ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 23rd, 11:15 am
ಈ ಹಂತವನ್ನು ತಲುಪಲು ನೀವು ದೀರ್ಘ ತಯಾರಿ ಮತ್ತು ಕಠಿಣ ಪರಿಶ್ರಮದ ಮೂಲಕ ಬಂದಿದ್ದೀರಿ. ಈ ಸಾಧನೆಗಾಗಿ ನಾನು ನಿಮಗೆ ಮತ್ತು ನಿಮ್ಮ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನಿಮ್ಮನ್ನು ಇಲ್ಲಿಗೆ ಕರೆತರುವಲ್ಲಿ ನಿಮ್ಮ ಪೋಷಕರು ಮತ್ತು ಕುಟುಂಬಗಳ ಕೊಡುಗೆ ಅಪಾರವಾಗಿದೆ. ನಾವು ಈ ಹಂತಕ್ಕೆ ತಲುಪಲು ಕುಟುಂಬ ಮತ್ತು ಸಮಾಜ ಮಾತ್ರವೇ ದೊಡ್ಡ ಪಾತ್ರವನ್ನು ವಹಿಸಿರುವುದಿಲ್ಲ. ನಾವು ಇಲ್ಲಿಗೆ ಬಂದಿರುವುದು ನಮ್ಮಿಂದಾಗಿ ಅಥವಾ ನಮ್ಮ ಕುಟುಂಬಗಳಿಂದಾಗಿ ಮಾತ್ರ ಅಲ್ಲ. ಈ ವಿಶಾಲ ರಾಷ್ಟ್ರದ 140 ಕೋಟಿ ನಾಗರಿಕರ ಕೊಡುಗೆಯೂ ಸಹ ಬಹಳ ಮಹತ್ವದ್ದಾಗಿದೆ. ಆದ್ದರಿಂದ, ನಮ್ಮ ಜವಾಬ್ದಾರಿ ನಮ್ಮ ಮತ್ತು ನಮ್ಮ ಕುಟುಂಬಗಳ ಕಡೆಗೆ ಮಾತ್ರವಲ್ಲ, ಇಡೀ ಸಮಾಜದ ಕಡೆಗೂ ಹೋಗಬೇಕು. ಈ ಎಲ್ಲಾ ಕೆಲಸಗಳಿಗೆ ನೀವು ಇನ್ನಷ್ಟು ಸಮರ್ಥರಾಗುತ್ತೀರಿ ಎಂಬ ವಿಶ್ವಾಸ ನನಗಿದೆ. ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ.ಉದ್ಯೋಗ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ ಒತ್ತಿಹೇಳಿದರು. ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ
October 03rd, 03:54 pm
ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.