ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ
May 19th, 06:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು
May 18th, 08:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ.
May 18th, 07:36 pm
ನಾರ್ವೆಯ ದೊರೆ ಐದನೇ ಹೆರಾಲ್ಡ್ ಅವರೊಂದಿಗೆ ಪ್ರಧಾನ ಮಂತ್ರಿಯವರ ಸಭೆ. ಓಸ್ಲೋದ ರಾಯಲ್ ಪ್ಯಾಲೇಸ್‌ನಲ್ಲಿ ನಾರ್ವೆಯ ಘನತೆವೆತ್ತ ರಾಜ ಹೆರಾಲ್ಡ್ V ಅವರೊಂದಿಗೆ ಪ್ರಧಾನಿ ಮೋದಿ ಸಮಾಲೋಚಿಸಿದರು, ಅಲ್ಲಿ ಇಬ್ಬರೂ ಭಾರತ-ನಾರ್ವೆ ಪಾಲುದಾರಿಕೆ ಮತ್ತು ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ಹೊಸ ತಂತ್ರಜ್ಞಾನಗಳ ಪ್ರಗತಿಯ ಬಗ್ಗೆ ಚರ್ಚಿಸಿದರು. ಸಭೆಯ ನಂತರ ಪ್ರಧಾನಿ ಮೋದಿ ಅವರ ಗೌರವಾರ್ಥವಾಗಿ ಭೋಜನ ಕೂಟವನ್ನು ಆಯೋಜಿಸಲಾಗಿತ್ತು.