 am
PM Modi flagged off the Vande Bharat Express, connecting Howrah to New Jalpaiguri as well as inaugurated other metro and railway projects in West Bengal via video conferencing. The PM linked reforms and development of Indian Railways with the development of the country. He said that the central government was making record investments in the modern railway infrastructure.ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
December 29th, 12:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಡಿಸೆಂಬರ್ 30 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಪ್ರಧಾನಮಂತ್ರಿ ಅವರು ಹೌರಾ ರೈಲ್ವೆ ನಿಲ್ದಾಣವನ್ನು ತಲುಪಲಿದ್ದು, ಅಲ್ಲಿ ಅವರು ಹೌರಾದಿಂದ ನ್ಯೂ ಜಲಪಾಯಿಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವರು. ಅವರು ಕೋಲ್ಕತಾ ಮೆಟ್ರೋದ ನೇರಳೆ ಮಾರ್ಗದ ಜೋಕಾ-ತಾರತಲಾ ವಿಸ್ತರಣೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಧಾನಮಂತ್ರಿ ಅವರು ಐಎನ್ಎಸ್ ನೇತಾಜಿ ಸುಭಾಸ್ ತಲುಪಿ, ನೇತಾಜಿ ಸುಭಾಷ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ ಮತ್ತು ಡಾ. ಶ್ಯಾಮ ಪ್ರಸಾದ್ ಮುಖರ್ಜಿ - ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ (ಡಿಎಸ್ ಪಿಎಂ - ಎನ್ಐಡಬ್ಲ್ಯುಎಎಸ್) ಅನ್ನು ಉದ್ಘಾಟಿಸಲಿದ್ದಾರೆ. ಅವರು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಅಭಿಯಾನದ ಅಡಿಯಲ್ಲಿ ಪಶ್ಚಿಮ ಬಂಗಾಳಕ್ಕಾಗಿ ಅನೇಕ ಒಳಚರಂಡಿ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 12.25ರ ಸುಮಾರಿಗೆ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಗಂಗಾ ಮಂಡಳಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.