ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಅವರನ್ನು ಪ್ರಧಾನಮಂತ್ರಿಯವರು ಭೇಟಿ ಮಾಡಿದರು ಮತ್ತು ಭಾರತ-ಸೌದಿ ಅರೇಬಿಯಾ ವ್ಯೂಹಾತ್ಮಕ ಪಾಲುದಾರಿಕೆ ಮಂಡಳಿಯ ಸಹ-ಅಧ್ಯಕ್ಷತೆ ವಹಿಸಿದರು

April 23rd, 02:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 22, 2025 ರಂದು ಸೌದಿ ಅರೇಬಿಯಾ ರಾಜ್ಯಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಅವರನ್ನು ಜೆಡ್ಡಾದ ಮಹಾರಾಜರ ಅರಮನೆಯಲ್ಲಿ ಸೌದಿ ಅರೇಬಿಯಾದ ಯುವರಾಜ ಮತ್ತು ಮಹಾರಾಜ ಪರಂಪರೆಯ ಘನತೆವೆತ್ತ ಪ್ರಧಾನಮಂತ್ರಿ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

April 14th, 12:00 pm

ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು

April 14th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.

ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 10:35 am

ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

February 24th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.

ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 28th, 11:30 am

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!

ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

January 28th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.

ನಿಮ್ಮ ಆಸ್ತಿಯನ್ನು ಕಸಿದುಕೊಂಡು ಪಿತ್ರಾರ್ಜಿತ ತೆರಿಗೆ ವಿಧಿಸಲು ಕಾಂಗ್ರೆಸ್ ಬಯಸುತ್ತಿದೆ: ಸಾಗರದಲ್ಲಿ ಪ್ರಧಾನಿ ಮೋದಿ

April 24th, 03:00 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸಾಗರ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಸರ್ಕಾರಕ್ಕೆ ಜನರ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿಗಾಗಿ ಸ್ಥಿರ ಆಡಳಿತದ ಮಹತ್ವವನ್ನು ಒತ್ತಿ ಹೇಳಿದರು.

ಕಾಂಗ್ರೆಸ್ ನಿಮ್ಮ ಆಸ್ತಿಯನ್ನು ಲೂಟಿ ಮಾಡಲು ಬಯಸುತ್ತದೆ ಮತ್ತು ಅದನ್ನು ತನ್ನ ನೆಚ್ಚಿನ ಮತ ಬ್ಯಾಂಕ್‌ಗೆ ಹಂಚಲು ಬಯಸುತ್ತದೆ: ಬೆತುಲ್‌ನಲ್ಲಿ ಪ್ರಧಾನಿ

April 24th, 03:00 pm

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬೇತುಲ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಸರ್ಕಾರಕ್ಕೆ ಜನರ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿಗಾಗಿ ಸ್ಥಿರ ಆಡಳಿತದ ಮಹತ್ವವನ್ನು ಒತ್ತಿ ಹೇಳಿದರು.

ಪ್ರಧಾನಿ ಮೋದಿ ಮಧ್ಯಪ್ರದೇಶದ ಸಾಗರ್ ಮತ್ತು ಬೇತುಲ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 24th, 02:50 pm

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಾಗರ್ ಮತ್ತು ಬೇತುಲ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಸರ್ಕಾರಕ್ಕೆ ಜನರ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿಗಾಗಿ ಸ್ಥಿರ ಆಡಳಿತದ ಮಹತ್ವವನ್ನು ಒತ್ತಿ ಹೇಳಿದರು.

​​​​​​​ಗೋವಾದಲ್ಲಿ ನಡೆದ ಭಾರತ ಇಂಧನ ಸಪ್ತಾಹ 2024 ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ

February 06th, 12:00 pm

ಇದು ಭಾರತ ಇಂಧನ ಸಪ್ತಾಹದ ಎರಡನೇ ಆವೃತ್ತಿ, ನಾನು ನಿಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇದು ಕ್ರಿಯಾಶೀಲ ಶಕ್ತಿಗೆ ಹೆಸರಾದ ರಾಜ್ಯ ಗೋವಾದಲ್ಲಿ ನಡೆಯುತ್ತಿರುವುದು ನನಗೆ ಅತೀವ ಆನಂದ ತಂದಿದೆ. ತನ್ನ ಆತಿಥ್ಯಕ್ಕೆ ಹೆಸರುವಾಸಿಯಾದ ಗೋವಾ ತನ್ನ ಶ್ರೀಮಂತ ಸೌಂದರ್ಯ ಮತ್ತು ಸಂಸ್ಕೃತಿಯಿಂದಾಗಿ ಜಗತ್ತಿನೆಲ್ಲೆಡೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರಸ್ತುತ ಗೋವಾ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಏರುತ್ತಿದೆ. ಆದ್ದರಿಂದ, ಪರಿಸರ ಪ್ರಜ್ಞೆ ಮತ್ತು ಸುಸ್ಥಿರ ಭವಿಷ್ಯವನ್ನು ಚರ್ಚಿಸಲು ನಾವು ಸಭೆ ನಡೆಸುತ್ತಿರುವಾಗ, ಗೋವಾ ಒಂದು ಸೂಕ್ತ ಸ್ಥಳವಾಗಿದೆ. ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಮ್ಮ ಗೌರವಾನ್ವಿತ ವಿದೇಶಿ ಅತಿಥಿಗಳು ಜೀವಮಾನವಿಡೀ ಗೋವಾದ ಅಚ್ಚುಮೆಚ್ಚಿನ ನೆನಪುಗಳನ್ನು ತಮ್ಮೊಂದಿಗೆ ಒಯ್ಯುತ್ತಾರೆಂಬ ವಿಶ್ವಾಸ ನನಗಿದೆ

​​​​​​​ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಮಂತ್ರಿ

February 06th, 11:18 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿಂದು “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮ ಉದ್ಘಾಟಿಸಿದರು. “ಭಾರತ ಇಂಧನ ಸಪ್ತಾಹ-2024” ಕಾರ್ಯಕ್ರಮವು ಭಾರತದ ಅತಿ ದೊಡ್ಡ ಮತ್ತು ಎಲ್ಲವನ್ನು ಒಳಗೊಂಡಿರುವ ಇಂಧನ ಪ್ರದರ್ಶನ ಮತ್ತು ಸಮ್ಮೇಳನವಾಗಿದ್ದು, ಭಾರತದ ಇಂಧನ ಪರಿವರ್ತನೆಯ ಗುರಿಗಳನ್ನು ವೇಗಗೊಳಿಸಲು ಸಂಪೂರ್ಣ ಇಂಧನ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಪ್ರಧಾನ ಮಂತ್ರಿ ಅವರು ಜಾಗತಿಕ ಮಟ್ಟದ ತೈಲ ಮತ್ತು ಅನಿಲ ಕ್ಷೇತ್ರದ ಸಿಇಒಗಳು ಮತ್ತು ತಜ್ಞರೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.

ಒಡಿಶಾದ ಸಂಬಲ್ಪುರ್‌ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್‌ ಅನುವಾದ

February 03rd, 02:10 pm

ಒಡಿಶಾ ರಾಜ್ಯಪಾಲರಾದ ರಘುವರ್‌ ದಾಸ್‌ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತರವಾದ ಶ್ರೀ ನವೀನ್‌ ಪಟ್ನಾಯಕ್ ಜೀ. ನನ್ನ ಸಂಪುಟ ಸಹೋದ್ಯೋಗಿಗಳಾದ ಧರ್ಮೇಂದ್ರ ಪ್ರಧಾನ್‌ ಜೀ, ಅಶ್ವಿನಿ ವೈಷ್ಣವ್‌ ಜೀ, ಬಿಶ್ವೇಶ್ವರ್‌ ತಡು ಜೀ, ನನ್ನ ಸಂಸದೀಯ ಕ್ಷೇತ್ರದ ಪ್ರತಿನಿಧಿ ನಿತೇಶ್‌ ಗಂಗಾ ದೇವ್‌ ಜೀ, ಸಂಬಲ್ಪುರ್‌ ದ ಐಐಎಂ ನಿರ್ದೇಶಕರಾದ ಮಹದೇವ್‌ ಜೈಸ್ವಾಲ್‌ ಹಾಗೂ ಇತರೆ ಗಣ್ಯರೇ, ಮಹಿಳೆಯರೇ, ಮಹನೀಯರೇ.

ಒಡಿಶಾದ ಸಂಬಲ್‌ಪುರದಲ್ಲಿ 68,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ

February 03rd, 02:07 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಸಂಬಲ್‌ಪುರದಲ್ಲಿಂದು 68,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳಿಗೆ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಸ್ತೆ, ರೈಲ್ವೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರಮುಖ ಯೋಜನೆಗಳ ಜತೆಗೆ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆ ಒಳಗೊಂಡ ಇಂಧನ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದೇ ಸಂದರ್ಭದಲ್ಲಿ ಐಐಎಂ ಸಂಬಲ್‌ಪುರ ಮಾದರಿಯ ದರ್ಶನ ಪಡೆದ ಶ್ರೀ ಮೋದಿ ಅವರು, ಇದೇ ವೇಳೆ ಛಾಯಾಚಿತ್ರ ಪ್ರದರ್ಶನವನ್ನು ಸಹ ವೀಕ್ಷಿಸಿದರು.

​​​​​​​ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಶ್ರೀ ಅರವಿಂದ್ ಭಾಯಿ ಮಫತ್ ಲಾಲ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ವೇಳೆ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ

October 27th, 02:46 pm

ಇಂದು ನನಗೆ ಚಿತ್ರಕೂಟದ ಈ ಪವಿತ್ರ ಸ್ಥಳಕ್ಕೆ ಮತ್ತೊಮ್ಮೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿದೆ. ಇದು ಇಂದಿಗೂ ಅದೇ ಆಧ್ಯಾತ್ಮಿಕ ಸ್ಥಳವಾಗಿದೆ ಉಳಿದಿದೆ. ಚಿತ್ರಕೂಟದ ಬಗ್ಗೆ ನಮ್ಮ ಋಷಿಗಳು ಹೀಗೆ ಹೇಳುತ್ತಿದ್ದರು: चित्रकूट सब दिन बसत, प्रभु सिय लखन समेत!! ಅಂದರೆ, ಭಗವಾನ್ ಶ್ರೀ ರಾಮನು ಸೀತಾಮಾತೆ ಹಾಗೂ ಲಕ್ಷ್ಮಣನೊಂದಿಗೆ ಚಿತ್ರಕೂಟದಲ್ಲಿ ಶಾಶ್ವತವಾಗಿ ವಾಸಿಸುತ್ತಾನೆ. ಇಲ್ಲಿಗೆ ಬರುವ ಮೊದಲು, ಶ್ರೀ ರಘುಬೀರ್ ದೇವಸ್ಥಾನ ಮತ್ತು ಶ್ರೀ ರಾಮ್ ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡುವ ಸುಯೋಗ ನನಗೆ ಸಿಕ್ಕಿತು. ಹೆಲಿಕಾಪ್ಟರ್‌ನಿಂದ ಕಾಮದ್ ಗಿರಿ ಪರ್ವತಕ್ಕೆ ನನ್ನ ವಂದನೆಗಳನ್ನು ಸಲ್ಲಿಸಿದೆ. ಗೌರವಾನ್ವಿತ ರಾಂಚೋಡ್ ದಾಸ್ ಹಾಗೂ ಅರವಿಂದ್ ಭಾಯ್ ಅವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲು ನಾನು ಹೋಗಿದ್ದೆ. ಭಗವಾನ್ ಶ್ರೀ ರಾಮ ಮತ್ತು ಜಾನಕಿಯ ದರ್ಶನ, ಋಷಿಮುನಿಗಳ ಮಾರ್ಗದರ್ಶನ ಮತ್ತು ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ವೇದ ಮಂತ್ರಗಳನ್ನು ಅದ್ಭುತವಾಗಿ ಪಠಿಸಿದ ಅನುಭವವನ್ನು ಪದಗಳಲ್ಲಿ ವರ್ಣಿಸುವುದು ಕಷ್ಟ.

PM addresses centenary birth year celebrations of late Shri Arvind Bhai Mafatlal in Chitrakoot, Madhya Pradesh

October 27th, 02:45 pm

PM Modi addressed the program marking the centenary birth year celebrations of late Shri Arvind Bhai Mafatlal in Chitrakoot, Madhya Pradesh. PM Modi cited the life of Arvind Mafatlal as an example of glory of the company of saints as he dedicated his life and made it into a resolution of service in the guidance of Param Pujya Ranchhoddasji Maharaj. The PM said that we should imbibe the inspirations of Arvind Bhai.

ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 14th, 12:15 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!

​​​​​​​ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ

September 14th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್‌ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್‌ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್‌ ಗೆ ಶಿಲಾನ್ಯಾಸ ಇಂದೋರ್‌ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್‌ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್‌ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.