ಹರಿಯಾಣದ ಪಾಣಿಪತ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
December 09th, 05:54 pm
ಹರಿಯ ವಾಸಸ್ಥಾನ ಹರಿಯಾಣ, ಮತ್ತು ಇಲ್ಲಿ ಎಲ್ಲರೂ ಹೃತ್ಪೂರ್ವಕವಾಗಿ 'ರಾಮ್ ರಾಮ್' ಎಂದು ಪರಸ್ಪರ ಶುಭಾಶಯ ಕೋರುತ್ತಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ ಐ ಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಿದರು
December 09th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಪಾಣಿಪತ್ ನಲ್ಲಿ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಒಳಗೊಳ್ಳುವಿಕೆಯ ತಮ್ಮ ಬದ್ಧತೆಗೆ ಅನುಗುಣವಾಗಿ ಭಾರತೀಯ ಜೀವ ವಿಮಾ ನಿಗಮದ ‘ಬಿಮಾ ಸಖಿ ಯೋಜನೆʼಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಕರ್ನಾಲ್ ನಲ್ಲಿರುವ ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ ಗೆ ಶಂಕುಸ್ಥಾಪನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಭಾರತವು ಮಹಿಳಾ ಸಬಲೀಕರಣದತ್ತ ಮತ್ತೊಂದು ಬಲವಾದ ಹೆಜ್ಜೆ ಇಡುತ್ತಿದೆ ಎಂದು ಹೇಳಿದರು. ಇಂದು ತಿಂಗಳ 9ನೇ ದಿನವಾಗಿರುವುದು ವಿಶೇಷವಾಗಿದೆ ಏಕೆಂದರೆ ನಮ್ಮ ಧರ್ಮಗ್ರಂಥಗಳಲ್ಲಿ 9 ನೇ ಸಂಖ್ಯೆಯನ್ನು ಮಂಗಳಕರವೆಂದು ಪರಿಗಣಿಸಲಾಗಿದೆ ಮತ್ತು ಇದು ನವರಾತ್ರಿಯಲ್ಲಿ ಪೂಜಿಸುವ ನವದುರ್ಗೆಯ ಒಂಬತ್ತು ರೂಪಗಳೊಂದಿಗೆ ಸಂಬಂಧ ಹೊಂದಿದೆ ಎಂದು ಅವರು ಹೇಳಿದರು. ಇಂದು ಸ್ತ್ರೀಶಕ್ತಿಯನ್ನು ಆರಾಧಿಸುವ ದಿನವೂ ಆಗಿದೆ ಎಂದರು.ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಪ್ರಧಾನಮಂತ್ರಿ ಭೇಟಿ
December 08th, 09:46 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 9 ರಂದು ರಾಜಸ್ಥಾನ ಮತ್ತು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೈಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಬೆಳಿಗ್ಗೆ 10:30 ರ ಸುಮಾರಿಗೆ ಜೈಪುರ ಪ್ರದರ್ಶನ ಮತ್ತು ಕನ್ವೆನ್ಷನ್ ಸೆಂಟರ್ (ಜೆಇಸಿಸಿ) ನಲ್ಲಿ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆ 2024 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ಪಾಣಿಪತ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2 ಗಂಟೆಗೆ ಅವರು ಎಲ್‌ಐಸಿಯ ಬಿಮಾ ಸಖಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಮತ್ತು ಮಹಾರಾಣಾ ಪ್ರತಾಪ್ ತೋಟಗಾರಿಕಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.