ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 31st, 06:08 pm
ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.