ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 08th, 05:33 pm
ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 08th, 05:00 pm
ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025' ಅನ್ನು ಉದ್ದೇಶಿಸಿ ಮಾತನಾಡಿದರು
November 03rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ 'ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ESTIC) 2025' ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಭಾರತ ಮತ್ತು ವಿದೇಶಗಳ ವಿಜ್ಞಾನಿಗಳು, ನಾವೀನ್ಯಕಾರರು (innovators), ಶಿಕ್ಷಣ ತಜ್ಞರು ಮತ್ತು ಇತರ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2025 ರಲ್ಲಿ ಭಾರತ ಗಳಿಸಿದ ಗಮನಾರ್ಹ ವಿಜಯದ ಬಗ್ಗೆ ಮಾತನಾಡಿದ ಶ್ರೀ ಮೋದಿಯವರು, ಭಾರತೀಯ ಕ್ರಿಕೆಟ್ ತಂಡದ ಯಶಸ್ಸಿನಿಂದ ಇಡೀ ರಾಷ್ಟ್ರವೇ ಹರ್ಷಗೊಂಡಿದೆ ಎಂದು ಪ್ರಸ್ತಾಪಿಸಿದರು. ಇದು ಭಾರತದ ಮೊದಲ ಮಹಿಳಾ ವಿಶ್ವಕಪ್ ಗೆಲುವು ಎಂಬುದನ್ನು ಒತ್ತಿ ಹೇಳಿದ ಅವರು, ಮಹಿಳಾ ಕ್ರಿಕೆಟ್ ತಂಡಕ್ಕೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ರಾಷ್ಟ್ರವು ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಹೇಳಿದ ಪ್ರಧಾನಿಯವರು, ಅವರ ಈ ಸಾಧನೆಯು ದೇಶಾದ್ಯಂತ ಲಕ್ಷಾಂತರ ಯುವಜನರಿಗೆ ಸ್ಫೂರ್ತಿ ನೀಡುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 16th, 03:00 pm
ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು
October 16th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.Delhi needs a government that works in coordination, not one that thrives on conflicts: PM Modi
January 31st, 03:35 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”PM Modi electrifies New Delhi’s Dwarka Rally with a High-Octane speech
January 31st, 03:30 pm
Addressing the huge rally in New Delhi’s Dwarka, PM Modi said, “Delhi needs a double-engine government at both the Centre and the state. You gave Congress years to govern, then the AAP-da took over Delhi. Now, give me the chance to serve Delhi with a double-engine government. I guarantee you that the BJP will leave no stone unturned in Delhi’s development. If this AAP-da continues, Delhi will keep falling behind in development. Delhi needs a government that believes in coordination, not confrontation.”ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
January 19th, 11:30 am
In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.ಕುವೈತ್‌ನಲ್ಲಿ ಭಾರತೀಯ ಸಮುದಾಯ ಆಯೋಜಿಸಿದ್ದ ‘ಹಲಾ ಮೋದಿ’ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 21st, 06:34 pm
ಎರಡೂವರೆ ಗಂಟೆಗಳ ಹಿಂದೆಯಷ್ಟೇ ನಾನು ಕುವೈತ್‌ಗೆ ಬಂದೆ. ನಾನು ಇಲ್ಲಿಗೆ ಕಾಲಿಟ್ಟಾಗಿನಿಂದ, ಹೃದಯಾಂತರಾಳದ ಅನನ್ಯ ಭಾವನೆಯನ್ನು ಅನುಭವಿಸಿದೆ. ನೀವೆಲ್ಲರೂ ಭಾರತದ ವಿವಿಧ ರಾಜ್ಯಗಳಿಂದ ಬಂದಿದ್ದೀರಿ, ಆದರೆ ನಿಮ್ಮೆಲ್ಲರನ್ನು ನೋಡುವಾಗ ನನ್ನ ಮುಂದೆ ಒಂದು ಮಿನಿ ಹಿಂದೂಸ್ಥಾನವೇ ಜೀವಂತವಾಗಿದೆ ಎಂದು ಭಾಸವಾಗುತ್ತಿದೆ. ಇಲ್ಲಿ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮದ ಜನರು ವಿಭಿನ್ನ ಭಾಷೆ ಮತ್ತು ಉಪಭಾಷೆಗಳನ್ನು ಮಾತನಾಡುವುದನ್ನು ನಾನು ನೋಡುತ್ತೇನೆ. ಆದರೂ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಸಾಮಾನ್ಯ ಪ್ರತಿಧ್ವನಿ ಇದೆ, ಪ್ರತಿಯೊಬ್ಬರ ಹೃದಯದಲ್ಲಿ ಒಂದು ಪ್ರತಿಧ್ವನಿಸುವ ಘೋಷಣೆ - ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ - ಜೈ.ಕುವೈತ್‌ನಲ್ಲಿ ನಡೆದ ‘ಹಾಲಾ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು
December 21st, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕುವೈತ್‌ನಲ್ಲಿರುವ ಶೇಖ್ ಸಾದ್ ಅಲ್-ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಲಾಗಿದ್ದ ‘ಹಾಲಾ ಮೋದಿ’ ವಿಶೇಷ ಕಾರ್ಯಕ್ರಮದಲ್ಲಿ ಅಲ್ಲಿನ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕುವೈತ್‌ನ ಸಮುದಾಯದ ಹೆಚ್ಚಿನ ಭಾಗವನ್ನು ಪ್ರತಿನಿಧಿಸುವ ಭಾರತೀಯ ಪ್ರಜೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.