ನಾಗರಿಕ ಪುರಸ್ಕಾರ ಸಮಾರಂಭ-IIರಲ್ಲಿ ಪ್ರಧಾನಮಂತ್ರಿ ಭಾಗಿ
May 28th, 09:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾದ ನಾಗರಿಕ ಪುರಸ್ಕಾರ ಸಮಾರಂಭ-II ರಲ್ಲಿ ಭಾಗಿಯಾಗಿದ್ದರು. ಪದ್ಮ ಪ್ರಶಸ್ತಿ ಪುರಸ್ಕೃತರು ನಮ್ಮ ಸಮಾಜಕ್ಕೆ ಅಭೂತಪೂರ್ವ ಕೊಡುಗೆಗಳನ್ನು ನೀಡಿದ್ದಾರೆ. ಪದ್ಮ ಪ್ರಶಸ್ತಿ ಪುರಸ್ಕೃತರ ಜೀವನ ಪಯಣ ಅತ್ಯಂತ ಪ್ರೇರಣಾದಾಯಕ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಶ್ರೀ ಶಿವಾನಂದ್ ಬಾಬಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 04th, 10:58 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೋಗ ಸಾಧಕರು ಮತ್ತು ಕಾಶಿಯ ನಿವಾಸಿ ಶ್ರೀ ಶಿವಾನಂದ್ ಬಾಬಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದರು.ಮುಂಬೈಯ ವೇವ್ಸ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಇಂಗ್ಲೀಷ್ ಅವತರಣಿಕೆ
May 01st, 03:35 pm
ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇವ್ಸ್ 2025 ಅನ್ನು ಉದ್ಘಾಟಿಸಿದರು
May 01st, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ ಎಂದು ಅವರು ಹೇಳಿದರು, ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು ಸಂಪರ್ಕ ಸಾಧಿಸಲು ಮತ್ತು ಸಹಕರಿಸಲು ಜಾಗತಿಕ ವೇದಿಕೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲರನ್ನು ಪ್ರಧಾನಿ ಅಭಿನಂದಿಸಿದರು ಮತ್ತು ಭಾರತ ಮತ್ತು ವಿದೇಶಗಳಿಂದ ಬಂದ ಗಣ್ಯ ಅತಿಥಿಗಳಿಗೆ ಆತ್ಮೀಯ ಸ್ವಾಗತವನ್ನು ಕೋರಿದರು.ನಾಗರಿಕ ಪ್ರಶಸ್ತಿ ಪದಕ ಪ್ರದಾನ ಸಮಾರಂಭ-I ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
April 28th, 09:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಪದ್ಮ ಪ್ರಶಸ್ತಿಗಳ ಪದಕಗಳನ್ನು ಪ್ರದಾನ ಮಾಡುವ ನಾಗರಿಕ ಪ್ರಶಸ್ತಿ ಪದಕ ಪ್ರದಾನ ಸಮಾರಂಭ-I ನಲ್ಲಿ ಭಾಗವಹಿಸಿದರು. ಎಲ್ಲಾ ಕ್ಷೇತ್ರಗಳ ಅತ್ಯುತ್ತಮ ವ್ಯಕ್ತಿಗಳನ್ನು ಅವರ ಸೇವೆ ಮತ್ತು ಸಾಧನೆಗಳಿಗಾಗಿ ಗೌರವಿಸಲಾಯಿತು ಎಂದು ಶ್ರೀ ಮೋದಿ ಅವರು ಹೇಳಿದರು.2025ರ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ಅಭಿನಂದನೆ
January 25th, 09:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಎಲ್ಲಾ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಇಂದು ಅಭಿನಂದಿಸಿದ್ದಾರೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರೂ ಅಸಂಖ್ಯಾತ ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದ್ದು, ಅವರು ಕಠಿಣ ಪರಿಶ್ರಮ, ಒಲವು ಮತ್ತು ನಾವಿನ್ಯತೆಗೆ ಸಮಾನಾರ್ಥಕರಾಗಿದ್ದಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.ಪದ್ಮ ಪ್ರಶಸ್ತಿ ಪುರಸ್ಕೃತರಾದ, ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ
January 01st, 10:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪದ್ಮ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಸಸ್ಯಶಾಸ್ತ್ರಜ್ಞ ಡಾ. ಕೆ. ಎಸ್. ಮಣಿಲಾಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.