ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 29th, 04:09 pm
ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು
October 29th, 04:08 pm
ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್ ಅಪ್ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.