Prime Minister Speaks with Sultan of Oman
March 19th, 04:39 pm
PM Modi spoke with Sultan Haitham bin Tariq of Oman and conveyed advance Eid greetings to the people of Oman. During the discussion, the PM reiterated India’s condemnation of the attack on Oman and expressed appreciation for Oman’s efforts to facilitate the safe return of Indians. Both leaders agreed on the need to restore peace and stability in West Asia and affirmed that India and Oman stand for safe and free navigation through the Strait of Hormuz.ಒಮನ್ ಘನತೆವೆತ್ತ ಸುಲ್ತಾನ್ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಮಂತ್ರಿ
March 03rd, 07:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘನತೆವೆತ್ತ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಮಾತನಾಡಿದರು ಮತ್ತು ಪಶ್ಚಿಮ ಏಷ್ಯಾದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 25th, 08:20 pm
ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್) ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 25th, 08:00 pm
ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ
February 22nd, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.ಪೋರ್ ಬಂದರ್ ನಿಂದ ಒಮಾನ್ ನ ಮಸ್ಕಟ್ ಗೆ ತನ್ನ ಚೊಚ್ಚಲ ಪ್ರಯಾಣವನ್ನು ಪ್ರಾರಂಭಿಸಿದ ಪ್ರಾಚೀನ ಭಾರತೀಯ ಹೊಲಿಗೆ ಹಡಗು ತಂತ್ರವನ್ನು ಬಳಸಿಕೊಂಡು ನಿರ್ಮಿಸಲಾದ ಐಎನ್ಎಸ್ ವಿ ಕೌಂಡಿನ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
December 29th, 05:57 pm
ಪೋರ್ ಬಂದರ್ ನಿಂದ ಒಮಾನ್ ನ ಮಸ್ಕಟ್ ಗೆ ತನ್ನ ಚೊಚ್ಚಲ ಪ್ರಯಾಣವನ್ನು ಆರಂಭಿಸುವ ಐಎನ್ ಎಸ್ ವಿ ಕೌಂಡಿನ್ಯಕ್ಕೆ ಜೀವ ತುಂಬುವಲ್ಲಿ ಸಮರ್ಪಿತ ಪ್ರಯತ್ನಗಳಿಗಾಗಿ ವಿನ್ಯಾಸಕರು, ಕುಶಲಕರ್ಮಿಗಳು, ಹಡಗು ನಿರ್ಮಾಣಕಾರರು ಮತ್ತು ಭಾರತೀಯ ನೌಕಾಪಡೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತದ ಶ್ರೀಮಂತ ಕಡಲ ಸಂಪ್ರದಾಯಗಳನ್ನು ಬಿಂಬಿಸುವ ಪ್ರಾಚೀನ ಭಾರತೀಯ ಹೊಲಿಗೆ ಹಡಗು ತಂತ್ರವನ್ನು ಬಳಸಿಕೊಂಡು ಐಎನ್ಎಸ್ ವಿ ಕೌಂಡಿನ್ಯವನ್ನು ನಿರ್ಮಿಸಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಸುರಕ್ಷಿತ ಮತ್ತು ಸ್ಮರಣೀಯ ಪ್ರಯಾಣಕ್ಕಾಗಿ ಸಿಬ್ಬಂದಿಗೆ ನನ್ನ ಶುಭಾಶಯಗಳು, ಅವರು ಕೊಲ್ಲಿ ಪ್ರದೇಶ ಮತ್ತು ಅದರಾಚೆಗಿನ ನಮ್ಮ ಐತಿಹಾಸಿಕ ಸಂಪರ್ಕಗಳನ್ನು ಮರಳಿ ಪಡೆಯುತ್ತಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಓಮನ್ ಭೇಟಿಯ ಸಂದರ್ಭದಲ್ಲಿ ಭಾರತ - ಓಮನ್ ಜಂಟಿ ಹೇಳಿಕೆ
December 18th, 05:28 pm
ಓಮನ್ ಸುಲ್ತಾನ್ ಗೌರವಾನ್ವಿತ ಹೈತಮ್ ಬಿನ್ ತಾರಿಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 17-18 ರಂದು ಓಮನ್ ಸುಲ್ತಾನೇಟ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರನ್ನು ವಿಮಾನ ನಿಲ್ದಾಣದಲ್ಲಿ ರಕ್ಷಣಾ ವ್ಯವಹಾರಗಳ ಉಪಪ್ರಧಾನಮಂತ್ರಿ ಗೌರವಾನ್ವಿತ ಸೈಯದ್ ಶಿಹಾಬ್ ಬಿನ್ ತಾರಿಕ್ ಅವರು ಬರಮಾಡಿಕೊಂಡರು ಮತ್ತು ಅವರಿಗೆ ಔಪಚಾರಿಕ ಸ್ವಾಗತವನ್ನು ನೀಡಲಾಯಿತು. ಡಿಸೆಂಬರ್ 18, 2025 ರಂದು ಅಲ್ ಬರಕಾ ಅರಮನೆಯಲ್ಲಿ ಗೌರವಾನ್ವಿತ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರು ಪ್ರಧಾನಮಂತ್ರಿಯವರನ್ನು ಬರಮಾಡಿಕೊಂಡರು.ಪ್ರಧಾನಮಂತ್ರಿ ಅವರು ಓಮನ್ ನ ದೊರೆ ಸುಲ್ತಾನ್ ಅವರನ್ನು ಭೇಟಿ ಮಾಡಿದರು
December 18th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ಮಹಾರಾಜ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ರಾಜಭವನಕ್ಕೆ ಆಗಮಿಸಿದ ಪ್ರಧಾನಮಂತ್ರಿ ಅವರನ್ನು ದೊರೆ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.ಫಲಿತಾಂಶಗಳ ಪಟ್ಟಿ: ಪ್ರಧಾನಮಂತ್ರಿ ಅವರ ಓಮನ್ ಭೇಟಿ
December 18th, 04:57 pm
- ನಿಕಟ ಆರ್ಥಿಕ ಮತ್ತು ವಾಣಿಜ್ಯ ಏಕೀಕರಣವನ್ನು ಬಲಪಡಿಸುವುದು ಮತ್ತು ಮತ್ತಷ್ಟು ಅಭಿವೃದ್ಧಿಪಡಿಸುವುದು.ಭಾರತ-ಓಮನ್ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 04:08 pm
ಈ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರ ಆತ್ಮೀಯ ಸ್ವಾಗತ ನನ್ನ ಉತ್ಸಾಹವನ್ನು ಮತ್ತಷ್ಟು ಬಲಪಡಿಸಿದೆ. ಇಂದಿನ ಶೃಂಗಸಭೆಯು ಭಾರತ-ಓಮನ್ ಪಾಲುದಾರಿಕೆಗೆ ಹೊಸ ನಿರ್ದೇಶನ ಮತ್ತು ಆವೇಗವನ್ನು ನೀಡುತ್ತದೆ, ಅದನ್ನು ಹೊಸ ಎತ್ತರಕ್ಕೆ ಏರಿಸಲು ಸಹಾಯ ಮಾಡುತ್ತದೆ. ಈ ಪ್ರಯತ್ನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು.ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.ಭಾರತ-ಓಮನ್ ಉದ್ಯಮ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ನಡೆದ ಭಾರತ-ಓಮನ್ ಉದ್ಯಮ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಓಮನ್‌ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ಘನತೆವೆತ್ತ ಖೈಸ್ ಅಲ್ ಯೂಸೆಫ್; ಓಮನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಘನತೆವೆತ್ತ ಶೇಖ್ ಫೈಸಲ್ ಅಲ್ ರಾವಾಸ್; ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಶ್ರೀ ಪಿಯೂಷ್ ಗೋಯಲ್; ಮತ್ತು ಸಿಐಐ ಅಧ್ಯಕ್ಷ ಶ್ರೀ ರಾಜೀವ್ ಮೆಮಾನಿ ಸಭೆಯಲ್ಲಿ ಭಾಗವಹಿಸಿದ್ದರು. ಇಂಧನ, ಕೃಷಿ, ಲಾಜಿಸ್ಟಿಕ್ಸ್, ಮೂಲಸೌಕರ್ಯ, ತಯಾರಿಕೆ, ಆರೋಗ್ಯ, ಹಣಕಾಸು ಸೇವೆಗಳು, ಹಸಿರು ಅಭಿವೃದ್ಧಿ, ಶಿಕ್ಷಣ ಮತ್ತು ಸಂಪರ್ಕ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪ್ರಮುಖ ಉದ್ಯಮ ಪ್ರತಿನಿಧಿಗಳು ವೇದಿಕೆಯಲ್ಲಿ ಭಾಗವಹಿಸಿದ್ದರು.PM Modi arrives in Muscat, Oman to a warm welcome
December 17th, 07:19 pm
PM Modi arrived in Muscat, Oman, a short while ago. He was accorded a ceremonial welcome at the airport. The PM’s visit marks 70 years of the establishment of diplomatic ties between India and Oman. In Muscat, the PM will hold discussions with His Majesty the Sultan of Oman to further strengthen the Strategic Partnership.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
December 15th, 08:15 am
ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ.ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್‌ಗೆ ಪ್ರಧಾನಮಂತ್ರಿ ಭೇಟಿ
December 11th, 08:43 pm
ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ಡಿಸೆಂಬರ್ 15ರಿಂದ 16ರ ವರೆಗೆ ಜೋರ್ಡಾನ್‌ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿ ಅವರು ಗೌರವಾನ್ವಿತ ದೊರೆ ಅಬ್ದುಲ್ಲಾ II ಬಿನ್ ಅಲ್ ಹುಸೇನ್ ಅವರನ್ನು ಭೇಟಿ ಮಾಡಿ ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ, ಪ್ರಾದೇಶಿಕ ವಿಷಯಗಳ ಕುರಿತು ದೃಷ್ಟಿಕೋನಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವವನ್ನು ಗುರುತಿಸುವ ಈ ಭೇಟಿಯು, ಭಾರತ-ಜೋರ್ಡಾನ್ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಲು, ಪರಸ್ಪರ ಬೆಳವಣಿಗೆ ಮತ್ತು ಸಮೃದ್ಧಿಗಾಗಿ ಸಹಯೋಗದ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಪ್ರಾದೇಶಿಕ ಶಾಂತಿ, ಸಮೃದ್ಧಿ, ಭದ್ರತೆ ಮತ್ತು ಸ್ಥಿರತೆ ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಅವಕಾಶ ಒದಗಿಸುತ್ತದೆ.ಭಾರತೀಯ ವಲಸಿಗರು ವಿವಿಧ ರಾಷ್ಟ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 24th, 11:30 am
ಮನ್ ಕಿ ಬಾತ್‌ನ 116 ನೇ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಎನ್‌ಸಿಸಿ ದಿನದ ಮಹತ್ವವನ್ನು ಚರ್ಚಿಸಿದರು, ಎನ್‌ಸಿಸಿ ಕೆಡೆಟ್‌ಗಳ ಬೆಳವಣಿಗೆ ಮತ್ತು ವಿಪತ್ತು ಪರಿಹಾರದಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಅವರು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಯುವ ಸಬಲೀಕರಣಕ್ಕೆ ಒತ್ತು ನೀಡಿದರು ಮತ್ತು ವಿಕಸಿತ್ ಭಾರತ್ ಯುವ ನಾಯಕರ ಸಂವಾದದ ಕುರಿತು ಮಾತನಾಡಿದರು. ಅವರು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನ್ಯಾವಿಗೇಟ್ ಮಾಡಲು ಹಿರಿಯ ನಾಗರಿಕರಿಗೆ ಸಹಾಯ ಮಾಡುವ ಯುವಕರ ಸ್ಪೂರ್ತಿದಾಯಕ ಕಥೆಗಳು ಮತ್ತು ಏಕ್ ಪೆಡ್ ಮಾ ಕೆ ನಾಮ್ ಅಭಿಯಾನದ ಯಶಸ್ಸನ್ನು ಹಂಚಿಕೊಂಡರು.ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 30th, 10:17 pm
ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ರಾಯಭಾರ ಕಚೇರಿಯ ಗಣರಾಜ್ಯೋತ್ಸವದ ಅಂಗವಾಗಿ ಇಂದು ಜರುಗಿದ ಔತಣಕೂಟದಲ್ಲಿ ಏರ್ಪಡಿಸಿದ್ದ ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.ಓಮನ್ ಸುಲ್ತಾನರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
December 16th, 09:29 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಓಮನ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಾಯಕರು ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.ಒಮಾನ್ ಸುಲ್ತಾನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಹೇಳಿಕೆ (ಡಿಸೆಂಬರ್ 16, 2023)
December 16th, 07:02 pm
ನಿಮ್ಮೆಲ್ಲರನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಭಾರತ ಮತ್ತು ಒಮಾನ್ ನಡುವಿನ ಸಂಬಂಧದಲ್ಲಿ ಇಂದು ಐತಿಹಾಸಿಕ ದಿನ. 26 ವರ್ಷಗಳ ನಂತರ ಇಂದು ಒಮಾನ್ ಸುಲ್ತಾನ್ ಅವರು ಭಾರತ ಪ್ರವಾಸ ಕೈಗೊಂಡಿದ್ದಾರೆ. 140 ಕೋಟಿ ಭಾರತೀಯರ ಪರವಾಗಿ ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವ ಅವಕಾಶ ಪಡೆದಿದ್ದೇನೆ. ನಮ್ಮೆಲ್ಲಾ ದೇಶವಾಸಿಗಳ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.