ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.