ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.