ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ಪ್ರಧಾನಮಂತ್ರಿ ವಿವರಣೆ
April 03rd, 09:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಥಾಯ್ ಸರ್ಕಾರದಿಂದ ರಾಮಕಿಯನ್ ಭಿತ್ತಿಚಿತ್ರಗಳನ್ನು ಬಿಂಬಿಸಿರುವ ಐಸ್ಟ್ಯಾಂಪ್ ಬಿಡುಗಡೆ ಕುರಿತು ತಿಳಿಸಿದ್ದಾರೆ.ನಮೋ ಭಾರತ್ ರೈಲಿನಲ್ಲಿ, ಸಾಹಿಬಾಬಾದ್ ಆರ್‌ಆರ್‌ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್‌ಆರ್‌ಟಿಎಸ್ ನಿಲ್ದಾಣದ ವರೆಗೆ ಮಾಡಿದ ಪ್ರಯಾಣದ ಸಮಯದಲ್ಲಿ, ವಿದ್ಯಾರ್ಥಿಗಳು ಮತ್ತು ರೈಲು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿಯವರು ನಡೆಸಿದ ಸಂವಾದ
January 05th, 08:50 pm
ನಮ್ಮ ಮನದಲ್ಲಿ ಒಂದು ಗುರಿಯನ್ನಿಟ್ಟು, ಗಮ್ಯದ ಕಡೆಗೆ ಗಮನವ ಇಟ್ಟುನಮೋ ಭಾರತ್ ರೈಲಿನಲ್ಲಿ ವಿದ್ಯಾರ್ಥಿಗಳು ಮತ್ತು ಲೋಕೋ ಪೈಲಟ್‌ಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
January 05th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಮೋ ಭಾರತ್ ರೈಲಿನಲ್ಲಿ ಸಹಿಬಾಬಾದ್ ಆರ್ ಆರ್ ಟಿ ಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್ ಆರ್ ಟಿ ಎಸ್ ನಿಲ್ದಾಣದವರೆಗೆ ಸಂಚರಿಸಿದರು. ಪ್ರಯಾಣದ ಸಂದರ್ಭದಲ್ಲಿ ಅವರು ಯುವ ಸ್ನೇಹಿತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ಯುವಸಮೂಹ ಪ್ರಧಾನಿ ಅವರಿಗೆ ಹಲವು ವರ್ಣಚಿತ್ರಗಳು ಮತ್ತು ಕಲಾಕೃತಿಗಳನ್ನು ಉಡುಗೊರೆಯಾಗಿ ನೀಡಿದರು.ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
December 29th, 11:30 am
ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.2ನೇ ಭಾರತ ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್
March 21st, 06:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾನ್ಯ ಸ್ಕಾಟ್ ಮಾರಿಸನ್ ಅವರಿಂದು 2ನೇ ಭಾರತ- ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಿದರು, ಈ ವೇಳೆ, ಅವರು ಎರಡೂ ದೇಶಗಳ ನಡುವಿನ ಬಹುಮುಖಿ ಬಾಂಧವ್ಯದ ಪರಾಮರ್ಶೆ ನಡೆಸಿ, ಪ್ರಾದೇಶಿಕ ಮತ್ತು ಜಾಗತಿಕ ಬೆಳೆವಣಿಗೆಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು.ಯುವ ಕಲಾವಿದರ ವರ್ಣ ಚಿತ್ರಗಳು ಮತ್ತು ಸಾರ್ವಜನಿಕ ಆರೋಗ್ಯ ಕುರಿತ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
August 26th, 06:02 pm
ಬೆಂಗಳೂರಿನ ವಿದ್ಯಾರ್ಥಿ ಸ್ಟೀವನ್ ಹ್ಯಾರೀಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪತ್ರ ಬರೆದು ವರ್ಣ ಚಿತ್ರಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 20 ವರ್ಷದ ಯುವ ಕಲಾವಿದ ಪ್ರಧಾನಮಂತ್ರಿ ಅವರ ಎರಡು ಸುಂದರ ವರ್ಣ ಭಾವಚಿತ್ರಗಳನ್ನು ರಚಿಸಿ, ಜತೆಗೆ ಪತ್ರವೊಂದನ್ನು ಪ್ರಧಾನಮಂತ್ರಿ ಅವರಿಗೆ ಕಳುಹಿಸಿದ್ದರು. ಪ್ರಧಾನಮಂತ್ರಿ ಅವರು ಉತ್ತೇಜನ ಮತ್ತು ಪ್ರಶಂಸೆಯೊಂದಿಗೆ ಅವರಿಗೆ ಉತ್ತರ ನೀಡಿದ್ದಾರೆ.