ಗುಜರಾತ್ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್ಭಾಯಿ ಪಟೇಲ್ ಮತ್ತು ಜಯರಾಮ್ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 14th, 11:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು
August 15th, 03:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 07:00 am
ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.India celebrates 79th Independence Day
August 15th, 06:45 am
PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.ಬಿಹಾರದ ಮೋತಿಹಾರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 18th, 11:50 am
ಈ ಪವಿತ್ರ ಶ್ರಾವಣ ಮಾಸದಲ್ಲಿ, ನಾನು ಬಾಬಾ ಸೋಮೇಶ್ವರನಾಥರ ಪಾದಗಳಿಗೆ ತಲೆ ಬಾಗಿ, ಅವರ ಆಶೀರ್ವಾದ ಬೇಡುತ್ತೇನೆ. ಬಿಹಾರದ ಎಲ್ಲಾ ಜನರು ಸಂತೋಷ ಮತ್ತು ಸಮೃದ್ಧಿಯಿಂದ ಇರುವಂತೆ ಆಶೀರ್ವದಿಸಲಿ ಎಂದು ಕೋರುತ್ತೇನೆ.ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗಿಂತಲೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 18th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮೋತಿಹಾರಿಯಲ್ಲಿ 7,000 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ಅವುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಸಾವನ್ (ಶ್ರಾವಣ) ಮಾಸದಲ್ಲಿ ಬಾಬಾ ಸೋಮೇಶ್ವರನಾಥನ ಪಾದಗಳಿಗೆ ನಮಸ್ಕರಿಸಿದ ಪ್ರಧಾನಮಂತ್ರಿಯವರು, ಬಿಹಾರದ ಎಲ್ಲ ನಿವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಹಾರೈಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚಂಪಾರಣ್ಯದ ಭೂಮಿ, ಇದು ಇತಿಹಾಸವನ್ನು ರೂಪಿಸಿದ ಭೂಮಿಯಾಗಿದೆ ಎಂದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಈ ಭೂಮಿ ಮಹಾತ್ಮ ಗಾಂಧಿಗೆ ಹೊಸ ದಿಕ್ಕನ್ನು ನೀಡಿತು. ಈ ಭೂಮಿಯಿಂದ ಪಡೆದ ಸ್ಫೂರ್ತಿ ಈಗ ಬಿಹಾರದ ಹೊಸ ಭವಿಷ್ಯವನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಹಾಜರಿದ್ದ ಎಲ್ಲರಿಗೂ ಮತ್ತು ಬಿಹಾರದ ಜನರಿಗೆ ಅವರು ಅಭಿನಂದನೆ ಸಲ್ಲಿಸಿದರು.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಒಡಿಶಾ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 04:16 pm
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿಬಾಬು ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜುವಾಲ್ ಓರಂ ಜಿ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಮತ್ತು ಶ್ರೀ ಅಶ್ವಿನಿ ವೈಷ್ಣವ್ ಜಿ, ಒಡಿಶಾದ ಉಪ ಮುಖ್ಯಮಂತ್ರಿಗಳಾದ ಶ್ರೀ ಕನಕ್ ವರ್ಧನ್ ಸಿಂಗ್ ದೇವ್ ಜಿ ಮತ್ತು ಶ್ರೀಮತಿ ಪ್ರವತಿ ಪರಿದಾ ಜಿ, ರಾಜ್ಯ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ, ವಿಧಾನಸಭಾ ಸದಸ್ಯರೆ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ 18,600 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭುವನೇಶ್ವರದಲ್ಲಿ ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ, ಕುಡಿಯುವ ನೀರು, ನೀರಾವರಿ, ಕೃಷಿ ಮೂಲಸೌಕರ್ಯ, ಆರೋಗ್ಯ ಮೂಲಸೌಕರ್ಯ, ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳ ವಿಭಾಗಗಳು ಮತ್ತು ಹೊಸ ರೈಲ್ವೆ ಮಾರ್ಗ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡ 18,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.From the land of Sindoor Khela, India showcased its strength through Operation Sindoor: PM Modi in Alipurduar, West Bengal
May 29th, 02:00 pm
PM Modi addressed a public meeting in Alipurduar, West Bengal. He ignited the spirit of the people urging them to take charge of shaping a prosperous future for Bengal & India. He lambasted the TMC for shielding corrupt leaders and appealed to the people to reject TMC. The PM invoked the Bengal’s spirit by saying “From the land of Sindoor Khela, India showcased its strength through Operation Sindoor.”PM Modi rallies in Alipurduar, West Bengal with a resounding Call to Action
May 29th, 01:40 pm
PM Modi addressed a public meeting in Alipurduar, West Bengal. He ignited the spirit of the people urging them to take charge of shaping a prosperous future for Bengal & India. He lambasted the TMC for shielding corrupt leaders and appealed to the people to reject TMC. The PM invoked the Bengal’s spirit by saying “From the land of Sindoor Khela, India showcased its strength through Operation Sindoor.”ಗುಜರಾತ್ನ ದಾಹೋದ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 26th, 11:45 am
ಗುಜರಾತ್ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು
May 26th, 11:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.