ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 07th, 11:13 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
May 20th, 04:42 pm
ಗೌರವಾನ್ವಿತರೇ, ಮತ್ತು ಪ್ರತಿನಿಧಿಗಳೇ, ನಮಸ್ತೆ. ವಿಶ್ವ ಆರೋಗ್ಯ ಸಭೆಯ 78ನೇ ಅಧಿವೇಶನಕ್ಕೆ ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
May 20th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿನೀವಾದಲ್ಲಿ ನಡೆದ ವಿಶ್ವ ಆರೋಗ್ಯ ಅಸೆಂಬ್ಲಿಯ 78ನೇ ಅಧಿವೇಶನವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಧ್ಯೇಯವಾಕ್ಯವಾದ 'ಆರೋಗ್ಯಕ್ಕಾಗಿ ಒಂದು ಜಗತ್ತು' ಅನ್ನು ಬಿಂಬಿಸಿದರು ಮತ್ತು ಇದು ಜಾಗತಿಕ ಆರೋಗ್ಯಕ್ಕಾಗಿ ಭಾರತದ ದೃಷ್ಟಿಕೋನದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಒತ್ತಿ ಹೇಳಿದರು. 2023ರ ವಿಶ್ವ ಆರೋಗ್ಯ ಅಸೆಂಬ್ಲಿಯಲ್ಲಿ ತಾವು ಮಾಡಿದ ಭಾಷಣವನ್ನು ಅವರು ನೆನಪಿಸಿಕೊಂಡರು, ಅಲ್ಲಿ ಅವರು 'ಒಂದು ಭೂಮಿ, ಒಂದು ಆರೋಗ್ಯ' ಬಗ್ಗೆ ಮಾತನಾಡಿದ್ದರು. ಆರೋಗ್ಯಕರ ಪ್ರಪಂಚದ ಭವಿಷ್ಯವು ಒಳಗೊಳ್ಳುವಿಕೆ, ಸಮಗ್ರ ದೃಷ್ಟಿಕೋನ ಮತ್ತು ಸಹಯೋಗವನ್ನು ಅವಲಂಬಿಸಿದೆ ಎಂದು ಅವರು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ
March 30th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -ಐಎನ್‌ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ
January 15th, 11:08 am
ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 15th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 19th, 10:31 am
ಬಿಹಾರದ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಈ ರಾಜ್ಯಕ್ಕಾಗಿ ಪರಿಶ್ರಮ ಪಡುವ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ನಮ್ಮ ವಿದೇಶಾಂಗ ಸಚಿವ, ಶ್ರೀ ಎಸ್. ಜೈಶಂಕರ್ ಜಿ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶ್ರೀ ಪಬಿತ್ರಾ ಜಿ, ವಿವಿಧ ದೇಶಗಳ ಗಣ್ಯರು ಮತ್ತು ರಾಯಭಾರಿಗಳೆ, ನಳಂದ ವಿಶ್ವವಿದ್ಯಾಲಯದ ಉಪ -ಕುಲಪತಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಮತ್ತು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ನನ್ನ ಎಲ್ಲಾ ಸ್ನೇಹಿತರೆ!ಬಿಹಾರದ ರಾಜ್ ಗಿರ್ ನಲ್ಲಿ ನಳಂದಾ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಮಂತ್ರಿ
June 19th, 10:30 am
ಬಿಹಾರದ ರಾಜ್ ಗಿರ್ ನ ನಳಂದಾ ವಿಶ್ವವಿದ್ಯಾಲಯದಲ್ಲಿ ಹೊಸ ಕ್ಯಾಂಪಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ [ಇಎಎಸ್] ದೇಶಗಳೊಂದಿಗೆ ಈ ವಿಶ್ವವಿದ್ಯಾಲಯ ಸಹಯೋಗ ಹೊಂದಿದೆ. ಈ ಉದ್ಘಾಟನಾ ಸಮಾರಂಭದಲ್ಲಿ 17 ಪ್ರಮುಖ ದೇಶಗಳ ಮುಖ್ಯಸ್ಥರು ಒಳಗೊಂಡಂತೆ ಹಲವು ಪ್ರಮುಖ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಗಿಡ ನೆಟ್ಟು ನೀರೆರದರು.