ಆದಿ ಶಂಕರಾಚಾರ್ಯರಿಗೆ ಪ್ರಧಾನಮಂತ್ರಿ ಗೌರವ ನಮನ
April 21st, 01:09 pm
ಭಾರತದ ಶ್ರೇಷ್ಠ ಆಧ್ಯಾತ್ಮಿಕ ದಿಗ್ಗಜರಲ್ಲಿ ಒಬ್ಬರಾದ ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಅವರಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಶಂಕರಾಚಾರ್ಯರ ಅಗಾಧ ಬೋಧನೆಗಳು, ಚಿಂತನೆಗಳು ಮತ್ತು ಅದ್ವೈತ ವೇದಾಂತದ ತತ್ವಶಾಸ್ತ್ರವು ಜಗತ್ತಿನ ಅಸಂಖ್ಯಾತ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಆಧ್ಯಾತ್ಮಿಕ ಚಿಂತನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ರಾಷ್ಟ್ರದಾದ್ಯಂತ ಆಧ್ಯಾತ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಅವರ ಪ್ರಯತ್ನಗಳು ಶಾಶ್ವತ ಸ್ಫೂರ್ತಿಯಾಗಿವೆ. ಅವರ ವಿವೇಕವು ನಮ್ಮ ಪಥ ಬೆಳಗುವುದನ್ನು ಮುಂದುವರಿಸಲಿ ಹಾಗೂ ಸತ್ಯ, ಸಹಾನುಭೂತಿ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ನಮ್ಮ ಬದ್ಧತೆಯನ್ನು ಬಲಪಡಿಸಲಿ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.ಕರ್ನಾಟಕದ ಮಂಡ್ಯದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
April 15th, 11:10 am
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರೇ, ಮಾಜಿ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಶ್ರೀ ಹೆಚ್.ಡಿ. ದೇವೇಗೌಡ ಅವರೇ, ರಾಜ್ಯದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರೇ, ಪರಮಪೂಜ್ಯ ಜಗದ್ಗುರು ಸ್ವಾಮಿ ಪರಮಾತ್ಮಾನಂದ ಸರಸ್ವತಿ ಜೀ ಅವರೇ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೇ, ಶೋಭಾ ಕರಂದ್ಲಾಜೆ ಅವರೇ, ಕರ್ನಾಟಕದ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರೇ, ರಾಜ್ಯದ ಸಚಿವರಾದ ಎನ್. ಚಲುವರಾಯಸ್ವಾಮಿ ಅವರೇ, ಉಪಸ್ಥಿತರಿರುವ ಎಲ್ಲಾ ಪೂಜ್ಯ ಸಂತರುಗಳೇ, ಗಣ್ಯ ವ್ಯಕ್ತಿಗಳೇ ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
April 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಶ್ರೀ ಗುರು ಭೈರವೈಕ್ಯ ಮಂದಿರದ ಭವ್ಯ ಉದ್ಘಾಟನೆಗೆ ಸಾಕ್ಷಿಯಾಗಲು ಮತ್ತು ಉನ್ನತ ಶ್ರೇಣಿಯ ಸಂತರೊಂದಿಗೆ ಸಂವಾದ ನಡೆಸಲು ಸಿಕ್ಕ ಅವಕಾಶಕ್ಕಾಗಿ ತಮ್ಮ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಐತಿಹಾಸಿಕ ಜ್ವಾಲಾ ಪೀಠದಲ್ಲಿ ಸಮಯ ಕಳೆದದ್ದು ಮತ್ತು ಭಕ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದು ಪದಗಳಿಗೆ ನಿಲುಕದ ಪ್ರಬಲ ಭಾವನೆಗಳನ್ನು ಜಾಗೃತಗೊಳಿಸಿದೆ ಎಂದು ಅವರು ತಿಳಿಸಿದರು. ಈ ದೈವಿಕ ಅನುಭವಗಳು ನನ್ನ ನೆನಪಿನಲ್ಲಿ ಎಂದೆಂದಿಗೂ ಅಚ್ಚೊತ್ತಿರುತ್ತವೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು.ಗುಜರಾತ್‌ನ ಗಾಂಧಿನಗರದಲ್ಲಿ ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
March 31st, 10:25 am
ಆಚಾರ್ಯ ಭಗವಂತ ಶ್ರೀ ಪದ್ಮಸಾಗರ ಸುರೀಶ್ವರ್ ಜೀ ಮಹಾರಾಜ್ ಸಾಹೇಬ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರಾಜ್ಯದ ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜೀ, ಪರಮ ಪೂಜ್ಯ ಆಚಾರ್ಯ ಭಗವಂತ, ಪೂಜ್ಯ ಸಾಧು ಭಗವಂತ, ಸಾಧ್ವಿಜಿ ಭಗವಂತ, ಎಲ್ಲ ಆಚಾರ್ಯರು ಮತ್ತು ಮುನಿ ಭಗವಂತರು ಹಾಗು ಈ ಪವಿತ್ರ ಸಮಾರಂಭದಲ್ಲಿ ಹಾಜರಿರುವ ಗೌರವಾನಿತ ದಾನಿಗಳು, ವಿದ್ವಾಂಸರು, ಮಹಿಳೆಯರೇ ಮತ್ತು ಮಹನೀಯರೇ!ಮಹಾವೀರ ಜಯಂತಿಯ ಸಂದರ್ಭದಲ್ಲಿ ಗಾಂಧಿನಗರದ ಕೋಬಾ ತೀರ್ಥದಲ್ಲಿ‘ಸಾಮ್ರಾಟ್ ಸಂಪ್ರತಿ ವಸ್ತುಸಂಗ್ರಹಾಲಯʼವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 31st, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಮಹಾವೀರ ಜಯಂತಿಯ ಶುಭ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದ ಕೋಬಾ ತೀರ್ಥದಲ್ಲಿ ಪಾರಂಪರಿಕ ಜೈನ ವಸ್ತುಸಂಗ್ರಹಾಲಯವಾದ ʻಸಾಮ್ರಾಟ್ ಸಂಪ್ರತಿ ಮ್ಯೂಸಿಯಂʼ ಅನ್ನು ಉದ್ಘಾಟಿಸಿದರು. ಕೋಬಾ ತೀರ್ಥದಲ್ಲಿ ಆಧ್ಯಾತ್ಮಿಕ ಶಾಂತಿ ಆಳವಾಗಿ ಬೇರೂರಿದೆ. ಅನೇಕ ಜೈನ ಮುನಿಗಳು ಮತ್ತು ಸಂತರು ತಮ್ಮ ತಪ್ಪಸ್ಸಿನ ಅಭಿವ್ಯಕ್ತಿಯನ್ನು ಕಂಡುಕೊಂಡ ಈ ಸ್ಥಳದಲ್ಲಿ ಸೃಷ್ಟಿ ಮತ್ತು ಸೇವೆ ಸ್ವಾಭಾವಿಕವಾಗಿ ಅರಳುತ್ತದೆ, ಎಂದು ಶ್ರೀ ಮೋದಿ ಹೇಳಿದರು.ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
September 24th, 04:29 pm
ಕನ್ನಡದ ಖ್ಯಾತ ಲೇಖಕ ಮತ್ತು ಚಿಂತಕ ಶ್ರೀ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರನ್ನು ರಾಷ್ಟ್ರದ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಧೀಮಂತ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 12th, 04:54 pm
ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 12th, 04:45 pm
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.