ಎನ್‌.ಎಸ್‌.ಜಿ ಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಎನ್‌.ಎಸ್‌.ಜಿ ಸಿಬ್ಬಂದಿಗೆ ಪ್ರಧಾನಮಂತ್ರಿ ಶುಭಾಶಯ

October 16th, 09:09 pm

ಇಂದು ರಾಷ್ಟ್ರೀಯ ಭದ್ರತಾ ಪಡೆ(NSG) ಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಎನ್‌.ಎಸ್‌.ಜಿ ಸಿಬ್ಬಂದಿಯ ಅಪ್ರತಿಮ ಶೌರ್ಯ ಮತ್ತು ಸಮರ್ಪಣಾ ಮನೋಭಾವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. “ಭಯೋತ್ಪಾದನೆಯ ಭೀತಿಯಿಂದ ರಾಷ್ಟ್ರವನ್ನು ರಕ್ಷಿಸುವಲ್ಲಿ, ನಮ್ಮ ನಾಗರಿಕರ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ರಾಷ್ಟ್ರೀಯ ಆಸ್ತಿಗಳನ್ನು ರಕ್ಷಿಸುವಲ್ಲಿ ಎನ್‌.ಎಸ್‌.ಜಿ ಪ್ರಮುಖ ಪಾತ್ರ ವಹಿಸಿದೆ”, ಎಂದು ಶ್ರೀ ಮೋದಿ ಹೇಳಿದ್ದಾರೆ.

ಎನ್ ಎಸ್ ಜಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಎನ್ ಎಸ್ ಜಿ ಸಿಬ್ಬಂದಿಗೆ ಪ್ರಧಾನಮಂತ್ರಿ ನಮನ

October 16th, 11:58 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎನ್ ಎಸ್ ಜಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಎನ್ ಎಸ್ ಜಿ ಸಿಬ್ಬಂದಿಯ ಅಚಲ ಸಮರ್ಪಣೆ, ಧೈರ್ಯ ಮತ್ತು ದೃಢನಿಶ್ಚಯವನ್ನು ಶ್ಲಾಘಿಸಿದ್ದಾರೆ.