ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಭಾರತಕ್ಕೆ ಆಗಮಿಸಿದ ಫ್ರಾನ್ಸ್ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಮಂತ್ರಿ, ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಪ್ರಸ್ತಾಪ
February 17th, 09:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಈ ಭೇಟಿ ಭಾರತ-ಫ್ರಾನ್ಸ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ ಎಂಬ ವಿಶ್ವಾಸವಿದೆ ತಿಳಿಸಿದರು.ಫೆಬ್ರವರಿ 17 ರಂದು ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷರಾದ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿರುವ ಪ್ರಧಾನಮಂತ್ರಿ
February 16th, 09:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 17 ರಂದು ಮುಂಬೈಗೆ ಪ್ರಯಾಣಿಸಲಿದ್ದು, ಅಲ್ಲಿ ಅವರು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಮಲೇಷ್ಯಾ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರೊಂದಿಗೆ ನಡೆದ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 08th, 08:20 am
ನನ್ನ ಮಿತ್ರರಾದ ಪ್ರಧಾನಮಂತ್ರಿಗಳೇ, ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ನಿಯೋಗಕ್ಕೆ ಮತ್ತು ನನಗೆ ನೀಡಿದ ಸ್ವಾಗತದ ರೀತಿ, ಹಾಗೂ ಕೇವಲ ಕೆಲವು ಗಂಟೆಗಳಲ್ಲಿ ಮಲೇಷ್ಯಾದ ಜೀವನದ ಸಾರವನ್ನು ಸಂಪ್ರದಾಯಗಳನ್ನೂ ಮೀರಿ ಅತ್ಯಂತ ಸುಂದರವಾಗಿ ನೀವು ಪ್ರಸ್ತುತಪಡಿಸಿದ ರೀತಿ ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚಳಿಯದೆ ಉಳಿಯುತ್ತದೆ. ಇದಕ್ಕಾಗಿ ನಾನು ನನ್ನ ಆಳವಾದ ಪ್ರಶಂಸೆಯನ್ನು ವ್ಯಕ್ತಪಡಿಸುತ್ತೇನೆ. ಸ್ನೇಹ ಎಂದರೆ ಏನು, ಅದರ ಎತ್ತರ ಮತ್ತು ಆಳಗಳು ಎಂಥವು ಎಂಬುದನ್ನು ನಾನು ಇಂದು ನಿಜವಾಗಿಯೂ ಅನುಭವಿಸಿದ್ದೇನೆ ಮತ್ತು ಅದಕ್ಕಾಗಿ ನಾನು ನಿಮಗೆ ಚಿರಋಣಿಯಾಗಿದ್ದೇನೆ.