ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ

September 26th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

ಭಾರತ ಸಿಂಗಾಪುರ ಜಂಟಿ ಹೇಳಿಕೆ

September 04th, 08:04 pm

ಸಿಂಗಾಪುರ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಸಿಂಗಾಪುರ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಾರ್ಗಸೂಚಿಯ ಕುರಿತು ಜಂಟಿ ಹೇಳಿಕೆ

ಸಿಂಗಾಪುರದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 04th, 12:45 pm

ಪ್ರಧಾನಮಂತ್ರಿ ವಾಂಗ್ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿಯಲ್ಲಿ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗುತ್ತದೆ. ಈ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ 60 ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಭೇಟಿ ವಿಶೇಷವಾಗಿ ಸ್ಮರಣೀಯವಾಗಿದೆ.

‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ

August 30th, 08:00 am

ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.

Cabinet approves 6-Lane Ring Road project in Odisha worth Rs.8307.74 crore

August 19th, 03:17 pm

The Cabinet Committee on Economic Affairs chaired by PM Modi has approved construction of 6-Lane Access-Controlled Capital Region Ring Road project in Odisha worth Rs.8307.74 crore. It will play a pivotal role in regional economic growth, strengthening connectivity between major religious and economic centers and opening new avenues for trade and industrial development.

Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore

August 12th, 03:18 pm

The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.

ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 574 ಕಿ.ಮೀ.ಗಳಷ್ಟು ಹೆಚ್ಚಿಸುವ ನಾಲ್ಕು ಬಹು-ಮಾರ್ಗ ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಯೋಜನೆಗಳು ಮಹಾರಾಷ್ಟ್ರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ ಮತ್ತು ಜಾರ್ಖಂಡ್ ರಾಜ್ಯಗಳಾದ್ಯಂತ 13 ಜಿಲ್ಲೆಗಳನ್ನು ಒಳಗೊಂಡಿವೆ

July 31st, 03:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಇಂದು ರೈಲ್ವೆ ಸಚಿವಾಲಯದ 4 (ನಾಲ್ಕು) ಯೋಜನೆಗಳಿಗೆ ಅಂದಾಜು ರೂ. 11,169 ಕೋಟಿಗಳ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

TMC hatao, Bangla bachao: PM Modi in Durgapur, West Bengal

July 18th, 05:00 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

PM Modi calls for a Viksit Bengal at Durgapur rally!

July 18th, 04:58 pm

In a stirring address to an enthusiastic crowd in Durgapur, West Bengal, PM Modi reignited the dream of a Viksit Bengal and assured the people that change is not just possible but inevitable. From invoking Bengal’s proud industrial and cultural legacy to exposing TMC’s failures, PM Modi presented a clear roadmap for restoring the state’s glory and integrating it into the journey of Viksit Bharat. He reaffirmed his unwavering commitment with a resounding assurance: “Viksit Bangla, Modi ki Guarantee!”

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಒಡಿಶಾ ಮುಖ್ಯಮಂತ್ರಿ

July 12th, 02:31 pm

ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಜಾಗತಿಕ ಕಛ್ಚಿ ಸಮುದಾಯಕ್ಕೆ ಆಷಾಢ ಬಿಜ್ ಶುಭಾಶಯ ಕೋರಿದ ಪ್ರಧಾನಮಂತ್ರಿ

June 27th, 09:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಛ್ಚಿ ಹೊಸ ವರ್ಷದ ಆಷಾಢ ಬಿಜ್ ನ ಶುಭ ಸಂದರ್ಭದಲ್ಲಿ ವಿಶ್ವಾದ್ಯಂತ ಇರುವ ಕಛ್ಚಿ ಸಮುದಾಯಕ್ಕೆ ಶುಭ ಕೋರಿದ್ದಾರೆ.

ಒಡಿಶಾ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 04:16 pm

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿಬಾಬು ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜುವಾಲ್ ಓರಂ ಜಿ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಮತ್ತು ಶ್ರೀ ಅಶ್ವಿನಿ ವೈಷ್ಣವ್ ಜಿ, ಒಡಿಶಾದ ಉಪ ಮುಖ್ಯಮಂತ್ರಿಗಳಾದ ಶ್ರೀ ಕನಕ್ ವರ್ಧನ್ ಸಿಂಗ್ ದೇವ್ ಜಿ ಮತ್ತು ಶ್ರೀಮತಿ ಪ್ರವತಿ ಪರಿದಾ ಜಿ, ರಾಜ್ಯ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ, ವಿಧಾನಸಭಾ ಸದಸ್ಯರೆ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ 18,600 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭುವನೇಶ್ವರದಲ್ಲಿ ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ, ಕುಡಿಯುವ ನೀರು, ನೀರಾವರಿ, ಕೃಷಿ ಮೂಲಸೌಕರ್ಯ, ಆರೋಗ್ಯ ಮೂಲಸೌಕರ್ಯ, ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳ ವಿಭಾಗಗಳು ಮತ್ತು ಹೊಸ ರೈಲ್ವೆ ಮಾರ್ಗ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡ 18,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.

ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್‌ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.