ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್‌ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ
June 18th, 11:15 am
ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.ಸೌದಿ ಅರೇಬಿಯಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿಯ ಸಮಾರೋಪದಲ್ಲಿ ನೀಡಲಾದ ಜಂಟಿ ಹೇಳಿಕೆ
April 23rd, 12:44 pm
ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನ ಮಂತ್ರಿ ಗೌರವಾನ್ವಿತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಆಹ್ವಾನದ ಮೇರೆಗೆ ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025 ರ ಏಪ್ರಿಲ್ 22 ರಂದು ಸೌದಿ ಅರೇಬಿಯಾಕ್ಕೆ ಅಧಿಕೃತ ಭೇಟಿ ನೀಡಿದರು.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
November 20th, 01:40 am
ಇಂದಿನ ಅಧಿವೇಶನದ ವಿಷಯವು ಬಹಳ ಪ್ರಸ್ತುತವಾಗಿದೆ ಮತ್ತು ಮುಂದಿನ ಪೀಳಿಗೆಯ ಭವಿಷ್ಯದೊಂದಿಗೆ ನಿಕಟ ಸಂಬಂಧ ಹೊಂದಿದೆ. ನವದೆಹಲಿ ಜಿ -20 ಶೃಂಗಸಭೆಯಲ್ಲಿ, ಎಸ್ ಡಿಜಿಗಳ ಸಾಧನೆಯನ್ನು ವೇಗಗೊಳಿಸಲು ನಾವು ವಾರಣಾಸಿ ಕ್ರಿಯಾ ಯೋಜನೆಯನ್ನು ಅಳವಡಿಸಿಕೊಂಡಿದ್ದೇವೆ.ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ 20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 20th, 01:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಸ್ಥಿರ ಅಭಿವೃದ್ಧಿ ಮತ್ತು ಇಂಧನ ಪರಿವರ್ತನೆ ಕುರಿತು ಜಿ-20 ಶೃಂಗಸಭೆಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ನವದೆಹಲಿ ಜಿ-20 ಶೃಂಗಸಭೆಯ ಸಮಯದಲ್ಲಿ, ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸಲು ಮತ್ತು 2030ರ ವೇಳೆಗೆ ಇಂಧನ ದಕ್ಷತೆಯ ದರವನ್ನು ದ್ವಿಗುಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಈ ಸುಸ್ಥಿರ ಅಭಿವೃದ್ಧಿ ಆದ್ಯತೆಗಳನ್ನು ಮುಂದಕ್ಕೆ ತೆಗೆದುಕೊಳ್ಳುವ ಬ್ರೆಜಿಲ್ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆ, ಯುದ್ಧಭೂಮಿಯಲ್ಲಿ ಅಲ್ಲ: ಯುಎನ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
September 23rd, 09:32 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.‘ಭವಿಷ್ಯದ ಶೃಂಗಸಭೆ’ಯಲ್ಲಿ ಪ್ರಧಾನಮಂತ್ರಿಯವರ ಭಾಷಣ
September 23rd, 09:12 pm
ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯಲ್ಲಿ 'ಭವಿಷ್ಯದ ಶೃಂಗಸಭೆ'ಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಾಗತಿಕ ಶಾಂತಿ, ಅಭಿವೃದ್ಧಿ ಮತ್ತು ಸಮೃದ್ಧಿಗೆ ಮಾನವ ಕೇಂದ್ರಿತ ವಿಧಾನವನ್ನು ಪ್ರತಿಪಾದಿಸಿದರು. ಅವರು 250 ಮಿಲಿಯನ್ ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಭಾರತದ ಯಶಸ್ಸನ್ನು ಎತ್ತಿ ತೋರಿಸಿದರು, ಜಾಗತಿಕ ದಕ್ಷಿಣದೊಂದಿಗೆ ಐಕಮತ್ಯವನ್ನು ವ್ಯಕ್ತಪಡಿಸಿದರು ಮತ್ತು ಸಮತೋಲಿತ ಟೆಕ್ ನಿಯಮಗಳಿಗೆ ಕರೆ ನೀಡಿದರು. ಜಾಗತಿಕ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ಯುಎನ್ ಭದ್ರತಾ ಮಂಡಳಿಯ ಸುಧಾರಣೆಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು.ಚೊಚ್ಚಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವ; ಪ್ರಧಾನಿ ನರೇಂದ್ರ ಮೋದಿ ಸಂದೇಶ
September 05th, 11:00 am
ನನ್ನ ಆತ್ಮೀಯ ಸ್ನೇಹಿತರೇ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು. ಮೊದಲ ಅಂತಾರಾಷ್ಟ್ರೀಯ ಸೌರಶಕ್ತಿ ಉತ್ಸವಕ್ಕೆ ನಿಮ್ಮೆಲ್ಲರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ಈ ಅದ್ಭುತ ಉಪಕ್ರಮಕ್ಕಾಗಿ ನಾನು ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟವನ್ನು ಅಭಿನಂದಿಸುತ್ತೇನೆ.