Today, BJP stands for good governance and last-mile delivery: PM Modi
April 06th, 12:30 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.PM Modi addresses Party Karyakartas on BJP Sthapana Diwas
April 06th, 12:00 pm
PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.ಗುಜರಾತ್ ನಲ್ಲಿ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 28th, 02:45 pm
ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್, ಮೈಕ್ರಾನ್ ಟೆಕ್ನಾಲಜಿಯ ಸಿಇಒ ಸಂಜಯ್ ಮೆಹ್ರೋತ್ರಾ ಜೀ, ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಉಪಮುಖ್ಯಮಂತ್ರಿ ಹರ್ಷ ಸಂಘವಿ ಜೀ, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ.ಗುಜರಾತ್‌ನ ಸನಂದ್‌ನಲ್ಲಿ ಮೈಕ್ರಾನ್ ಟೆಕ್ನಾಲಜಿಯ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 28th, 02:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೈಕ್ರಾನ್ ಎಟಿಎಂಪಿಯನ್ನು ಉದ್ಘಾಟಿಸಿದರು (ಅಸೆಂಬ್ಲಿ, ಟೆಸ್ಟ್, ಮಾರ್ಕಿಂಗ್, ಮತ್ತು ಪ್ಯಾಕೇಜಿಂಗ್) ಸೌಲಭ್ಯವನ್ನು ಗುಜರಾತ್‌ನ ಸನಂದ್‌ನಲ್ಲಿ ಸ್ಥಾಪಿಸಲಾಗಿದೆ. ವಾಣಿಜ್ಯ ಉತ್ಪಾದನೆಯ ಆರಂಭವನ್ನು ಗುರುತಿಸುವ ಈ ಮಹತ್ವದ ಕಾರ್ಯಕ್ರಮವು ಜಾಗತಿಕ ತಂತ್ರಜ್ಞಾನ ನಾಯಕತ್ವದತ್ತ ಭಾರತದ ಪ್ರಯಾಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲು ಆಗಿದೆ.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ವಾಸ್ತವಾಂಶ ಪತ್ರ (ಫ್ಯಾಕ್ಟ್ ಶೀಟ್) : ಭಾರತ-ಜಪಾನ್ ಆರ್ಥಿಕ ಭದ್ರತಾ ಸಹಕಾರ
August 29th, 08:12 pm
ಎರಡು ಚೈತನ್ಯಶೀಲ ಅಥವಾ ರೋಮಾಂಚನಾಕಾರಿ ಪ್ರಜಾಪ್ರಭುತ್ವಗಳಾಗಿ ಮತ್ತು ಮುಕ್ತ ಮಾರುಕಟ್ಟೆ ಆರ್ಥಿಕತೆಗಳಾಗಿ, ಭಾರತ ಮತ್ತು ಜಪಾನ್ ನಮ್ಮ ರಾಜಕೀಯ ನಂಬಿಕೆ, ಆರ್ಥಿಕ ಚೈತನ್ಯ ಮತ್ತು ನೈಸರ್ಗಿಕ ಪೂರಕತೆಯ ಆಧಾರದ ಮೇಲೆ ನಿರ್ಣಾಯಕ ಮತ್ತು ಉದಯೋನ್ಮುಖ ವಲಯಗಳಲ್ಲಿ ತಮ್ಮ ಪಾಲುದಾರಿಕೆಯನ್ನು ವೇಗಗೊಳಿಸಲು ಬದ್ಧವಾಗಿವೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.ಭಾರತ ಮತ್ತು ಫಿಲಿಪ್ಪೀನ್ಸ್ ಸರ್ಕಾರಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಸ್ಥಾಪಿಸುವ ಘೋಷಣೆ
August 05th, 05:23 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಫರ್ಡಿನಾಂಡ್ ಆರ್ ಮಾರ್ಕೋಸ್ ಜೂನಿಯರ್ ಅವರು 2025ರ ಆಗಸ್ಟ್ 4 ರಿಂದ 8 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಧ್ಯಕ್ಷರಾದ ಮಾರ್ಕೋಸ್ ಅವರೊಂದಿಗೆ ಪ್ರಥಮ ಮಹಿಳೆ ಮೇಡಂ ಲೂಯಿಸ್ ಅರಾನೆಟಾ ಮಾರ್ಕೋಸ್ ಮತ್ತು ಫಿಲಿಪ್ಪೀನ್ಸ್ ನ ಹಲವಾರು ಸಂಪುಟ ಸಚಿವರು ಮತ್ತು ವ್ಯಾಪಾರ ನಿಯೋಗ ಸೇರಿದಂತೆ ಉನ್ನತ ಮಟ್ಟದ ಅಧಿಕೃತ ನಿಯೋಗ ಆಗಮಿಸಿದೆ.ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
June 16th, 02:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 15th, 11:10 pm
ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 02nd, 05:34 pm
ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು
June 02nd, 05:00 pm
ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 27th, 11:09 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.