ಅಸ್ಸಾಂನ ಗೋಲಾಘಾಟ್ ನಲ್ಲಿ ಪಾಲಿಪ್ರೊಪಿಲೀನ್ ಸ್ಥಾವರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 14th, 03:30 pm
ಭಾರತ್ ಮಾತಾ ಕೀ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಜೀ, ಹರ್ದೀಪ್ ಸಿಂಗ್ ಪುರಿ ಜೀ, ಅಸ್ಸಾಂ ಸರ್ಕಾರದ ಸಚಿವರು, ಸಂಸದರು ಮತ್ತು ಶಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವ ನನ್ನ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಸ್ಸಾಂನ ಗೋಲಾಘಾಟ್ ನಲ್ಲಿ ಬಯೋಇಥೆನಾಲ್ ಸ್ಥಾವರವನ್ನು ಉದ್ಘಾಟನೆ, ಪಾಲಿಪ್ರೊಪಿಲೀನ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
September 14th, 03:00 pm
ಕಳೆದ ಎರಡು ದಿನಗಳಿಂದ ತಾವು ಈಶಾನ್ಯದಲ್ಲಿದ್ದು, ಪ್ರತಿ ಬಾರಿ ಈ ಪ್ರದೇಶಕ್ಕೆ ಭೇಟಿ ನೀಡಿದಾಗಲೂ ಅಸಾಧಾರಣ ಪ್ರೀತಿ ಮತ್ತು ಆಶೀರ್ವಾದಗಳನ್ನು ಪಡೆಯುವುದಾಗಿ ಪ್ರಧಾನಮಂತ್ರಿಯವರು ಹೇಳಿದರು. ಅಸ್ಸಾಂನ ಈ ಭಾಗದಲ್ಲಿ ತಾವು ಅನುಭವಿಸುವ ವಿಶಿಷ್ಟವಾದ ಆತ್ಮೀಯತೆ ಮತ್ತು ಬಂಧುತ್ವದ ಭಾವನೆಯನ್ನು ಅವರು ಎತ್ತಿ ತೋರಿಸಿದರು ಮತ್ತು ಜನರಿಗೆ ಕೃತಜ್ಞತೆ ವ್ಯಕ್ತಪಡಿಸಿದರು.