ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 02:32 pm
ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 25th, 02:30 pm
ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 17th, 11:20 am
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
September 17th, 11:19 am
ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.ನವಸಾರಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ, ಪ್ರಧಾನ ಮಂತ್ರಿ ಭಾಷಣ
February 22nd, 04:40 pm
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ರಾಜ್ಯ ಸರ್ಕಾರದ ಗೌರವಾನ್ವಿತ ಸಚಿವರೆ, ನನ್ನ ಸಂಸದೀಯ ಸಹೋದ್ಯೋಗಿಗಳೆ, ಇಲ್ಲಿನ ಜನಪ್ರತಿನಿಧಿಗಳೆ ಮತ್ತು ಗುಜರಾತ್‌ನ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸಿ.ಆರ್. ಪಾಟೀಲ್ ಜಿ, ಗೌರವಾನ್ವಿತ ಸಂಸದರೆ, ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನೀವೆಲ್ಲರೂ ಹೇಗಿದ್ದೀರಾ?ಗುಜರಾತ್ ನ ನವ್ಸಾರಿಯಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 22nd, 04:25 pm
ಗುಜರಾತ್ ನ ನವ್ಸಾರಿಯಲ್ಲಿಂದು 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇಂಧನ, ರೈಲು, ರಸ್ತೆ, ಜವಳಿ, ಶಿಕ್ಷಣ, ನೀರು ಪೂರೈಕೆ, ಸಂಪರ್ಕ ಮತ್ತು ನಗರಾಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನೆಗಳನ್ನು ಇವುಗಳು ಒಳಗೊಂಡಿವೆ.ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.