ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.