ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 03rd, 12:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು
January 03rd, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 12th, 04:54 pm
ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 12th, 04:45 pm
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ನವಕಾರ್ ಮಹಾಮಂತ್ರ ದಿವಸ್ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 09th, 08:15 am
ಮನಸ್ಸು ಶಾಂತವಾಗಿದೆ, ಮನಸ್ಸು ಸ್ಥಿರವಾಗಿದೆ, ಶಾಂತಿಯೊಂದೇ ಅದ್ಭುತ ಅನುಭೂತಿ, ಮಾತಿಗೆ ಮೀರಿದ, ಆಲೋಚನೆಗೆ ಮೀರಿದ ನವಕಾರ್ ಮಹಾಮಂತ್ರವು ಇನ್ನೂ ಮನಸ್ಸಿನಲ್ಲಿ ಅನುರಣಿಸುತ್ತಿದೆ. ನಮೋ ಅರಿಹಂತನಾಮ್. ನಮೋ ಸಿದ್ಧಾನಾಮ್. ನಮೋ ಆರ್ಯನಾಮ್. ನಮೋ ಉವಜ್ಜಾಯನಾಮ್ । ನಮೋ ಲೋಯೇ ಸವ್ವಸಾಹೂನಾಮ್ । (ನಮೋ ಅರಿಹಂತಾನಂ॥ ನಮೋ ಸಿದ್ಧಾನಂ॥ ನಮೋ ಆಯಾರಿಯಾಣಂ॥ ನಮೋ ಉವಾಜ್ಞಾಯಾಣಂ ॥ ನಮೋ ಏಲ ॥ ಸವ್ವಸಾಹೂಣಂ॥) ಒಂದು ಧ್ವನಿ, ಒಂದು ಹರಿವು, ಒಂದು ಶಕ್ತಿ, ಯಾವುದೇ ಏರಿಳಿತವಿಲ್ಲ, ಇಳಿಕೆಗಳಿಲ್ಲ, ಕೇವಲ ಸ್ಥಿರತೆ, ಕೇವಲ ಸಮಚಿತ್ತತೆ. ಅಂತಹ ಒಂದು ಪ್ರಜ್ಞೆ, ಒಂದೇ ರೀತಿಯ ಲಯ, ಒಳಗೆ ಇದೇ ಬೆಳಕು. ನವಕಾರ್ ಮಹಾಮಂತ್ರದ ಈ ಆಧ್ಯಾತ್ಮಿಕ ಶಕ್ತಿಯನ್ನು ನಾನು ಇನ್ನೂ ನನ್ನೊಳಗೆ ಅನುಭವಿಸುತ್ತಿದ್ದೇನೆ. ಕೆಲವು ವರ್ಷಗಳ ಹಿಂದೆ, ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣಕ್ಕೆ ನಾನು ಸಾಕ್ಷಿಯಾಗಿದ್ದೆ, ಇಂದು ನನಗೆ ಅದೇ ಭಾವನೆ ಮತ್ತು ಅದೇ ಆಳವಿದೆ. ಈ ಬಾರಿ ಲಕ್ಷಾಂತರ ಪುಣ್ಯಾತ್ಮರು ಒಂದೇ ಪ್ರಜ್ಞೆಯೊಂದಿಗೆ ಸಂಪರ್ಕ ಹೊಂದಿದ್ದಾರೆ, ಒಟ್ಟಿಗೆ ಮಾತನಾಡುವ ಪದಗಳು, ಒಟ್ಟಿಗೆ ಶಕ್ತಿ ಜಾಗೃತಗೊಂಡಿವೆ, ಭಾರತ ಮತ್ತು ವಿದೇಶಗಳಲ್ಲಿ, ಇದು ನಿಜವಾಗಿಯೂ ಹಿಂದೆಂದೂ ಕಾಣದ ಅಪೂರ್ವ ಕ್ಷಣವಾಗಿದೆ.ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
April 09th, 07:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನವಕರ್ ಮಹಾಮಂತ್ರ ದಿನವನ್ನು ಉದ್ಘಾಟಿಸಿದರು ಮತ್ತು ಅದರಲ್ಲಿ ಭಾಗವಹಿಸಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವಕರ್ ಮಂತ್ರದ ಆಳವಾದ ಆಧ್ಯಾತ್ಮಿಕ ಅನುಭವವನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಮನಸ್ಸಿಗೆ ಶಾಂತಿ ಮತ್ತು ಸ್ಥಿರತೆಯನ್ನು ತರುವ ಸಾಮರ್ಥ್ಯವನ್ನು ಒತ್ತಿ ಹೇಳಿದರು. ಪದಗಳು ಮತ್ತು ಆಲೋಚನೆಗಳನ್ನು ಮೀರಿದ, ಮನಸ್ಸು ಮತ್ತು ಪ್ರಜ್ಞೆಯೊಳಗೆ ಆಳವಾಗಿ ಪ್ರತಿಧ್ವನಿಸುವ ಅಸಾಧಾರಣ ಶಾಂತಿಯ ಭಾವನೆಯ ಬಗ್ಗೆ ಅವರು ಮಾತನಾಡಿದರು. ನವಕರ್ ಮಂತ್ರದ ಮಹತ್ವವನ್ನು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು, ಅದರ ಪವಿತ್ರ ಶ್ಲೋಕಗಳನ್ನು ಪಠಿಸಿದರು ಮತ್ತು ಮಂತ್ರವನ್ನು ಶಕ್ತಿಯ ನಿರಂತರ ಹರಿವು, ಸ್ಥಿರತೆ, ಸಮಚಿತ್ತತೆ ಮತ್ತು ಪ್ರಜ್ಞೆ ಮತ್ತು ಆಂತರಿಕ ಬೆಳಕಿನ ಸಾಮರಸ್ಯದ ಲಯವನ್ನು ಸಾಕಾರಗೊಳಿಸುತ್ತದೆ ಎಂದು ವಿವರಿಸಿದರು. ತಮ್ಮ ವೈಯಕ್ತಿಕ ಅನುಭವದ ಬೆಳಕು ಚೆಲ್ಲುತ್ತಾ, ನವಕರ್ ಮಂತ್ರದ ಆಧ್ಯಾತ್ಮಿಕ ಶಕ್ತಿಯನ್ನು ತಮ್ಮೊಳಗೆ ಹೇಗೆ ಅನುಭವಿಸುತ್ತಿದ್ದಾರೆ ಎಂಬುದನ್ನು ಅವರು ಹಂಚಿಕೊಂಡರು. ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಇದೇ ರೀತಿಯ ಸಾಮೂಹಿಕ ಮಂತ್ರ ಪಠಣ ಕಾರ್ಯಕ್ರಮವನ್ನು ವೀಕ್ಷಿಸಿದ ಅವರು, ಅದು ತನ್ನ ಮೇಲೆ ಗಾಢ ಪ್ರಭಾವ ಬೀರಿತು ಎಂದರು. ದೇಶ ಮತ್ತು ವಿದೇಶಗಳಾದ್ಯಂತ ಲಕ್ಷಾಂತರ ಸದ್ಗುಣಶೀಲ ಆತ್ಮಗಳು ಏಕೀಕೃತ ಪ್ರಜ್ಞೆಯಲ್ಲಿ ಒಟ್ಟಿಗೆ ಸೇರುವ ಅಪ್ರತಿಮ ಅನುಭವವನ್ನು ಪ್ರಧಾನಿ ಪ್ರಮುಖವಾಗಿ ಉಲ್ಲೇಖಿಸಿದರು. ಸಾಮೂಹಿಕ ಶಕ್ತಿ ಮತ್ತು ಮೇಳೈಸಿದ ಪದಗಳ ಬಗ್ಗೆ ಅವರು ಉಲ್ಲೇಖಿಸಿ, ಇದು ನಿಜವಾಗಿಯೂ ಅಸಾಧಾರಣ ಮತ್ತು ಅಭೂತಪೂರ್ವ ಎಂದು ವಿವರಿಸಿದರು.ಪಾಲಿಯಲ್ಲಿ ಟಿಪಿಟಕ ಪ್ರತಿ ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ
April 03rd, 05:43 pm
ಪಾಲಿಯಲ್ಲಿರುವ ಟಿಪಿಟಕದ ಪ್ರತಿಯನ್ನು ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಭಗವಾನ್ ಬುದ್ಧನ ಬೋಧನೆಗಳ ಸಾರವನ್ನು ಹೊಂದಿರುವ ಪಾಲಿ ಸುಂದರವಾದ ಭಾಷೆ ಎಂದು ಬಣ್ಣಿಸಿದ್ದಾರೆ.ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಥೈಲ್ಯಾಂಡ್ ನ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
February 14th, 08:30 am
ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ನಿಮ್ಮೆಲ್ಲರೊಂದಿಗೆ ಭಾಗಿಯಾಗುತ್ತಿರುವುದು ನನಗೆ ಗೌರವ ತಂದಿದೆ. ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಾರೆ, ಆ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ ಹಾಗೂ ಭಾಗವಹಿಸಿದ ಎಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಥೈಲ್ಯಾಂಡ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ
February 14th, 08:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಲ್ಯಾಂಡ್‌ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವಿಡಿಯೋ ಸಂದೇಶದ ಮೂಲಕ ತಮ್ಮ ಹೇಳಿಕೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಥೈಲ್ಯಾಂಡ್‌ನಲ್ಲಿ ಸಂವಾದ ಆವೃತ್ತಿಯಲ್ಲಿ ಭಾಗಿಯಾಗುತ್ತಿರುವುದು ತಮಗೆ ಗೌರವ ತಂದಿದೆ, ಈ ಕಾರ್ಯಕ್ರಮವನ್ನು ಸಾಧ್ಯವಾಗಿಸಿದ್ದಕ್ಕಾಗಿ ಭಾರತ, ಜಪಾನ್ ಮತ್ತು ಥೈಲ್ಯಾಂಡ್‌ನ ಪ್ರತಿಷ್ಠಿತ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ಶ್ಲಾಘಿಸಿದರು. ಹಾಗೂ ಭಾಗವಹಿಸಿದ ಎಲ್ಲರಿಗೂ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಪಾಲಿ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡುವ ಭಾರತ ಸರ್ಕಾರದ ನಿರ್ಧಾರವು ಭಗವಾನ್ ಬುದ್ಧನ ಚಿಂತನೆಗಳನ್ನು ಪಾಲಿಸುವವರಲ್ಲಿ ಸಂತೋಷದ ಮನೋಭಾವವನ್ನು ಹುಟ್ಟುಹಾಕಿದೆ: ಪ್ರಧಾನಮಂತ್ರಿ
October 24th, 10:43 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡುವ ಭಾರತ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದರು. ಭಗವಾನ್ ಬುದ್ಧನ ಚಿಂತನೆಗಳನ್ನು ನಂಬುವವರಲ್ಲಿ ಇದು ಸಂತೋಷದ ಮನೋಭಾವವನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು. ಕೊಲಂಬೋದಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಆಯೋಜಿಸಿದ್ದ 'ಪಾಲಿ ಒಂದು ಶಾಸ್ತ್ರೀಯ ಭಾಷೆ' ಕುರಿತಾದ ಚರ್ಚೆಯಲ್ಲಿ ಭಾಗವಹಿಸಿದ ವಿವಿಧ ರಾಷ್ಟ್ರಗಳ ವಿದ್ವಾಂಸರು ಮತ್ತು ಸನ್ಯಾಸಿಗಳಿಗೆ ಶ್ರೀ ಮೋದಿಯವರು ಧನ್ಯವಾದ ಅರ್ಪಿಸಿದರು.ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಅಂತಾರಾಷ್ಟ್ರೀಯ ಅಭಿದಮ್ಮ ದಿವಸ್ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯನ್ನಾಗಿ ಗುರುತಿಸಿದ ಅಂಗವಾಗಿ ಅಕ್ಟೋಬರ್ 17 ರಂದು ಏರ್ಪಾಡಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
October 15th, 09:14 pm
ಅಂತಾರಾಷ್ಟ್ರೀಯ ಅಭಿದಮ್ಮ ದಿವಸ್ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯನ್ನಾಗಿ ಗುರುತಿಸಿದ ಅಂಗವಾಗಿ ನವದೆಹಲಿಯ ವಿಜ್ಞಾನ ಭವನದಲ್ಲಿ ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ಆಯೋಜನೆಯಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ನೆರೆದಿರುವವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.