ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ

February 09th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.

ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 09th, 01:00 pm

ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಸೆಶೆಲ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 12th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಶೆಲ್ಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.