Prime Minister calls upon youth to work together, to work for Bharat

July 31st, 11:47 pm

The Prime Minister, Shri Narendra Modi, has said that abuses never solve anything and called upon people to guide those who have gone astray.

Prime Minister receives telephone call from Prime Minister of the United Kingdom

July 31st, 07:28 pm

In a telephone conversation with UK PM Andy Burnham, PM Modi congratulated him on assuming office. The two leaders discussed ways to further strengthen the India-UK Comprehensive Strategic Partnership and agreed to deepen cooperation across priority areas. They also exchanged views on issues of mutual interest and welcomed the recent entry into force of the India-UK CETA.

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆಂಡಿ ಬರ್ನಹ್ಯಾಮ್ ಅವರನ್ನು ಅಭಿನಂದಿಸಿದ್ದಾರೆ

July 21st, 08:09 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಆಂಡಿ ಬರ್ನ್‌ಹ್ಯಾಮ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

Prime Minister speaks with the Amir of Qatar

July 16th, 09:35 pm

Prime Minister Shri Narendra Modi had a telephone conversation today with the Amir of the State of Qatar, H.H. Sheikh Tamim bin Hamad Al Thani.

ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ಅದ್ಧೂರಿ ಭೋಜನಕೂಟ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 11th, 12:32 pm

ಕಳೆದ ವರ್ಷ ಪ್ರಧಾನ ಮಂತ್ರಿ ಲಕ್ಸನ್ ಅವರ ಭಾರತ ಭೇಟಿಯು ನಮ್ಮ ದ್ವಿಪಕ್ಷೀಯ ಸಂಬಂಧದ ಪ್ರತಿಯೊಂದು ಅಂಶಕ್ಕೂ ಹೊಸ ಶಕ್ತಿ ತುಂಬಿತು. ಅವರ ನಾಯಕತ್ವ, ಸ್ಪಷ್ಟ ದೃಷ್ಟಿಕೋನ ಮತ್ತು ಬಲವಾದ ಬದ್ಧತೆಯಡಿ, ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸ್ನೇಹವು ಹೊಸ ಆವೇಗ ಮತ್ತು ಹೊಸ ದಿಕ್ಕನ್ನು ಪಡೆದುಕೊಂಡಿದೆ. 40 ವರ್ಷಗಳಲ್ಲಿ ಭಾರತೀಯ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡಿದ ಮೊದಲ ಭೇಟಿ ಇದಾಗಿದೆ. ನಾನು ಆಗಾಗ್ಗೆ ಹೇಳುವಂತೆ, ನನಗಿಂತ ಮೊದಲು ಬಂದವರು ನನಗಾಗಿ ಅನೇಕ ಉತ್ತಮ ಕಾರ್ಯಗಳನ್ನು ಬಿಟ್ಟು ಹೋಗಿದ್ದಾ, ಅವುಗಳನ್ನು ಪೂರ್ಣಗೊಳಿಸುವ ಸೌಭಾಗ್ಯ ನನಗಿದೆ. ಸ್ನೇಹಿತರೆ, ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತಿದೆ.

"ಭಾರತ-ನ್ಯೂಜಿಲೆಂಡ್: ಒಂದು ಯಶಸ್ವಿ ಪಾಲುದಾರಿಕೆ" ಎಂಬ ವಿಷಯದ ಮೇಲೆ ನ್ಯೂಜಿಲೆಂಡ್ ಪ್ರಧಾನಮಂತ್ರಿ ಅವರು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

July 11th, 12:30 pm

ನ್ಯೂಜಿಲೆಂಡ್ ಪ್ರಧಾನಮಂತ್ರಿ ಅವರಾದ ಮಾನ್ಯ ಕ್ರಿಸ್ಟೋಫರ್ ಅವರು ಆಯೋಜಿಸಿದ್ದ ಭಾರತ-ನ್ಯೂಜಿಲೆಂಡ್: ಒಂದು ಯಶಸ್ವಿ ಪಾಲುದಾರಿಕೆ ಎಂಬ ವಿಷಯಾಧಾರಿತ ವಿಶೇಷ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಅವರಾದ ಶ್ರೀ ನರೇಂದ್ರ ಮೋದಿಯವರು ಭಾಗವಹಿಸಿದ್ದರು. ರಾಜಕೀಯ, ವ್ಯಾಪಾರ, ಕೈಗಾರಿಕೆ, ಶಿಕ್ಷಣ, ತಂತ್ರಜ್ಞಾನ, ಕ್ರೀಡೆ ಮತ್ತು ಕಲೆ ಮುಂತಾದ ಕ್ಷೇತ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ

July 11th, 08:03 am

ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 03:22 pm

ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಧಾನಮಂತ್ರಿ ಅವರು ಆಸ್ಟ್ರೇಲಿಯಾದ ಗವರ್ನರ್ ಜನರಲ್ ಅವರನ್ನು ಭೇಟಿ ಮಾಡಿದರು

July 09th, 01:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನಲ್ಲಿ ಆಸ್ಟ್ರೇಲಿಯಾದ ಗವರ್ನರ್ ಜನರಲ್ ಗೌರವಾನ್ವಿತ ಸ್ಯಾಮ್ ಮೋಸ್ಟಿನ್ ಎಸಿ ಅವರನ್ನು ಭೇಟಿ ಮಾಡಿದರು.

3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

July 09th, 12:29 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 11:47 pm

ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!

ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

July 07th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.

India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ'ವನ್ನು ಆ ದೇಶದ ರಾಷ್ಟ್ರಾಧ್ಯಕ್ಷರು ಪ್ರಧಾನಮಂತ್ರಿ ಅವರಿಗೆ ಪ್ರದಾನ ಮಾಡಿದರು

July 07th, 03:27 pm

ಇಂಡೋನೇಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಇಂದು 'ಇಂಡೋನೇಷ್ಯಾ ಗಣರಾಜ್ಯದ ಬಿಂಟಾಂಗ್ ಆದಿಪೂರ್ಣ' ಪದಕದವನ್ನು ಗೌರವಪೂರ್ಣವಾಗಿ ಪ್ರಧಾನಮಂತ್ರಿಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಇಂಡೋನೇಷ್ಯಾ ಗಣರಾಜ್ಯದ ಅತ್ಯುನ್ನತ ನಾಗರಿಕ ಗೌರವವಾಗಿದೆ. ಭಾರತ-ಇಂಡೋನೇಷ್ಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಧಾನಮಂತ್ರಿಯವರ ನಾಯಕತ್ವ ಮತ್ತು ಅಸಾಧಾರಣ ಕೊಡುಗೆಗಾಗಿ ಇದನ್ನು ಪ್ರಧಾನಮಂತ್ರಿಯವರಿಗೆ ನೀಡಲಾಯಿತು. ಪ್ರಧಾನಮಂತ್ರಿಯವರು ಈ ಪ್ರಶಸ್ತಿಯನ್ನು ಭಾರತ ಮತ್ತು ಇಂಡೋನೇಷ್ಯಾ ಜನರಿಗೆ ಮತ್ತು ಎರಡೂ ದೇಶಗಳ ನಡುವಿನ ಶಾಶ್ವತ ನಾಗರಿಕ ಸಂಬಂಧಗಳಿಗೆ ಅರ್ಪಿಸಿದ್ದಾರೆ.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.