ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 51ನೇ ʼಪ್ರಗತಿʼ ಸಭೆ ನಡೆಯಿತು
May 27th, 10:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು 'ಸೇವಾ ತೀರ್ಥ'ದಲ್ಲಿ 51ನೇ 'ಪ್ರಗತಿ' ಸಭೆ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನಗಳನ್ನು ಸಮನ್ವಯಗೊಳಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನವನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಐಸಿಟಿ (ಐಸಿಟಿ) ಆಧಾರಿತ, ಬಹು-ಮಾದರಿ ವೇದಿಕೆ ಇದಾಗಿದೆ.ಗ್ಯಾಂಗ್ಟಕ್‌ನಲ್ಲಿ ಸಿಕ್ಕಿಂನ 50ನೇ ರಾಜ್ಯೋತ್ಸವ(ರಾಜ್ಯತ್ವ)ದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 10:25 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಓಂ ಮಾಥುರ್ ಜಿ, ಜನಪ್ರಿಯ, ಶಕ್ತಿಶಾಲಿ ಯುವಕರಾದ ನನ್ನ ಆತ್ಮೀಯ ಸ್ನೇಹಿತ, ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಶ್ರೀ ದೋರ್ಜಿ ಶೆರಿಂಗ್ ಲೆಪ್ಚಾ ಜಿ, ಡಾ. ಇಂದ್ರ ಹ್ಯಾಂಗ್ ಸುಬ್ಬಾ ಜಿ, ಶ್ರೀ ದಿಲ್ಲಿ ರಾಮ್ ಥಾಪಾ ಜಿ ಮತ್ತು ಸಿಕ್ಕಿಂನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ
April 28th, 10:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ ಟಾಕ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ 30 ಕ್ಕೂ ಅಧಿಕ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯೊಂದಿಗೆ ಸಿಕ್ಕಿಂನ 50ನೇ ರಾಜ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.PM to visit Sikkim on 27–28 April
April 26th, 03:47 pm
PM Modi will visit Sikkim on 27–28 April 2026. During the visit, he will visit the Orchidarium in Gangtok and also participate in the closing ceremony of Sikkim’s 50th Year of Statehood celebrations. On the occasion, he will launch multiple development projects worth over ₹4,000 crore, spanning a wide range of sectors. His visit reflects the government’s continued commitment to the development of the Northeast region.ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 30th, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮಾರ್ಚ್ 31ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಗಾಂಧಿನಗರದಲ್ಲಿ ʻಸಾಮ್ರಾಟ್ ಸಂಪ್ರತಿʼ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಮಂತ್ರಿಯವರು ಅಹಮದಾಬಾದ್‌ನ ಸನಂದ್‌ನಲ್ಲಿ ʻಕೇನ್ಸ್ ಸೆಮಿಕಾನ್ʼ ಘಟಕವನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೂ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಮಂತ್ರಿಯವರು ವಾವ್-ಥರಾಡ್‌ಗೆ ಪ್ರಯಾಣಿಸಲಿದ್ದಾರೆ, ಅಲ್ಲಿ ಅವರು ಸಂಜೆ 4 ಗಂಟೆಗೆ 20,000 ಕೋಟಿ ರೂ.ಗೂ ಅಧಿಕ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
January 12th, 01:35 pm
ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.PM chairs 50th meeting of PRAGATI
December 31st, 08:11 pm
PM Modi chaired the 50th meeting of PRAGATI earlier today, marking a significant milestone in a decade-long journey of cooperative, outcome-driven governance. During the meeting, he reviewed five critical infrastructure projects across various sectors, spanning 5 States, with a cumulative cost of more than ₹40,000 crore. The PM remarked that PRAGATI is a powerful accelerator to achieve Viksit Bharat @ 2047.ಡೆಹ್ರಾಡೂನ್ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 09th, 01:00 pm
ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!ಡೆಹ್ರಾಡೂನ್ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
November 09th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 11:36 am
ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ
September 22nd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
August 20th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ
April 12th, 04:48 pm
ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:15 ರ ಸುಮಾರಿಗೆ ಅವರು ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪಾಡ್‌ಕ್ಯಾಸ್ಟ್ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ
March 16th, 11:47 pm
ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು
March 16th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್ ಆಫ್ ದಿ ಬಾಕ್ಸ್) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.ನವದೆಹಲಿಯಲ್ಲಿ ನಡೆದ ಸೋಲ್ ಲೀಡರ್‌ಶಿಪ್ ಕಾನ್ ಕ್ಲೆವ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
February 21st, 11:30 am
ಭೂತಾನ್ ಪ್ರಧಾನಮಂತ್ರಿ, ನನ್ನ ಸಹೋದರ ದಾಶೋ ತ್ಸೆರಿಂಗ್ ಟೋಬ್ಗೆ ಜಿ, ಸೋಲ್ ಬೋರ್ಡ್ ಅಧ್ಯಕ್ಷ ಸುಧೀರ್ ಮೆಹ್ತಾ, ಉಪಾಧ್ಯಕ್ಷ ಹನ್ಸುಮುಖ್ ಅಧಿಯಾ, ತಮ್ಮ ಜೀವನದಲ್ಲಿ, ತಮ್ಮ ಕ್ಷೇತ್ರಗಳಲ್ಲಿ ನಾಯಕತ್ವವನ್ನು ಒದಗಿಸುವಲ್ಲಿ ಯಶಸ್ವಿಯಾದ ಕೈಗಾರಿಕಾ ಜಗತ್ತಿನ ದಿಗ್ಗಜರು ಸೇರಿದಂತೆ ಅನೇಕ ಮಹಾನ್ ವ್ಯಕ್ತಿಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಭವಿಷ್ಯಕ್ಕಾಗಿ ಕಾಯುತ್ತಿರುವ ನನ್ನ ಯುವ ಸ್ನೇಹಿತರನ್ನೂ ನಾನು ಇಲ್ಲಿ ನೋಡುತ್ತಿದ್ದೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೋಲ್ ಲೀಡರ್ ಷಿಪ್ ಸಮ್ಮೇಳನದ ಮೊದಲ ಆವೃತ್ತಿಯನ್ನು ಉದ್ಘಾಟಿಸಿದರು
February 21st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ (ಸೋಲ್) ಲೀಡರ್ ಷಿಪ್ ಸಮ್ಮೇಳನ 2025 ಅನ್ನು ಉದ್ಘಾಟಿಸಿದರು. ಎಲ್ಲಾ ಗೌರವಾನ್ವಿತ ನಾಯಕರು ಮತ್ತು ಭವಿಷ್ಯದ ಮುಂಬರುವ ಯುವ ನಾಯಕರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಕೆಲವು ಘಟನೆಗಳು ಬಹಳ ಪ್ರಿಯವಾಗಿವೆ ಮತ್ತು ಇಂದು ಅಂತಹ ಒಂದು ಕಾರ್ಯಕ್ರಮವಾಗಿದೆ ಎಂದರು. ರಾಷ್ಟ್ರ ನಿರ್ಮಾಣಕ್ಕೆ ಉತ್ತಮ ನಾಗರಿಕರ ಅಭಿವೃದ್ಧಿ ಅಗತ್ಯ, ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರ ಅಭಿವೃದ್ಧಿ ಅಗತ್ಯ ಎಂದು ಪ್ರಧಾನಿ ಹೇಳಿದರು. ಪ್ರತಿಯೊಂದು ಕ್ಷೇತ್ರದಲ್ಲೂ ಅತ್ಯುತ್ತಮ ನಾಯಕರನ್ನು ರೂಪಿಸುವುದು ಅಗತ್ಯವಾಗಿದೆ, ಇದು ಸಮಯದ ಅಗತ್ಯವಾಗಿದೆ ಎಂದು ಅವರು ಹೇಳಿದರು. ಆದ್ದರಿಂದ, ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್ ಷಿಪ್ ವಿಕಸಿತ ಭಾರತದ ಅಭಿವೃದ್ಧಿಯ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ ಎಂದು ಅವರು ಒತ್ತಿ ಹೇಳಿದರು. ಆತ್ಮವು ಕೇವಲ ಸಂಘಟನೆಯ ಹೆಸರಿನಲ್ಲಿಲ್ಲ ಎಂದು ಹೇಳಿದ ಪ್ರಧಾನಮಂತ್ರಿ ಅವರು, ಆತ್ಮವು ಭಾರತದ ಸಾಮಾಜಿಕ ಜೀವನದ ಆತ್ಮವಾಗಲಿದೆ ಎಂದರು. ಇನ್ನೊಂದು ಅರ್ಥದಲ್ಲಿ, ಆತ್ಮವು ಆಧ್ಯಾತ್ಮಿಕ ಅನುಭವದ ಸಾರವನ್ನು ಸುಂದರವಾಗಿ ಸೆರೆಹಿಡಿಯುತ್ತದೆ ಎಂದು ಅವರು ಹೇಳಿದರು. ಸೋಲ್ ನ ಎಲ್ಲ ಪಾಲುದಾರರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ ಅವರು, ಮುಂದಿನ ದಿನಗಳಲ್ಲಿ ಗುಜರಾತ್ ನ ಗಿಫ್ಟ್ ಸಿಟಿ ಬಳಿ ಸೋಲ್ ನ ಹೊಸ, ವಿಶಾಲವಾದ ಕ್ಯಾಂಪಸ್ ಸಿದ್ಧವಾಗಲಿದೆ ಎಂದು ಘೋಷಿಸಿದರು.ಸಿ -295 ವಿಮಾನ ಕಾರ್ಖಾನೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 28th, 10:45 am
ಗೌರವಾನ್ವಿತ ಪೆಡ್ರೊ ಸ್ಯಾಂಚೆಜ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ, ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜೀ, ವಿದೇಶಾಂಗ ಸಚಿವರಾದ ಶ್ರೀ ಎಸ್. ಜೈಶಂಕರ್ ಜೀ, ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಸ್ಪೇನ್ ಮತ್ತು ರಾಜ್ಯ ಸರ್ಕಾರದ ಸಚಿವರು, ಏರ್ ಬಸ್ ಮತ್ತು ಟಾಟಾ ತಂಡಗಳ ಎಲ್ಲಾ ಸದಸ್ಯರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ದೇಶದ ಪ್ರಧಾನಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್ ನ ವಡೋದರಾದಲ್ಲಿ ಸಿ-295 ವಿಮಾನಗಳನ್ನು ತಯಾರಿಸಲು ಟಾಟಾ ವಿಮಾನ ತಯಾರಿಕಾ ಸಂಕೀರ್ಣವನ್ನು ಜಂಟಿಯಾಗಿ ಉದ್ಘಾಟಿಸಿದರು
October 28th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಮಂತ್ರಿ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಇಂದು ಗುಜರಾತ್ ನ ವಡೋದರದಲ್ಲಿರುವ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ-295 ವಿಮಾನಗಳನ್ನು ತಯಾರಿಸುವ ಟಾಟಾ ವಿಮಾನ ತಯಾರಿಕಾ ಸಂಕೀರ್ಣ (ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್) ವನ್ನು ಜಂಟಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನು ಇಬ್ಬರು ಪ್ರಧಾನಿಗಳೂ ವೀಕ್ಷಿಸಿದರು.ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಕತ್ರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
September 19th, 12:00 pm
ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಶ್ರೀನಗರ ಮತ್ತು ಕತ್ರಾದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.