ಪ್ರಜ್ಞಾನಂದ ಅವರ ಮಹತ್ವದ ಸಾಧನೆಗೆ ಪ್ರಧಾನಮಂತ್ರಿ ಅಭಿನಂದನೆ

June 06th, 02:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಮನಾರ್ಹ ಸಾಧನೆ ಮಾಡಿರುವ ಪ್ರಜ್ಞಾನಂದ ಅವರನ್ನು ಇಂದು ಅಭಿನಂದಿಸಿದ್ದಾರೆ. ಇದು ನಿಜಕ್ಕೂ ಅವರ ನಿರಂತರ ಶ್ರೇಷ್ಠತೆಯನ್ನು ತಿಳಿಸುವ ಅದ್ಭುತ ಮೈಲಿಗಲ್ಲು ಎಂದು ಪ್ರಧಾನಮಂತ್ರಿ ಬಣ್ಣಿಸಿದ್ದಾರೆ. ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 23rd, 11:15 am

ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.

ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 23rd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದಲ್ಲಿ ಫಿನ್ ಲ್ಯಾಂಡ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿಯವರ ಸಭೆ

May 19th, 06:42 pm

2026ರ ಮೇ 19 ರಂದು ಓಸ್ಲೋದಲ್ಲಿ ನಡೆದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಸಂದರ್ಭದ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿನ್ ಲ್ಯಾಂಡ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಪೆಟ್ಟೇರಿ ಓರ್ಪೊ ಅವರನ್ನು ಭೇಟಿಯಾದರು.

ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 18th, 11:49 pm

ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.

ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

May 18th, 08:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು

May 18th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ.

May 18th, 07:36 pm

ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ. ಓಸ್ಲೋದ ರಾಯಲ್ ಪ್ಯಾಲೇಸ್‌ನಲ್ಲಿ ನಾರ್ವೆಯ ಘನತೆವೆತ್ತ ರಾಜ ಹೆರಾಲ್ಡ್ V ಅವರೊಂದಿಗೆ ಪ್ರಧಾನಿ ಮೋದಿ ಸಮಾಲೋಚಿಸಿದರು, ಅಲ್ಲಿ ಇಬ್ಬರೂ ಭಾರತ-ನಾರ್ವೆ ಪಾಲುದಾರಿಕೆ ಮತ್ತು ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ಹೊಸ ತಂತ್ರಜ್ಞಾನಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಸಭೆಯ ನಂತರ ಪ್ರಧಾನಿ ಮೋದಿ ಅವರ ಗೌರವಾರ್ಥವಾಗಿ ಭೋಜನ ಕೂಟವನ್ನು ಆಯೋಜಿಸಲಾಗಿತ್ತು.

ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಯ ಗ್ರ್ಯಾಂಡ್ ಕ್ರಾಸ್ ಪದಕವನ್ನು ಸ್ವೀಕರಿಸಿದ ಪ್ರಧಾನಮಂತ್ರಿ

May 18th, 07:35 pm

ಓಸ್ಲೋದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ನಾರ್ವೆಯ ಮಹಾರಾಜ ಘನತೆವೆತ್ತ 5ನೇ ಹೆರಾಲ್ಡ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್ ಆಫ್ ಮೆರಿಟ್' ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯು, ವಿದೇಶಿ ಸರ್ಕಾರದ ಮುಖ್ಯಸ್ಥರಿಗೆ ನೀಡಲಾಗುವ ನಾರ್ವೆಯ ಅತ್ಯುನ್ನತ ಗೌರವವಾಗಿದೆ ಮತ್ತು ನಾರ್ವೆ ಮತ್ತು ಮಾನವಕುಲದ ಹಿತಾಸಕ್ತಿಗಾಗಿ ಅತ್ಯುತ್ತಮ ಸೇವೆಯನ್ನು ಗುರುತಿಸಿ ಇದನ್ನು ನಾರ್ವೆ ಸರ್ಕಾರದಿಂದ ನೀಡಲಾಗುತ್ತದೆ.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

PM Modi arrives in Norway

May 18th, 01:00 pm

PM Modi arrived in Oslo, Norway, on a historic visit marking the first Prime Ministerial visit from India to Norway in over four decades. He was warmly received by PM Jonas Gahr Støre upon his arrival.

ಯುಎಇ, ನೆದರ್‌ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ

May 15th, 07:56 am

ಪ್ರಧಾನಿ ಮೋದಿ ಅವರು 2026 ರ ಮೇ 15 ರಿಂದ 20 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಈ ಭೇಟಿಯ ಸಮಯದಲ್ಲಿ ಅವರು ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದಾರೆ ಮತ್ತು ಪ್ರಮುಖ ವಲಯಗಳಲ್ಲಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳನ್ನು ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ ಕೈಗಾರಿಕೆಗಾಗಿ ಯುರೋಪಿಯನ್ ದುಂಡು ಮೇಜಿನ ಸಭೆಯಲ್ಲಿ ಮತ್ತು ಓಸ್ಲೋದಲ್ಲಿ ನಡೆಯುವ 3 ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುವುದು ಈ ಭೇಟಿಯ ಪ್ರಮುಖ ಅಂಶಗಳಾಗಿವೆ.

ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)

May 11th, 09:00 pm

ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.

ಮರು ಆಯ್ಕೆಯಾದ ನಾರ್ವೇಜಿಯನ್ ಪ್ರಧಾನಮಂತ್ರಿ ಜೋನಾಸ್ ಗಹರ್ ಸ್ಟೋರೆ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

September 10th, 06:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾರ್ವೆಯ ಪ್ರಧಾನಮಂತ್ರಿಗಳಾಗಿ ಮರು ಆಯ್ಕೆಯಾದ ಜೋನಾಸ್ ಗಹರ್ ಸ್ಟೋರೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ದೇಶದ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು

April 15th, 06:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳು ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ

November 19th, 05:44 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ನಾರ್ವೆಯ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಯೋನಸ್‌ ‌ಗಾರ್‌ ಸ್ತೋರಾ ಅವರ ನಡುವೆ ದೂರವಾಣಿ ಸಂಭಾಷಣೆ

September 09th, 07:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾರ್ವೆಯ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಯೋನಸ್‌ ಗಾರ್‌ ಸ್ತೋರ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

2ನೇ ಭಾರತ-ನಾರ್ಡಿಕ್ ಶೃಂಗಸಭೆ

May 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ನಾರ್ವೆ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಿ

May 04th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೋಪನ್ ಹೇಗನ್‌ನಲ್ಲಿ 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ವೇಳೆ ನಾರ್ವೆಯ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಜೋನಾಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು. ಪ್ರಧಾನ ಮಂತ್ರಿ ಸ್ಟೋರ್ ಅವರು 2021ರ ಅಕ್ಟೋಬರ್ ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.

ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಜೋನಾಸ್ ಗರ್ ಸ್ಟೋರ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

October 16th, 09:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಜೋನಾಸ್ ಗರ್ ಸ್ಟೋರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.