ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್ ಮತ್ತು ಅಸ್ಸಾಂನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.
February 10th, 05:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2026ರ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಪಿಪಿಸಿ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್ ಮತ್ತು ಅಸ್ಸಾಂನ ಪರೀಕ್ಷಾ ಯೋಧರೊಂದಿಗೆ ಪ್ರಧಾನಮಂತ್ರಿ ಅವರು ಅನೌಪಚಾರಿಕ ಸಂವಾದ ನಡೆಸಿದರು. ‘ಪರೀಕ್ಷಾ ಪೇ ಚರ್ಚಾ’ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿನಡೆಸಲಾಗಿದೆ ಎಂದು ಹೇಳಿದರು.2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
February 09th, 10:30 am
ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.ವಿದ್ಯಾರ್ಥಿಗಳ ಅಪರಿಮಿತ ಸಾಮರ್ಥ್ಯ ಮತ್ತು 'ಪರೀಕ್ಷಾ ಪೇ ಚರ್ಚಾ'ದ ಸ್ಫೂರ್ತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
February 09th, 09:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ನಮ್ಮ ವಿದ್ಯಾರ್ಥಿಗಳು ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದಾರೆ ಮತ್ತು ಅವರ ಕನಸುಗಳನ್ನು ನನಸು ಮಾಡಿಕೊಳ್ಳುವ ಸಂಪೂರ್ಣ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವೈಯಕ್ತಿಕ ಬೆಳವಣಿಗೆ ಮತ್ತು ಯಶಸ್ಸಿಗೆ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಅರ್ಥಪೂರ್ಣವಾಗಿ ಹೇಗೆ ಬಳಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುವುದು ಪರೀಕ್ಷಾ ಪೇ ಚರ್ಚಾದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.“ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಧಾನಮಂತ್ರಿ ಅವರ ಸಂವಾದ
February 06th, 10:21 am
ನಾನು ಸಾನ್ವಿ ಆಚಾರ್ಯ, ನಿಮ್ಮ ಸ್ವಂತ ರಾಜ್ಯ ಗುಜರಾತ್ ನವನು. ನನ್ನ ಮೊದಲ ಪ್ರಶ್ನೆ ಇದು: ಪೋಷಕರು ನಮ್ಮ ಬಗ್ಗೆ ಚಿಂತಿಸುತ್ತಾರೆ, ಶಿಕ್ಷಕರು ನಮ್ಮನ್ನು ಬೆಂಬಲಿಸುತ್ತಾರೆ. ಆದರೆ ಶಿಕ್ಷಕರು ಒಂದು ಅಧ್ಯಯನ ಮಾದರಿ ಸೂಚಿಸಿದಾಗ, ಪೋಷಕರು ಇನ್ನೊಂದನ್ನು ಒತ್ತಾಯಿಸುತ್ತಾರೆ, ಆದರೆ ವಿದ್ಯಾರ್ಥಿಗಳ ಮಾದರಿಯೇ ಇನ್ನೊಂದು ಇದ್ದಾಗ ಮುಖ್ಯ ಸಮಸ್ಯೆ ಉದ್ಭವಿಸುತ್ತದೆ. ಆ ಸಮಯದಲ್ಲಿ, ಯಾವ ಮಾದರಿ ಸರಿಯಾಗಿದೆ ಎಂಬುದರ ಬಗ್ಗೆ ನಮಗೆ ಗೊಂದಲವಾಗುತ್ತದೆಪರೀಕ್ಷಾ ಪೇ ಚರ್ಚಾ 2026 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂವಾದ
February 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು 9ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ(ಪಿಪಿಸಿ) ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಪರೀಕ್ಷಾ ಯೋಧರೊಂದಿಗೆ ಅನೌಪಚಾರಿಕ ಸಂವಾದ ನಡೆಸಿದರು.ದೇವಮೋಗ್ರ, ಕೊಯಮತ್ತೂರು, ರಾಯ್‌ಪುರ, ಗುವಾಹಟಿ ಮತ್ತು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿ ಪರೀಕ್ಷಾ ಯೋಧರೊಂದಿಗೆ ನಡೆದ ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಯನ್ನು ವೀಕ್ಷಿಸಲು ಪ್ರಧಾನಮಂತ್ರಿ ಅವರು ಎಲ್ಲರಿಗೂ ಕರೆ ನೀಡಿದ್ದಾರೆ
February 03rd, 04:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 6, 2026 ರಂದು ಭಾರತದ ಯುವಕರ ಈ ಆಕರ್ಷಕ ಸಂಭಾಷಣೆಗಳು ಮತ್ತು ಸಾಮೂಹಿಕ ಮನೋಭಾವವನ್ನು ವೀಕ್ಷಿಸಲು ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಗೆ ನಾಗರಿಕರನ್ನು ಇಂದು ಆಹ್ವಾನಿಸಿದ್ದಾರೆ.ಈ ವರ್ಷದ #ParikshaPeCharcha ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ
January 07th, 07:05 pm
ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾದ #ParikshaPeCharcha ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಮೂಲಕ ನಡೆಸಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ
March 30th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ಯೋಗಕ್ಷೇಮ, ಸ್ವಾಸ್ಥ್ಯ ಮತ್ತು ಮಾನಸಿಕ ಶಾಂತಿಯ ವಿಷಯಗಳು ಬಂದಾಗ, ಸದ್ಗುರು ಜಗ್ಗಿ ವಾಸುದೇವ್ ಅವರು ಯಾವಾಗಲೂ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿಗಳಲ್ಲಿ ಒಬ್ಬರಾಗಿರುತ್ತಾರೆ: ಪ್ರಧಾನಮಂತ್ರಿ
February 14th, 08:15 pm
ಸದ್ಗುರು ಜಗ್ಗಿ ವಾಸುದೇವ್ ಅವರು ಕ್ಷೇಮ ಮತ್ತು ಮಾನಸಿಕ ಶಾಂತಿಯ ವಿಚಾರದಲ್ಲಿ ಸದಾ ಸ್ಪೂರ್ತಿದಾಯಕ ವ್ಯಕ್ತಿಗಳಲ್ಲೊಬ್ಬರು ಎಂದು ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆಯ ಪರೀಕ್ಷಾ ಪೇ ಚರ್ಚಾದ 4ನೇ ಸಂಚಿಕೆಯನ್ನು ಎಲ್ಲರೂ ವೀಕ್ಷಿಸುವಂತೆ ಕರೆ ನೀಡಿದರು.Politics is about winning people's hearts, says PM Modi in podcast with Nikhil Kamath
January 10th, 02:15 pm
Prime Minister Narendra Modi engages in a deep and insightful conversation with entrepreneur and investor Nikhil Kamath. In this discussion, they explore India's remarkable growth journey, PM Modi's personal life story, the challenges he has faced, his successes and the crucial role of youth in shaping the future of politics.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ನಲ್ಲಿ ಉದ್ಯಮಿ ನಿಖಿಲ್ ಕಾಮತ್ ಅವರೊಂದಿಗೆ ಸಂವಾದ ನಡೆಸಿದರು
January 10th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಮೊದಲ ಪಾಡ್ಕ್ಯಾಸ್ಟ್ನಲ್ಲಿ ಉದ್ಯಮಿ ಮತ್ತು ಹೂಡಿಕೆದಾರ ನಿಖಿಲ್ ಕಾಮತ್ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದರು. ಅವರ ಬಾಲ್ಯದ ಬಗ್ಗೆ ಕೇಳಿದಾಗ, ಪ್ರಧಾನಿಯವರು ತಮ್ಮ ಆರಂಭಿಕ ಜೀವನದ ಅನುಭವಗಳನ್ನು ಹಂಚಿಕೊಂಡರು ಮತ್ತು ಉತ್ತರ ಗುಜರಾತ್ ನ ಮೆಹ್ಸಾನಾ ಜಿಲ್ಲೆಯ ಸಣ್ಣ ಪಟ್ಟಣವಾದ ವಡ್ನಗರದಲ್ಲಿನ ತಮ್ಮ ಮೂಲದ ಬಗ್ಗೆ ಮಾತನಾಡಿದರು. ಗಾಯಕ್ವಾಡ್ ಸಾಮ್ರಾಜ್ಯದ ವಡ್ನಗರ ಪಟ್ಟಣವು ಶಿಕ್ಷಣದ ಬಗೆಗಿನ ತನ್ನ ಬದ್ಧತೆಗೆ ಹೆಸರುವಾಸಿಯಾಗಿದ್ದು, ಕೊಳ, ಅಂಚೆ ಕಚೇರಿ ಮತ್ತು ಗ್ರಂಥಾಲಯದಂತಹ ಅಗತ್ಯ ಸೌಲಭ್ಯಗಳನ್ನು ಹೊಂದಿದೆ ಎಂದು ಅವರು ಹೇಳಿದರು. ಗಾಯಕ್ವಾಡ್ ರಾಜ್ಯ ಪ್ರಾಥಮಿಕ ಶಾಲೆ ಮತ್ತು ಭಾಗವತಾಚಾರ್ಯ ನಾರಾಯಣಾಚಾರ್ಯ ಪ್ರೌಢಶಾಲೆಯಲ್ಲಿ ಕಳೆದ ತಮ್ಮ ಶಾಲಾ ದಿನಗಳನ್ನು ಪ್ರಧಾನಮಂತ್ರಿಯವರು ನೆನೆದರು. ವಡ್ನಗರದಲ್ಲಿ ಸಾಕಷ್ಟು ಸಮಯ ಕಳೆದಿದ್ದ ಚೀನೀ ತತ್ವಜ್ಞಾನಿ ಕ್ಸುವಾನ್ ಜಾಂಗ್ ಅವರ ಕುರಿತು ನಿರ್ಮಿಸಲಾಗುತ್ತಿರುವ ಚಲನಚಿತ್ರದ ಬಗ್ಗೆ ಅವರು ಒಮ್ಮೆ ಚೀನೀ ರಾಯಭಾರ ಕಚೇರಿಗೆ ಬರೆದಿದ್ದರ ಬಗ್ಗೆ ಆಸಕ್ತಿದಾಯಕ ಮಾಹಿತಿಯನ್ನು ಹಂಚಿಕೊಂಡರು. 2014 ರಲ್ಲಿ ತಾವು ಭಾರತದ ಪ್ರಧಾನಿಯಾದಾಗ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಕ್ಸುವಾನ್ಜಾಂಗ್ ಮತ್ತು ತಮ್ಮ ಊರುಗಳ ನಡುವಿನ ಐತಿಹಾಸಿಕ ಸಂಬಂಧವನ್ನು ಉಲ್ಲೇಖಿಸಿ ಗುಜರಾತ್ ಮತ್ತು ವಡ್ನಗರಕ್ಕೆ ಭೇಟಿ ನೀಡುವ ಬಯಕೆಯನ್ನು ವ್ಯಕ್ತಪಡಿಸಿದ್ದನ್ನು ಪ್ರಧಾನಮಂತ್ರಿಯವರು ನೆನಪಿಸಿಕೊಂಡರು. ಈ ಸಂಪರ್ಕವು ಎರಡೂ ದೇಶಗಳ ನಡುವಿನ ಹಂಚಿಕೆಯ ಪರಂಪರೆ ಮತ್ತು ಬಲವಾದ ಸಂಬಂಧಗಳನ್ನು ಎತ್ತಿ ತೋರಿಸಿದೆ ಎಂದು ಅವರು ಹೇಳಿದರು.National Creator Awards is giving identity to the new era before its onset: PM Modi
March 08th, 10:46 am
PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.PM presents first-ever National Creators Award
March 08th, 10:45 am
PM Modi presented the first-ever National Creators Award today at Bharat Mandapam. He underlined that it is the country’s responsibility to walk side by side with the change of times and the advent of a new era and said that the nation is fulfilling that responsibility today with the first-ever National Creator Awards.ಪರೀಕ್ಷಾ ಪೇ ಚರ್ಚಾವನ್ನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ: ಪ್ರಧಾನಮಂತ್ರಿ
January 27th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' ಸಭೆಯನ್ನು ಕುತೂಹಲದಿಂದ ಎದುರು ನೋಡುತ್ತಿರುವುದಾಗಿ ಹೇಳಿದರು.ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಗುರಿ ಹೊಂದಿದೆ, ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ: ಪ್ರಧಾನಿ
December 14th, 11:22 pm
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವು ವಿದ್ಯಾರ್ಥಿಗಳ ಒತ್ತಡವನ್ನು ಯಶಸ್ಸಿಗೆ ಪರಿವರ್ತಿಸುವ ಉದಾತ್ತ ಗುರಿ ಹೊಂದಿದೆ. ಪರೀಕ್ಷಾ ಯೋಧರು ನಗು ಮೊಗದಿಂದ ಪರೀಕ್ಷೆಗಳನ್ನು ಎದುರಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು,ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶ ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು: ಪ್ರಧಾನಮಂತ್ರಿ
February 25th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಪರೀಕ್ಷೆ ಸಂಬಂಧಿತ ಒತ್ತಡದಿಂದ ಮುಕ್ತವಾಗಿರಿಸುವುದು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಜಾರ್ಖಂಡ್ ನ ಕೊಡರ್ಮಾದ ಶಾಲೆಯೊಂದರ ವಿದ್ಯಾರ್ಥಿಗಳು ಎಕ್ಸಾಮ್ ವಾರಿಯರ್ಸ್ ಕಿರುಪುಸ್ತಕವನ್ನು ಓದಿದ ನಂತರ ಪರೀಕ್ಷಾ ಸಂಬಂಧಿತ ಉದ್ವೇಗದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರು ಮಾಹಿತಿ ನೀಡಿದ ಅವರ ಟ್ವೀಟ್ ಗೆ ಶ್ರೀ ನರೇಂದ್ರ ಮೋದಿ ಅವರು ಪ್ರತಿಕ್ರಿಯಿಸಿದ್ದಾರೆ.ಪರೀಕ್ಷಾ ಪೇ ಚರ್ಚಾ ಕುರಿತು ಮಂತ್ರಗಳು ಮತ್ತು ಚಟುವಟಿಕೆಗಳ ಆಸಕ್ತಿದಾಯಕ ಭಂಡಾರವನ್ನು ಹಂಚಿಕೊಂಡ ಪ್ರಧಾನ ಮಂತ್ರಿ
January 12th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ ಕುರಿತ ಮಂತ್ರಗಳು ಮತ್ತು ಚಟುವಟಿಕೆಗಳ ಆಸಕ್ತಿದಾಯಕ ಭಂಡಾರವನ್ನು ಹಂಚಿಕೊಂಡಿದ್ದಾರೆ, ಇದು ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.