ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 11:15 am

ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು

November 01st, 11:00 am

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್‌ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್‌ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್‌ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 27th, 12:30 pm

ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು

July 27th, 12:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.

ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ

July 03rd, 03:45 pm

ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.

ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 03rd, 03:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.

ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 24th, 11:30 am

ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.

ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.

ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

May 07th, 12:00 pm

ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,

ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 07th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

"ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು

November 18th, 08:00 pm

ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.

ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 18th, 07:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.

ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ

November 16th, 12:45 pm

ಪಶ್ಚಿಮ ಆಫ್ರಿಕಾದಲ್ಲಿರುವ ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ. ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ ನಿರ್ಮಿಸಲು ಒಂದು ಅವಕಾಶವಾಗಿದೆ.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

September 23rd, 09:32 pm

ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.