ಪ್ರಧಾನಮಂತ್ರಿ ಅವರಿಂದ ನವದೆಹಲಿಯಲ್ಲಿ ಆಗಸ್ಟ್ 7ರಂದು ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

August 06th, 12:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 7 ರಂದು ಬೆಳಿಗ್ಗೆ 9 ಗಂಟೆಗೆ ನವದೆಹಲಿಯ ಐಸಿಎಆರ್ ಪುಸಾದಲ್ಲಿ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

Democracy is not any agreement, it is about participation: PM Modi

April 21st, 11:01 pm

Democracy is not any agreement, it is about participation: PM Modi

ನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

April 21st, 05:45 pm

ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.

ನಾಳೆ ಸಾರ್ವಜನಿಕ ಆಡಳಿತದಉತ್ಕೃಷ್ಟತಾ ಸಾಧನೆ ಪ್ರಶಸ್ತಿ ಪ್ರದಾನ ಮಾಡಿ, ನಾಗರಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ

April 20th, 03:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 21 ರಂದು ಅಂದರೆ ನಾಳೆ ರಾಷ್ಟ್ರದ ರಾಜಧಾನಿ ದೆಹಲಿಯ ವಿಜ್ಞಾನ ಭವನದಲ್ಲಿ ಜಿಲ್ಲೆಗಳು/ಜಾರಿ ಘಟಕಗಳು ಮತ್ತು ಇತರ ಕೇಂದ್ರ /ರಾಜ್ಯ ಸರ್ಕಾರದ ಸಂಸ್ಥೆಗಳ ಗುರುತಿಸಲಾದ ಕಾರ್ಯಕ್ರಮಗಳು ಮತ್ತು ನಾವಿನ್ಯತೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡಿದ ಸಾರ್ವಜನಿಕ ಆಡಳಿತಕ್ಕೆ ಉತ್ಕೃಷ್ಟತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಸಾರ್ವಜನಿಕ ಸೇವಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.