ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 01st, 12:00 pm

ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!

ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

March 01st, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.

ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ

February 13th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF)ದಲ್ಲಿ ಇಳಿಯಲಿದ್ದಾರೆ, ಅಲ್ಲಿ ಅವರು ಯುದ್ದ ವಿಮಾನಗಳು, ಸಾರಿಗೆ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಕುಮಾರ್ ಭಾಸ್ಕರ್ ವರ್ಮಾ ಸೇತುಗೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಗುವಾಹಟಿಯ ಲಚಿತ್ ಘಾಟ್‌ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಚಾಲನೆ ನೀಡಲಿದ್ದಾರೆ.