ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ಭಾರತದ ಪ್ರಧಾನಮಂತ್ರಿ ಮತ್ತು ಯುಕೆ ಪ್ರಧಾನಮಂತ್ರಿ ಅವರು ಭಾರತೀಯ ಮತ್ತು ಯುಕೆ ಉದ್ಯಮ ಪ್ರಮುಖರನ್ನು ಭೇಟಿಯಾದರು
July 24th, 07:38 pm
'ಐತಿಹಾಸಿಕ ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ'ಕ್ಕೆ (CETA) ಸಹಿ ಹಾಕಿದ ಬಳಿಕ, ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುನೈಟೆಡ್ ಕಿಂಗ್‌ಡಮ್ ನ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಸರ್ ಕೈರ್ ಸ್ಟಾರ್ಮರ್ ಅವರು, ಇಂದು ಭಾರತ ಮತ್ತು ಯುಕೆಯ ಉದ್ಯಮ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಆರೋಗ್ಯ, ಫಾರ್ಮಾಸ್ಯುಟಿಕಲ್ಸ್, ರತ್ನ ಮತ್ತು ಆಭರಣ, ಆಟೋಮೊಬೈಲ್, ಇಂಧನ, ಉತ್ಪಾದನೆ, ದೂರಸಂಪರ್ಕ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ (ಐ.ಟಿ.), ಲಾಜಿಸ್ಟಿಕ್ಸ್, ಜವಳಿ ಮತ್ತು ಹಣಕಾಸು ಸೇವೆಗಳ ವಲಯಗಳನ್ನು ಪ್ರತಿನಿಧಿಸುವ ಉಭಯ ದೇಶಗಳ ಪ್ರಮುಖ ಉದ್ಯಮ ದಿಗ್ಗಜರು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಈ ವಲಯಗಳು ಎರಡೂ ದೇಶಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಆರ್ಥಿಕ ಅಭಿವೃದ್ಧಿಗೆ ಗಣನೀಯವಾಗಿ ಕೊಡುಗೆ ನೀಡುತ್ತವೆ.ಈ ವಾರ ಭಾರತದ ಬಗ್ಗೆ ವಿಶ್ವ
April 22nd, 12:27 pm
ರಾಜತಾಂತ್ರಿಕ ಫೋನ್ ಕರೆಗಳಿಂದ ಹಿಡಿದು ಹೊಸ ವೈಜ್ಞಾನಿಕ ಆವಿಷ್ಕಾರಗಳವರೆಗೆ, ಈ ವಾರ ಜಾಗತಿಕ ವೇದಿಕೆಯಲ್ಲಿ ಭಾರತದ ಉಪಸ್ಥಿತಿಯು ಸಹಯೋಗ, ನಾವೀನ್ಯತೆ ಮತ್ತು ಸಾಂಸ್ಕೃತಿಕ ಹೆಮ್ಮೆಯಿಂದ ಗುರುತಿಸಲ್ಪಟ್ಟಿದೆ.Khodaldham Trust has always pioneered Jan-Seva: PM Modi
January 21st, 12:00 pm
PM Modi addressed the foundation stone laying ceremony of Shri Khodaldham Trust-Cancer Hospital. He added how the Khodaldham Trust has always pioneered Jan-Seva. He remarked that cancer has been a critical disease and the over the last 9 years over 30 cancer hospitals have been developed and 10 more hospitals are in the works.ಶ್ರೀ ಖೋಡಲ್ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದ ಪ್ರಧಾನಮಂತ್ರಿಗಳು
January 21st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶ್ರೀ ಖೋಡಲ್ ಧಾಮ್ ಟ್ರಸ್ಟ್-ಕ್ಯಾನ್ಸರ್ ಆಸ್ಪತ್ರೆʼಯ ಶಂಕುಸ್ಥಾಪನೆ ಸಮಾರಂಭ ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು.