ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 02nd, 11:30 am
ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
August 02nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.