ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

April 15th, 11:10 am

ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

April 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.

"Precious Moments": A sneak-peek into PM Modi's early morning routine!

August 23rd, 12:49 pm

Prime Minister Narendra Modi took to Instagram and shared precious moments from his early morning routine at his residence.