ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್‌ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್‌ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್‌ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ
January 15th, 07:28 pm
ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು, ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
January 09th, 07:22 pm
ಹಿಮಾಚಲ ಪ್ರದೇಶದ ಸಿರ್ಮೌರ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.ಹಿಮಾಚಲ ಪ್ರದೇಶ ರಾಜ್ಯಪಾಲರು ಪ್ರಧಾನಮಂತ್ರಿಯನ್ನು ಭೇಟಿ ಮಾಡಿದರು
December 13th, 11:11 am
ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ಶಿವ ಪ್ರತಾಪ್ ಶುಕ್ಲಾ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.ಸಂವಿಧಾನ ದಿನದಂದು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಕಛೇರಿ ಅಧಿಕಾರಿಗಳು ಭಾಗವಹಿಸಿದರು
November 26th, 09:25 pm
ಸಂವಿಧಾನ ದಿನದ ಸಂದರ್ಭದಲ್ಲಿ, ಇಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಓದಲಾಯಿತು.ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರಿಂದ ಏಕತಾ ಪ್ರತಿಜ್ಞೆಯ ಬೋಧನೆ; ಈ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿಯವರ ಕಛೇರಿಯ ಅಧಿಕಾರಿಗಳು
October 31st, 02:06 pm
ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರ ಕಚೇರಿಯ ಅಧಿಕಾರಿಗಳು ಇಂದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಏಕತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.Maharashtra Chief Minister meets Prime Minister
December 12th, 12:23 pm
The Chief Minister of Maharashtra, Shri Devendra Fadnavis met the Prime Minister Shri Narendra Modi today.ಪ್ರಧಾನಮಂತ್ರಿಯವರ ಕಚೇರಿಯ ಅಧಿಕಾರಿಗಳು ಸಂವಿಧಾನ ದಿನವಾದ ಇಂದು ಸಂವಿಧಾನ ಪೀಠಿಕೆಯನ್ನು ಓದಿದರು
November 26th, 08:17 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರು ಪ್ರಧಾನಮಂತ್ರಿ ಕಾರ್ಯಾಲಯದ ಇತರ ಅಧಿಕಾರಿಗಳೊಂದಿಗೆ ಸಂವಿಧಾನ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಿದರು.ಹರ್ದೋಯಿ ರಸ್ತೆ ಅಪಘಾತದಲ್ಲಿ ಸಾವು- ಪ್ರಧಾನಮಂತ್ರಿ ಸಂತಾಪ
November 06th, 05:59 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.ಪ್ರಧಾನ ಕಾರ್ಯದರ್ಶಿಯವರಾದ ಡಾ. ಪಿ.ಕೆ. ಮಿಶ್ರಾ ಅವರ ನೇತೃತ್ವದಲ್ಲಿ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಭಾಗಿಯಾದರು
September 17th, 02:17 pm
ಪ್ರಧಾನ ಕಾರ್ಯದರ್ಶಿಯವರಾದ ಡಾ.ಪಿ.ಕೆ.ಮಿಶ್ರಾ ನೇತೃತ್ವದ ಪ್ರಧಾನ ಮಂತ್ರಿ ಕಛೇರಿಯ ಅಧಿಕಾರಿಗಳು ಇಂದು ಬೆಳಿಗ್ಗೆ 'ತಾಯಿಯ ಹೆಸರಲ್ಲಿ ಒಂದು ವೃಕ್ಷ' ಆಂದೋಲನದಲ್ಲಿ ಭಾಗವಹಿಸಿದರು.ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮ
June 21st, 02:26 pm
ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದಲ್ಲಿ ಇಂದು ಬೆಳಗ್ಗೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಪಿಎಂಒದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್, ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ, ಹಿರಿಯ ಅಧಿಕಾರಿಗಳು ಮತ್ತು ಇತರರು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಪ್ರಧಾನಮಂತ್ರಿಗಳ ಕಾರ್ಯಾಲಯದ (ಪಿಎಂಒ) ಅಧಿಕಾರ ವಹಿಸಿಕೊಂಡ ಪ್ರಧಾನ ಮಂತ್ರಿ
June 10th, 05:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಕಾರ್ಯಾಲಯದ(ಪಿಎಂಒ) ಅಧಿಕಾರ ವಹಿಸಿಕೊಂಡರು. ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಪ್ರಧಾನಮಂತ್ರಿ ಕಾರ್ಯಾಲಯವನ್ನು ಮೊದಲಿನಿಂದಲೂ ಒಂದು ಸೇವಾ ಸಂಸ್ಥೆ ಮತ್ತು ʻಜನರ ಪ್ರಧಾನ ಮಂತ್ರಿ ಕಾರ್ಯಾಲಯʼವನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರು. ನಾವು ಪ್ರಧಾನಮಂತ್ರಿಗಳ ಕಾರ್ಯಾಲಯವನ್ನು ವೇಗವರ್ಧಕ ಸಾಧನವನ್ನಾಗಿ ಅಭಿವೃದ್ಧಿಪಡಿಸಲು ಪ್ರಯತ್ನಿಸಿದ್ದೇವೆ, ಇದು ಹೊಸ ಶಕ್ತಿ ಮತ್ತು ಸ್ಫೂರ್ತಿಯ ಮೂಲವಾಗಿದೆ, ಎಂದು ಪ್ರಧಾನಿ ಹೇಳಿದರು.ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಸಿಂಧಿಯಾ ಶಾಲೆಯ 125ನೇ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
October 21st, 11:04 pm
ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲ ಶ್ರೀ ಮಂಗುಭಾಯ್ ಪಟೇಲ್ ಅವರೇ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಸಿಂಧಿಯಾ ಶಾಲಾ ಮಂಡಳಿಯ ನಿರ್ದೇಶಕರಾದ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮತ್ತು ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಶ್ರೀ ನರೇಂದ್ರ ಸಿಂಗ್ ತೋಮರ್, ಡಾ. ಜಿತೇಂದ್ರ ಸಿಂಗ್ ಅವರೇ, ಶಾಲಾ ಆಡಳಿತ ಮಂಡಳಿಯ ಸಹೋದ್ಯೋಗಿಗಳೇ, ಎಲ್ಲಾ ಸಿಬ್ಬಂದಿ, ಶಿಕ್ಷಕರು, ಪೋಷಕರು ಮತ್ತು ಆತ್ಮೀಯ ಯುವ ಸ್ನೇಹಿತರೇ!ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಿಂಧಿಯಾ ಶಾಲೆಯ 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ
October 21st, 05:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ 'ದಿ ಸಿಂಧಿಯಾ ಶಾಲೆಯ' 125ನೇ ಸ್ಥಾಪಕರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಭಾಗವಾಗಿ ಪ್ರಧಾನಮಂತ್ರಿಯವರು ಶಾಲೆಯಲ್ಲಿ 'ವಿವಿಧೋದ್ದೇಶ ಕ್ರೀಡಾ ಸಂಕೀರ್ಣ'ಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಪ್ರತಿಭಾವಂತ ಹಳೆಯ ವಿದ್ಯಾರ್ಥಿಗಳು ಮತ್ತು ಉನ್ನತ ಸಾಧಕರಿಗೆ ಶಾಲೆಯ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಿಂಧಿಯಾ ಶಾಲೆಯನ್ನು 1897ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಐತಿಹಾಸಿಕ ಗ್ವಾಲಿಯರ್ ಕೋಟೆಯ ಮೇಲಿದೆ. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಸ್ಮರಣಾರ್ಥ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿದರು.ರಾಜಸ್ಥಾನದಲ್ಲಿ ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ರಾಜಸ್ಥಾನದ ಮುಖ್ಯಮಂತ್ರಿಯವರ ಉಪಸ್ಥಿತಿಯ ಕುರಿತು ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್
July 27th, 10:46 am
ರಾಜ್ಯದಲ್ಲಿ ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಹಾಜರಿರುವ ಕುರಿತು ರಾಜಸ್ಥಾನದ ಮುಖ್ಯಮಂತ್ರಿಯವರು ಮಾಡಿದ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರ ಕಾರ್ಯಾಲಯವು ಈ ಕೆಳಗಿನ ಟ್ವೀಟ್ ಅನ್ನು ಬಿಡುಗಡೆ ಮಾಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಿಕರ್ ಗೆ ಭೇಟಿ ನೀಡುತ್ತಿದ್ದಾರೆ.ಪ್ರಧಾನಿಯನ್ನು ಭೇಟಿ ಮಾಡಿದ ಒಡಿಶಾ ಸಿಎಂ
May 11th, 06:07 pm
ಒಡಿಶಾ ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಜೋಶಿಮಠ ಕುರಿತು ಪ‍್ರಧಾನಮಂತ್ರಿ ಕಾರ್ಯಾಲಯ ಉನ್ನತ ಮಟ್ಟದ ಸಭೆ ನಡೆಸಲಿದೆ
January 08th, 02:19 pm
ಸಂಪುಟ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಪ್ರಧಾನ ಕಾರ್ಯದರ್ಶಿ ಡಾ.ಪಿ.ಕೆ.ಮಿಶ್ರಾ ಅವರು ಪ‍್ರಧಾನಮಂತ್ರಿ ಕಾರ್ಯಾಲಯದಲ್ಲಿ ಇಂದು ಮಧ್ಯಾಹ್ನ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ.ಗುಜರಾತ್ ನ ಗಾಂಧಿನಗರದಲ್ಲಿ ಭಾರತದ ಸುಜುಕಿಯ 40ನೇ ವರ್ಷದ ಸ್ಮರಣಾರ್ಥವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
August 28th, 08:06 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಜೀ, ಉಪ ಮುಖ್ಯಮಂತ್ರಿ ಶ್ರೀ ಕೃಷ್ಣ ಚೌಟಾಲಾ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀ ಸಿ.ಆರ್. ಪಾಟೀಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ನ ಹಿರಿಯ ಅಧಿಕಾರಿಗಳೇ, ಭಾರತದಲ್ಲಿನ ಜಪಾನ್ ರಾಯಭಾರಿಯವರೇ, ಮಾರುತಿ-ಸುಜುಕಿಯ ಹಿರಿಯ ಅಧಿಕಾರಿಗಳೇ, ಇತರ ಎಲ್ಲ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿಂದು ಭಾರತದಲ್ಲಿ ಸುಜುಕಿಯ 40ನೇ ವರ್ಷಗಳ ಕಾರ್ಯಾಚರಣೆ, ಸ್ಮರಣಾರ್ಥ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
August 28th, 05:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಕಾರ್ಯಾಚರಣೆ ಅಂಗವಾಗಿ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಭಾರತದಲ್ಲಿನ ಜಪಾನ್ ರಾಯಭಾರಿ ಮಾನ್ಯ ಶ್ರೀ ಸತೋಶಿ ಸುಜುಕಿ, ಗುಜರಾತ್ ಮುಖ್ಯಮಂತ್ರಿ ಮಾನ್ಯ ಶ್ರೀ ಭೂಪೇಂದ್ರ ಪಟೇಲ್, ಸಂಸದ ಶ್ರೀ ಸಿ.ಆರ್.ಪಾಟೀಲ್, ರಾಜ್ಯ ಸಚಿವ ಶ್ರೀ ಜಗದೀಶ್ ಪಾಂಚಾಲ್, ಸುಜುಕಿ ಮೋಟಾರ್ ಕಾರ್ಪೊರೇಷನ್ ಮಾಜಿ ಅಧ್ಯಕ್ಷರಾದ ಶ್ರೀ ಒ. ಸುಜುಕಿ, ಸುಜುಕಿ ಮೋಟಾರ್ ಕಾರ್ಪೊರೇಷನ್ ಅಧ್ಯಕ್ಷ ಶ್ರೀ ಟಿ. ಸುಜುಕಿ ಮತ್ತು ಮಾರುತಿ-ಸುಜುಕಿಯ ಅಧ್ಯಕ್ಷ ಶ್ರೀ ಆರ್.ಸಿ ಭಾರ್ಗವ ಉಪಸ್ಥಿತರಿದ್ದರು. ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು ಮತ್ತು ಜಪಾನಿನ ಪ್ರಧಾನ ಮಂತ್ರಿ ಮಾನ್ಯ ಶ್ರೀ ಫುಮಿಯೋ ಕಿಶಿದಾ ಅವರ ವೀಡಿಯೊ ಸಂದೇಶವನ್ನು ಸಹ ಪ್ರದರ್ಶಿಸಲಾಯಿತು.