ಎಫ್‌ಎಒ ಅಗ್ರಿಕೋಲಾ ಪದಕ ಸ್ವೀಕಾರ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 20th, 11:00 pm
ಭಾರತದಲ್ಲಿ ಕೃಷಿಯು ಜೀವನದ ಆಧಾರವಾಗಿದೆ. ಇದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ, ನಮ್ಮ ಮೂಲ ಮೌಲ್ಯಗಳ ಪ್ರತಿಬಿಂಬವಾಗಿದೆ. ನಮ್ಮ ಸಂಪ್ರದಾಯದಲ್ಲಿ, ಭೂಮಿಯನ್ನು ತಾಯಿ ಎಂದು ಪೂಜಿಸಲಾಗುತ್ತದೆ, ರೈತನನ್ನು ಮಣ್ಣಿನ ಮಗ ಎಂದು ಕರೆಯಲಾಗುತ್ತದೆ. ಸಾವಿರಾರು ವರ್ಷಗಳ ಪರಂಪರೆಯಲ್ಲಿ ಬೇರೂರಿರುವ ಈ ಕಾಲಾತೀತ ಮೌಲ್ಯಗಳು ಇಂದಿಗೂ ನಮ್ಮ ಪ್ರಯತ್ನಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.ರೋಮ್ ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ವತಿಯಿಂದ ಪ್ರಧಾನಮಂತ್ರಿ ಅವರಿಗೆ ಅಗ್ರಿಕೋಲಾ ಪದಕ ಪ್ರದಾನ
May 20th, 10:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಂದು ರೋಮ್ನಲ್ಲಿರುವ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್ ಎ ಒ) ಯ ಪ್ರಧಾನ ಕಚೇರಿಯಲ್ಲಿ 2026 ರ ಪ್ರತಿಷ್ಠಿತ 'ಅಗ್ರಿಕೋಲಾ ಪದಕ'ವನ್ನು ನೀಡಿ ಗೌರವಿಸಲಾಯಿತು. ಭಾರತದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಆಹಾರ ಭದ್ರತೆ, ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರು ತೋರಿದ ಅಸಾಧಾರಣ ನಾಯಕತ್ವವನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ಪ್ರಧಾನಿ ಮೋದಿ ಪ್ರಮುಖ ಕಾರ್ಯಕ್ರಮಗಳಿಗಾಗಿ ಇಟಲಿಗೆ ಆಗಮಿಸಿದ್ದಾರೆ
May 20th, 12:30 am
ಪ್ರಧಾನಿಯವರು ಸ್ವಲ್ಪ ಸಮಯದ ಹಿಂದೆ ಇಟಲಿಯ ರೋಮ್‌ಗೆ ಆಗಮಿಸಿದರು. ಅವರು ಇಟಾಲಿಯನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸೆರ್ಗಿಯೊ ಮ್ಯಾಟರೆಲ್ಲಾ ಅವರನ್ನು ಭೇಟಿ ಮಾಡಲಿದ್ದಾರೆ ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತು ಚರ್ಚೆಗಳೊಂದಿಗೆ ಪ್ರಧಾನಿ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.ನಾರ್ವೆ-ಭಾರತ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 11:49 pm
ಇದು ಕೇವಲ ಸಾಧ್ಯತೆಗಳ ಪಾಲುದಾರಿಕೆಯಲ್ಲ, ಇದು ಸಾಬೀತಾಗಿರುವ ಪಾಲುದಾರಿಕೆಯಾಗಿದೆ. ಇಂದು ಆಹಾರ, ಇಂಧನ ಮತ್ತು ರಸಗೊಬ್ಬರ ಭದ್ರತೆಯು ಜಾಗತಿಕ ಸವಾಲುಗಳಾಗಿ ಮಾರ್ಪಟ್ಟಿರುವಾಗ, ಭಾರತ ಮತ್ತು ನಾರ್ವೆ ಅವುಗಳನ್ನು ಪರಿಹರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ. ಅದು ಭಾರತದ ಆಹಾರ ವಲಯದಲ್ಲಿ ಓರ್ಕ್ಲಾದ ಹೂಡಿಕೆಗಳಾಗಲಿ, ಈಕ್ವಿನಾರ್ ಭಾರತಕ್ಕೆ ಮಾಡುವ ಎಲ್ಪಿಜಿ ಮತ್ತು ಎಲ್ಎನ್ ಜಿ ಪೂರೈಕೆಯಾಗಿರಲಿ ಅಥವಾ ಭಾರತದ ರಸಗೊಬ್ಬರ ವಲಯಕ್ಕೆ ಯಾರಾ ಇಂಟರ್ ನ್ಯಾಷನಲ್‌ನ ಕೊಡುಗೆಯಾಗಿರಲಿ - ಈ ಸಹಭಾಗಿತ್ವಗಳು ನಮ್ಮ ಪಾಲುದಾರಿಕೆಯನ್ನು ಬಲಪಡಿಸುತ್ತಿವೆ.ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
May 18th, 08:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಡೆದ ಭಾರತ-ನಾರ್ವೆ ಉದ್ಯಮ ವ್ಯವಹಾರ ಮತ್ತು ಸಂಶೋಧನಾ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಗೌರವಾನ್ವಿತ ರಾಜಕುಮಾರ ಹಾಕನ್ ಮತ್ತು ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಜೋನಾಸ್ ಗಹರ್ ಸ್ಟೋರೆ ಕೂಡ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್‌ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 17th, 12:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್‌ಬರ್ಗ್‌ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್‌ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 13th, 11:15 am
ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 13th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 28th, 12:00 pm
ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ
February 28th, 11:30 am
ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 10:00 am
ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ
February 19th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2
November 22nd, 09:57 pm
ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.