ಗುಜರಾತ್ ನ ಹನಸಲ್ಪುರದಲ್ಲಿ ನಡೆದ ಗ್ರೀನ್ ಮೊಬಿಲಿಟಿ ಇನಿಶಿಯೇಟಿವ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 26th, 11:00 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರೇ, ಭಾರತದಲ್ಲಿನ ಜಪಾನ್ ರಾಯಭಾರಿಗಳಾದ ಶ್ರೀ ಕೀಚಿ ಒನೊ ಸನ್ ಅವರೇ, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಅಧ್ಯಕ್ಷರಾದ ಶ್ರೀ ತೋಶಿಹಿರೋ ಸುಜುಕಿ ಸ್ಯಾನ್ ಅವರೇ, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹಿಸಾಶಿ ಟಕೆಯುಚಿ ಸ್ಯಾನ್ ಅವರೇ, ಅಧ್ಯಕ್ಷರಾದ ಶ್ರೀ ಆರ್.ಸಿ. ಭಾರ್ಗವ ಅವರೇ, ಹಂಸಲ್ಪುರ ಘಟಕದ ಸಮಸ್ತ ನೌಕರರೇ, ಇತರ ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು
August 26th, 10:30 am
ಹಸಿರು ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರರಾಗುವತ್ತ ದೊಡ್ಡ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಹನಸಲ್ಪುರದಲ್ಲಿ ಗ್ರೀನ್ ಮೊಬಿಲಿಟಿ ಉಪಕ್ರಮಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಗಣೇಶೋತ್ಸವದ ಉತ್ಸಾಹದ ನಡುವೆ, ಭಾರತದ 'ಮೇಕ್ ಇನ್ ಇಂಡಿಯಾ' ಪ್ರಯಾಣಕ್ಕೆ ಹೊಸ ಅಧ್ಯಾಯ ಸೇರ್ಪಡೆಯಾಗುತ್ತಿದೆ ಎಂದು ಹೇಳಿದರು. ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್ ಎಂಬ ಹಂಚಿಕೆಯ ಗುರಿಯತ್ತ ಇದು ಮಹತ್ವದ ಮುನ್ನಡೆಯಾಗಿದೆ ಎಂದು ಅವರು ಹೇಳಿದರು. ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ವಾಹನಗಳನ್ನು ಇಂದಿನಿಂದ 100 ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಶ್ರೀ ಮೋದಿ ಅವರು ಹೇಳಿದರು. ದೇಶದಲ್ಲಿ ಹೈಬ್ರಿಡ್ ಬ್ಯಾಟರಿ ಎಲೆಕ್ಟ್ರೋಡ್ ಉತ್ಪಾದನೆಯನ್ನು ಪ್ರಾರಂಭಿಸುವುದಾಗಿ ಅವರು ಘೋಷಿಸಿದರು. ಭಾರತ ಮತ್ತು ಜಪಾನ್ ನಡುವಿನ ಸ್ನೇಹಕ್ಕೆ ಈ ದಿನವು ಹೊಸ ಆಯಾಮವನ್ನು ನೀಡುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದ ನಾಗರಿಕರು, ಜಪಾನ್ ಮತ್ತು ಸುಜುಕಿ ಮೋಟಾರ್ ಕಾರ್ಪೊರೇಷನ್ ಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.India stands as an outstanding destination for every investor looking to shape their future in the mobility sector: PM
January 17th, 11:00 am
PM Modi inaugurated the Bharat Mobility Global Expo 2025, highlighting India's rapid transformation in the sector. He praised India’s future-ready motive industry, rising exports, and growing domestic demand, driven by Make in India and the aspirations of people.ಭಾರತ ಚಲನಶೀಲತೆ ಜಾಗತಿಕ ವಸ್ತುಪ್ರದರ್ಶನ(ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ)-2025 ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 17th, 10:45 am
ನವದೆಹಲಿಯ ಭಾರತ್ ಮಂಟಪದಲ್ಲಿಂದು ಆಯೋಜಿಸಿದ್ದ ಭಾರತದ ಚಲನಶೀಲತೆಯ ಅತಿದೊಡ್ಡ ವಸ್ತು ಪ್ರದರ್ಶನ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025' ಅನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸರ್ಕಾರವನ್ನು ಸತತ 3ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು. ಕಳೆದ ವರ್ಷ ಜರುಗಿದ 800 ಪ್ರದರ್ಶಕರ ಸಂಖ್ಯೆ, 2.5 ಲಕ್ಷ ಪ್ರತಿನಿಧಿಗಳು ಭಾಗವಹಿಸಿದ್ದ ವಸ್ತು ಪ್ರದರ್ಶನಕ್ಕೆ ಹೋಲಿಸಿದರೆ, ಈ ವರ್ಷದ ವಸ್ತು ಪ್ರದರ್ಶನವು ರಾಷ್ಟ್ರೀಯ ರಾಜಧಾನಿ ಪ್ರದೇಶದ ಇತರೆ 2 ಸ್ಥಳಗಳಲ್ಲಿ ನಡೆಯುವುದರೊಂದಿಗೆ ಹೆಚ್ಚಿನ ವಿಸ್ತರಣೆಯಾಗಿದೆ. ಮುಂದಿನ 5 ದಿನಗಳಲ್ಲಿ, ಈ ಕಾರ್ಯಕ್ರಮಕ್ಕೆ ಸಾಕಷ್ಟು ಪ್ರತಿನಿಧಿಗಳು ಭಾಗವಹಿಸುವ ಮೂಲಕ ಅನೇಕ ಹೊಸ ವಾಹನಗಳನ್ನು ಬಿಡುಗಡೆ ಮಾಡಲಿದ್ದಾರೆ. ಭಾರತದಲ್ಲಿ ಚಲನಶೀಲತೆಯ ಭವಿಷ್ಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ವಾತಾವರಣ ಇದೆ. ವಸ್ತು ಪ್ರದರ್ಶನಕ್ಕೆ ತಮ್ಮ ಭೇಟಿಯನ್ನು ಉಲ್ಲೇಖಿಸಿದ ಶ್ರೀ ಮೋದಿ, ಭಾರತದ ಆಟೋಮೋಟಿವ್ ಉದ್ಯಮವು ಅದ್ಭುತವಾಗಿದೆ ಮತ್ತು ಭವಿಷ್ಯಕ್ಕೆ ಸಿದ್ಧವಾಗಿದೆ, ಇದಕ್ಕಾಗಿ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಶ್ರೀ ಒಸಾಮು ಸುಜುಕಿ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 27th, 05:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಾಗತಿಕ ವಾಹನ ಉದ್ಯಮದ ದಂತಕಥೆ ಶ್ರೀ ಒಸಾಮು ಸುಜುಕಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಒಸಾಮು ಸುಜುಕಿ ಅವರ ದೂರದೃಷ್ಟಿಯ ಕಾರ್ಯವು ಚಲನಶೀಲತೆಯ ಜಾಗತಿಕ ಗ್ರಹಿಕೆಗಳನ್ನು ಮರುರೂಪಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಅವರ ನಾಯಕತ್ವದಲ್ಲಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಜಾಗತಿಕ ಶಕ್ತಿಕೇಂದ್ರವಾಯಿತು, ಸವಾಲುಗಳನ್ನು ಯಶಸ್ವಿಯಾಗಿ ಮಾರ್ಗದರ್ಶನ ಮಾಡಿತು, ಜತೆಗೆ ನಾವೀನ್ಯತೆ ಮತ್ತು ವಿಸ್ತರಣೆಗೆ ಚಾಲನೆ ಮಾಡಿತು ಎಂದಿದ್ದಾರೆ.ಗುಜರಾತ್ ನ ಗಾಂಧಿನಗರದಲ್ಲಿ ಭಾರತದ ಸುಜುಕಿಯ 40ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 28th, 08:06 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಜೀ, ಉಪ ಮುಖ್ಯಮಂತ್ರಿ ಶ್ರೀ ಕೃಷ್ಣ ಚೌಟಾಲಾ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಿ.ಆರ್. ಪಾಟೀಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಹಿರಿಯ ಅಧಿಕಾರಿಗಳೇ, ಭಾರತದಲ್ಲಿನ ಜಪಾನ್ ರಾಯಭಾರಿಯವರೇ, ಮಾರುತಿ-ಸುಜುಕಿಯ ಹಿರಿಯ ಅಧಿಕಾರಿಗಳೇ, ಇತರ ಎಲ್ಲ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿಂದು ಭಾರತದಲ್ಲಿ ಸುಜುಕಿಯ 40ನೇ ವರ್ಷಗಳ ಕಾರ್ಯಾಚರಣೆ, ಸ್ಮರಣಾರ್ಥ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
August 28th, 05:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಕಾರ್ಯಾಚರಣೆ ಅಂಗವಾಗಿ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ಜಪಾನ್ ರಾಯಭಾರಿ ಮಾನ್ಯ ಶ್ರೀ ಸತೋಶಿ ಸುಜುಕಿ, ಗುಜರಾತ್ ಮುಖ್ಯಮಂತ್ರಿ ಮಾನ್ಯ ಶ್ರೀ ಭೂಪೇಂದ್ರ ಪಟೇಲ್, ಸಂಸದ ಶ್ರೀ ಸಿ.ಆರ್.ಪಾಟೀಲ್, ರಾಜ್ಯ ಸಚಿವ ಶ್ರೀ ಜಗದೀಶ್ ಪಾಂಚಾಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ಮಾಜಿ ಅಧ್ಯಕ್ಷರಾದ ಶ್ರೀ ಒ. ಸುಜುಕಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀ ಟಿ. ಸುಜುಕಿ ಮತ್ತು ಮಾರುತಿ-ಸುಜುಕಿಯ ಅಧ್ಯಕ್ಷ ಶ್ರೀ ಆರ್.ಸಿ ಭಾರ್ಗವ ಉಪಸ್ಥಿತರಿದ್ದರು. ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು ಮತ್ತು ಜಪಾನಿನ ಪ್ರಧಾನ ಮಂತ್ರಿ ಮಾನ್ಯ ಶ್ರೀ ಫುಮಿಯೋ ಕಿಶಿದಾ ಅವರ ವೀಡಿಯೊ ಸಂದೇಶವನ್ನು ಸಹ ಪ್ರದರ್ಶಿಸಲಾಯಿತು.ಸುಜುಕಿ ಮೋಟಾರ್ ಕಾರ್ಪೊರೇಶನ್‌ನ ಹಿರಿಯ ಸಲಹೆಗಾರ ಶ್ರೀ ಒಸಾಮು ಸುಜುಕಿ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 23rd, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 23 ಮೇ 2022 ರಂದು ಟೋಕಿಯೊದಲ್ಲಿ ಸುಜುಕಿ ಮೋಟಾರ್ ಕಾರ್ಪೊರೇಶನ್‌ನ ಹಿರಿಯ ಸಲಹೆಗಾರ ಶ್ರೀ ಒಸಾಮು ಸುಜುಕಿ ಅವರನ್ನು ಭೇಟಿಯಾದರು. ಸಭೆಯಲ್ಲಿ, ಪ್ರಧಾನಮಂತ್ರಿಯವರು ಶ್ರೀ. ಸುಜುಕಿಯವರ ಸಹಯೋಗ ಮತ್ತು ಭಾರತದಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು ಮತ್ತು ಭಾರತದ ವಾಹನ ಉದ್ಯಮದಲ್ಲಿ ಸುಜುಕಿ ಮೋಟಾರ್ಸ್ ನ ಪರಿವರ್ತನೆಯ ಪಾತ್ರವನ್ನು ಶ್ಲಾಘಿಸಿದರು. ಸುಜುಕಿ ಮೋಟಾರ್ ಗುಜರಾತ್ ಪ್ರೈವೇಟ್ ಲಿಮಿಟೆಡ್ ಮತ್ತು ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ಸಂಸ್ಥೆಗಳು ವಾಹನ ಮತ್ತು ವಾಹನ ಬಿಡಿಭಾಗಗಳ ವಲಯದಲ್ಲಿ ಉತ್ಪಾದಕತೆ ಸಂಬಂಧಿತ ಉತ್ತೇಜನ (ಪಿಎಲ್‌ಐ) ಯೋಜನೆಯಡಿ ಅನುಮೋದಿಸಲಾದ ಅರ್ಜಿದಾರರಲ್ಲಿ ಸೇರಿರುವುದನ್ನು ಶ್ಲಾಘಿಸಿದರು.ಟೊಯೋಟ ಅಧ್ಯಕ್ಷ ಶ್ರೀ. ಅಕಿಯೋ ಟೋಯೋಡ ಮತ್ತು ಸುಜುಕಿ ಅಧ್ಯಕ್ಷ ಶ್ರೀ. ಓ. ಸುಜುಕಿ ಅವರಿಂದ ಪ್ರಧಾನಿ ಭೇಟಿ
March 09th, 05:53 pm
Mr. Akio Toyoda, President Toyota, and Mr. O. Suzuki, Chairman Suzuki met PM Modi. The Toyota-Suzuki business partnership, and future technological developments came up for discussion. The partnership will promote Make in India, and contribute to employment generation.Chairman of Suzuki Motor Corp Mr. Osamu Suzuki meets CM
August 24th, 12:57 pm
Chairman of Suzuki Motor Corp Mr. Osamu Suzuki meets CM