ಅಕ್ಟೋಬರ್ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 14th, 05:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ
August 04th, 05:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 23rd, 11:00 am
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು
May 23rd, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ
February 04th, 07:00 pm
ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 04th, 06:55 pm
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಸಂಗ್ರಹಿಸುವ ಕಾರ್ಯವಿಧಾನಕ್ಕೆ ಸಂಪುಟ ಅನುಮೋದನೆ - ಎಥೆನಾಲ್ ಪೂರೈಕೆ ವರ್ಷ (ಇಎಸ್‌ವೈ) 2024-25ಕ್ಕೆ ಸಾರ್ವಜನಿಕ ವಲಯದ ಒಎಂಸಿಗಳಿಗೆ ಪೂರೈಕೆಗಾಗಿ ಎಥೆನಾಲ್ ಬೆಲೆಯ ಪರಿಷ್ಕರಣೆ
January 29th, 03:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಂಪುಟ ಸಮಿತಿ (ಸಿಸಿಇಎ), ಭಾರತ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮದಡಿ 2024ರ ನವೆಂಬರ್ 1ರಿಂದ ಆರಂಭವಾಗಿ 2025ರ ಅಕ್ಟೋಬರ್ 31ರವರೆಗಿನ 2024-25ನೇ ಎಥೆನಾಲ್ ಪೂರೈಕೆ ವರ್ಷಕ್ಕೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಎಥೆನಾಲ್ ಖರೀದಿ ದರವನ್ನು ಪರಿಷ್ಕರಿಸಲು ಅನುಮೋದನೆ ನೀಡಿದೆ. ಅದರಂತೆ 2024-25 ರ ಎಥೆನಾಲ್ ಪೂರೈಕೆ ವರ್ಷ (2024ರ ನವೆಂಬರ್ 1 ರಿಂದ 2025ರ ಅಕ್ಟೋಬರ್ 31 ರವರೆಗೆ) ಸಿ ಹೆವಿ ಮೊಲಾಸಿಸ್ (ಸಿಎಚ್ ಎಂ) ನಿಂದ ಪಡೆದ ಇಬಿಪಿ ಕಾರ್ಯಕ್ರಮಕ್ಕಾಗಿ ಎಥೆನಾಲ್‌ನ ಒಳಗೊಂಡ ಕಾರ್ಖಾನೆ ಹೊರಗಿನ ಬೆಲೆಯನ್ನು ಲೀಟರ್‌ಗೆ 56.58 ರೂ.ಗಳಿಂದ 57.97 ರೂ.ಗೆ ನಿಗದಿಪಡಿಸಲಾಗಿದೆ.ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 12th, 02:15 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್ ಜೀ, ಜಯಂತ್ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 12th, 02:00 pm
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಹೂಡಿಕೆ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯ ಚೊಚ್ಚಲ ಸಭೆ ನಡೆಸಿದ ಭಾರತ-ಸೌದಿ ಅರೇಬಿಯಾ
July 28th, 11:37 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಡಾ.ಪಿ.ಕೆ. ಮಿಶ್ರಾ ಮತ್ತು ಸೌದಿ ಇಂಧನ ಸಚಿವ ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಸಹ ಅಧ್ಯಕ್ಷತೆಯಲ್ಲಿ ಹೂಡಿಕೆಗಳ ಕುರಿತ ಭಾರತ-ಸೌದಿ ಅರೇಬಿಯಾ ಉನ್ನತ ಮಟ್ಟದ ಕಾರ್ಯಪಡೆಯ ಮೊದಲ ಸಭೆಯು ಇಂದು ವರ್ಚುವಲ್ ಮಾದರಿಯಲ್ಲಿ ನಡೆಯಿತು.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 10:00 am
ಗುಜರಾತ್ ರಾಜ್ಯಪಾಲ ಆಚಾರ್ಯ ಶ್ರೀ ದೇವವ್ರತ್ ಜೀ, ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ, ಸಂಪುಟದ ನನ್ನ ಸಹೋದ್ಯೋಗಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಜೀ, ಸಂಸತ್ತಿನಲ್ಲಿ ನನ್ನ ಸಹವರ್ತಿ ಮತ್ತು ಗುಜರಾತ್ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಸಿ.ಆರ್. ಪಾಟೀಲ್ ಮತ್ತು ಎಲ್ಲಾ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಶಾಸನ ಸಭೆಗಳ ಸದಸ್ಯರು ಮತ್ತು ಮಂತ್ರಿಗಳು. ಸ್ಥಳೀಯ ಸಂಸತ್ ಸದಸ್ಯರು ಮತ್ತು ಸಚಿವರ ನೇತೃತ್ವದಲ್ಲಿ ಇಂದು ದೇಶಾದ್ಯಂತ 700 ಕ್ಕೂ ಹೆಚ್ಚು ಸ್ಥಳಗಳಲ್ಲಿ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ನಾನು ಪರದೆಯ ಮೇಲೆ ನೋಡುತ್ತಿದ್ದೇನೆ. ಬಹುಶಃ ಭಾರತದ ಮೂಲೆ ಮೂಲೆಗೂ ವ್ಯಾಪಿಸಿರುವ ಇಂತಹ ಬೃಹತ್ ಘಟನೆ ರೈಲ್ವೆಯ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸಿಲ್ಲ. 100 ವರ್ಷಗಳಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಇದೇ ಮೊದಲು. ಈ ಭವ್ಯವಾದ ಘಟನೆಗಾಗಿ ನಾನು ರೈಲ್ವೆಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಅಹ್ಮದಾಬಾದ್ ನಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
March 12th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ನ ಕಾರ್ಯಾಚರಣೆ ನಿಯಂತ್ರಣ ಕೇಂದ್ರದಲ್ಲಿ 1,06,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಪೆಟ್ರೋಕೆಮಿಕಲ್ಸ್ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಒಳಗೊಂಡಿವೆ. ಅವರು 10 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.ಒಡಿಶಾದ ಜಜ್ಪುರದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 05th, 05:30 pm
ಒಡಿಶಾದ ರಾಜ್ಯಪಾಲರಾದ ಶ್ರೀ ರಘುಬರ್ ದಾಸ್ ಜೀ, ಈ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಜೀ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಧರ್ಮೇಂದ್ರ ಪ್ರಧಾನ್ ಜೀ, ಶ್ರೀ ವಿಶ್ವೇಶ್ವರ ಟುಡು ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!ಒಡಿಶಾದ ಚಂಡಿಖೋಲೆಯಲ್ಲಿ 19,600 ಕೋಟಿ ರೂ. ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
March 05th, 01:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಚಂಡಿಖೋಲೆಯಲ್ಲಿಂದು 19,600 ಕೋಟಿ ರೂ. ಮೊತ್ತದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಯೋಜನೆಗಳು ತೈಲ ಮತ್ತು ಅನಿಲ, ರೈಲ್ವೆ, ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ಪರಮಾಣು ಶಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿವೆ.ತೆಲಂಗಾಣದ ಸಂಗಾರೆಡ್ಡಿಯಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಅನುವಾದ
March 05th, 10:39 am
ತೆಲಂಗಾಣದ ಗವರ್ನರ್ ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿ, ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸರ್ಕಾರದ ಮಂತ್ರಿಗಳು, ಕೊಂಡಾ ಸುರೇಖಾ ಜಿ ಮತ್ತು ಕೆ. ವೆಂಕಟ್ ರೆಡ್ಡಿ ಜಿ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಡಾ. ಕೆ. ಲಕ್ಷ್ಮಣ್ ಜಿ, ಮತ್ತು ಎಲ್ಲಾ ಇತರ ಗೌರವಾನ್ವಿತ ಗಣ್ಯರೇ, ಮಾನ್ಯರೇ ಮತ್ತು ಮಹಿಳೆಯರೇ!