ಭಾರತದ 80ನೇ ಸ್ವಾತಂತ್ರ್ಯೋತ್ಸವಕ್ಕೆ ಆತ್ಮೀಯವಾಗಿ ಶುಭ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಕೃತಜ್ಞತೆ

August 15th, 05:48 pm

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಶುಭಾಶಯ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ವಿಶ್ವೆದೆಲ್ಲೆಡೆಗಳಿಂದ ಸ್ವೀಕೃತವಾದ ಸಂದೇಶಗಳಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 11:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಾಟಿಸ್ಲಾವಾದ ಅಧ್ಯಕ್ಷರ ಭವನದಲ್ಲಿ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿದರು.

ಪ್ರಧಾನಿ ಮೋದಿ ಸ್ಲೋವಾಕಿಯಾಕ್ಕೆ ಆಗಮಿಸಿದರು

June 15th, 02:15 am

ಪ್ರಧಾನಿ ಮೋದಿ ಅವರು ಸ್ಲೋವಾಕಿಯಾದ ಬ್ರಾಟಿಸ್ಲಾವಾಗೆ ಆಗಮಿಸಿದ್ದು, ಭಾರತ-ಸ್ಲೋವಾಕಿಯಾ ಸಂಬಂಧದಲ್ಲಿ ಪ್ರಮುಖ ಮೈಲಿಗಲ್ಲು ಗುರುತಿಸಿದ್ದಾರೆ. ಆಗಮಿಸಿದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

June 13th, 10:03 am

ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.

ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ಪ್ರಧಾನಮಂತ್ರಿ ಅವರ ಭೇಟಿ

June 09th, 07:20 pm

ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರಾನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 13 - 14 ಜೂನ್ 2026 (ನೈಸ್), ಮತ್ತು 16 - 19 ಜೂನ್ 2026 (ಎವಿಯನ್ ಮತ್ತು ಪ್ಯಾರಿಸ್) ರವರೆಗೆ ಫ್ರಾನ್ಸ್ ದೇಶಕ್ಕೆ, ಹಾಗೆಯೇ 14 - 16 ಜೂನ್ 2026 ರವರೆಗೆ ಸ್ಲೋವಾಕಿಯಾ ದೇಶಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಮೊದಲ ಹಂತದಲ್ಲಿ, ಪ್ರಧಾನಮಂತ್ರಿಯವರು ಜೂನ್ 14 ರಂದು ಅಧ್ಯಕ್ಷರಾದ ಮ್ಯಾಕ್ರಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಾಗಿ ನೈಸ್ ಗೆ ಭೇಟಿ ನೀಡಲಿದ್ದಾರೆ.

ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026: ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರೊಂದಿಗೆ ಪ್ರಧಾನಮಂತ್ರಿ ದ್ವಿಪಕ್ಷೀಯ ಸಭೆ

February 20th, 09:37 pm

ಪ್ರಸ್ತುತ ನವದೆಹಲಿಯಲ್ಲಿ ಫೆಬ್ರವರಿ ನಡೆಯುತ್ತಿರುವ ಭಾರತ-AI ಇಂಪ್ಯಾಕ್ಟ್ ಶೃಂಗಸಭೆ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು. ಇದು ಇಬ್ಬರು ನಾಯಕರ ನಡುವಿನ ಮೊದಲ ಸಭೆಯಾಗಿದೆ.