ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 21st, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 21st, 08:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪರವಾಗಿ ಬೆಂಬಲ ಸೂಚಿಸಿದವರಿಗೆ ಪ್ರಧಾನಮಂತ್ರಿ ಅವರು ಗೌರವ ಸಲ್ಲಿಸಿದರು
June 25th, 10:53 am
ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದೃಢವಾಗಿ ಬೆಂಬಲ ಸೂಚಿಸಿ, ರಕ್ಷಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವ ಸಲ್ಲಿಸಿದರು. ಇದನ್ನು ಭಾರತದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದು ಎಂದು ಶ್ರೀ ಮೋದಿಯವರು ಬಣ್ಣಿಸಿದರು. ಬಂಡಾಯವೆದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಆದರ್ಶಗಳನ್ನು ಎತ್ತಿಹಿಡಿದ ಅಸಂಖ್ಯಾತ ನಾಗರಿಕರ ಅಸಾಧಾರಣ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವವನ್ನು ಈ ಅವಧಿಯು ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದರು.ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
May 19th, 01:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ (ನಿವೃತ್ತ) ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ
May 17th, 03:45 am
ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಪರ ಮತ ಚಲಾಯಿಸುವಂತೆ ಸಂಸದರಿಗೆ ಕರೆ ನೀಡಿದ ಪ್ರಧಾನಮಂತ್ರಿ, ಇದು ಐತಿಹಾಸಿಕ ಅವಕಾಶ ಎಂದು ಬಣ್ಣನೆ
April 17th, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಕುರಿತು ಸಂಸತ್ತಿನಲ್ಲಿ ಸದ್ಯ ಚರ್ಚೆ ನಡೆಯುತ್ತಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿರುವ ಅವರು, ನಿನ್ನೆ ರಾತ್ರಿ 1 ಗಂಟೆಯವರೆಗೆ ಚರ್ಚೆಗಳು ಮುಂದುವರೆದಿವೆ ಎಂದು ಅವರು ಹೇಳಿದರು.ಪುದುಚೇರಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
March 01st, 12:00 pm
ಪುದುಚೇರಿಯ ಮುಖ್ಯಮಂತ್ರಿ ಶ್ರೀ ಎನ್. ರಂಗಸ್ವಾಮಿ ಅವರೇ, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಕೆ. ಕೈಲಾಸನಾಥನ್ ಅವರೇ, ಸಭಾಪತಿ ಶ್ರೀ ಆರ್. ಸೆಲ್ವಂ ಅವರೇ, ಗೃಹ ಸಚಿವ ಶ್ರೀ ಎ. ನಮಶಿವಾಯಂ ಅವರೇ, ಇತರ ನಾಯಕರೇ, ಪುದುಚೇರಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ವಣಕ್ಕಂ!ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 01st, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುದುಚೇರಿಯಲ್ಲಿ 2,700 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಜನರ ಜೀವನವನ್ನು ಪರಿವರ್ತಿಸುವ ನಿಟ್ಟಿನಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಸಂಚಾರ ಸೇರಿದಂತೆ ಪ್ರಮುಖ ವಲಯಗಳನ್ನು ಈ ಯೋಜನೆಗಳು ಒಳಗೊಂಡಿವೆ.ಅಬುಧಾಬಿಯ ಯುವರಾಜ ಘನತೆವೆತ್ತ ಶ್ರೀ ಹೈನೆಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ
February 19th, 05:45 pm
ಅಬುಧಾಬಿಯ ಯುವರಾಜ ಘನತೆವೆತ್ತ ಶ್ರೀ ಹೈನೆಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಫೆಬ್ರವರಿ 18-19, 2026 ರಂದು ಇತ್ತೀಚೆಗೆ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಸೆಪ್ಟೆಂಬರ್ 2024 ರಲ್ಲಿ ಅವರ ಈ ಹಿಂದಿನ ಭೇಟಿಯ ನಂತರ ಇದು ಅವರ ಎರಡನೇ ಅಧಿಕೃತ ಭಾರತ ಭೇಟಿಯಾಗಿದೆ.The greatest pride of my life is that I am a karyakarta of the Bharatiya Janata Party: PM Modi at BJP HQ
January 20th, 11:16 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”PM Modi addresses BJP karyakartas at felicitation of New Party President
January 20th, 11:15 am
Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
September 13th, 10:30 am
ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 13th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
September 11th, 08:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ವಿನೋಬಾ ಭಾವೆಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಭಾರತದ ಆಧ್ಯಾತ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಅವರ ಅತ್ಯುನ್ನತ ಕೊಡುಗೆಗಳನ್ನು ಸ್ಮರಿಸಿದರು.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ವ್ಯೂಹಾತ್ಮಕ ಪಾಲುದಾರಿಕೆ ವೃದ್ಧಿಗಾಗಿ ಭಾರತ-ಮಾರಿಷಸ್ ಜಂಟಿ ದೂರದೃಷ್ಟಿ
March 12th, 02:13 pm
ಗೌರವಾನ್ವಿತ ಮಾರಿಷಸ್ ಪ್ರಧಾನಿ ಡಾ. ನವೀನ್ ಚಂದ್ರ ರಾಮ್‌ಗೂಲಮ್, ಜಿಸಿಎಸ್‌ಕೆ, ಎಫ್‌ಆರ್‌ಸಿಪಿ ಮತ್ತು ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಮಾರ್ಚ್ 11ರಿಂದ 12ರವರೆಗೆ ಮಾರಿಷಸ್‌ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾರಿಷಸ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯ ಬಗ್ಗೆ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)
October 28th, 06:32 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.