ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ 49ನೇ ಪ್ರಗತಿ ಸಭೆ

September 24th, 09:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್ ಬ್ಲಾಕ್‌ನಲ್ಲಿ ನಡೆದ ’ಪ್ರಗತಿ’ಯ 49 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. “ಪ್ರಗತಿ” ಎಂಬುದು ಸಕ್ರಿಯ ಆಡಳಿತ ಮತ್ತು ಸಕಾಲಿಕ ಅನುಷ್ಠಾನಕ್ಕಾಗಿ ಐಸಿಟಿ-ಸಕ್ರಿಯಗೊಳಿಸಿದ ಬಹು-ಮಾದರಿ ವೇದಿಕೆ. ಪ್ರಮುಖ ಯೋಜನೆಗಳನ್ನು ತ್ವರಿತವಾಗಿ ನಿರ್ವಹಿಸಲು, ಅಡಚಣೆಗಳನ್ನು ಪರಿಹರಿಸಲು ಮತ್ತು ಸಮಯಕ್ಕೆ ಸರಿಯಾಗಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಈ ವೇದಿಕೆಯು ಕೇಂದ್ರ ಮತ್ತು ರಾಜ್ಯಗಳನ್ನು ಒಟ್ಟುಗೂಡಿಸುತ್ತದೆ.

ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ

September 24th, 06:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್‌ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

May 25th, 09:14 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 26 ಮತ್ತು 27ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅವರು ದಾಹೋಡ್ ಗೆ ಪ್ರಯಾಣ ಬೆಳೆಸಲಿದ್ದು, ಬೆಳಗ್ಗೆ 11:15 ರ ಸುಮಾರಿಗೆ ಅವರು ಲೋಕೋಮೋಟಿವ್ ಉತ್ಪಾದನಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಎಲೆಕ್ಟ್ರಿಕ್ ಲೋಕೋಮೋಟಿವ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ ಅವರು ದಾಹೋಡ್ ನಲ್ಲಿ ಸುಮಾರು 24,000 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

May 20th, 01:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬಿಕಾನೇರ್ ಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ದೇಶ್ನೋಕ್ ನ ಕರ್ಣಿ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.

ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ

May 07th, 12:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ:

ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

April 23rd, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 24ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:45 ಕ್ಕೆ ಅವರು ಮಧುಬನಿಗೆ ಪ್ರಯಾಣಿಸಲಿದ್ದು, ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರು 13,480 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ಜತೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ET Now ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣದ ಪಠ್ಯ

February 15th, 08:30 pm

ಪ್ರಧಾನಿ ಮೋದಿ ಅವರು ET Now ಜಾಗತಿಕ ವ್ಯಾಪಾರ ಶೃಂಗಸಭೆ 2025 ಅನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಧಾರಣೆಗಳನ್ನು ಎತ್ತಿ ತೋರಿಸಿದರು. ಸ್ವಾಮಿತ್ವ ಯೋಜನೆ ಮತ್ತು ಬ್ಯಾಂಕಿಂಗ್ ಸುಧಾರಣೆಗಳಂತಹ ಪರಿವರ್ತನಾ ನೀತಿಗಳನ್ನು ಮನ್ನಣೆ ನೀಡುವ ಮೂಲಕ ಜಾಗತಿಕ ಆರ್ಥಿಕ ನಾಯಕನಾಗಿ ಭಾರತದ ಏರಿಕೆಯನ್ನು ಅವರು ಒತ್ತಿ ಹೇಳಿದರು. ಸಕಾರಾತ್ಮಕ ಮನಸ್ಥಿತಿ, ತ್ವರಿತ ನ್ಯಾಯ ಮತ್ತು ವ್ಯಾಪಾರ ಮಾಡುವ ಸುಲಭತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು, ವಿಕಸಿತ್ ಭಾರತಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ-2025ನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ

February 15th, 08:00 pm

ನವದೆಹಲಿಯಲ್ಲಿ ಇಂದು ನಡೆದ ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2025ರಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಇಟಿ ನೌ ಶೃಂಗಸಭೆಯ ಕಳೆದ ಆವೃತ್ತಿಯಲ್ಲಿ, ಭಾರತವು ತಮ್ಮ ಮೂರನೇ ಅವಧಿಯಲ್ಲಿ ಹೊಸ ವೇಗದಲ್ಲಿ ಕೆಲಸ ಮಾಡುತ್ತದೆ ಎಂದು ವಿನಮ್ರವಾಗಿ ಹೇಳಿದ್ದನ್ನು ನೆನಪಿಸಿಕೊಂಡರು. ಈ ವೇಗವು ಈಗ ತೀವ್ರವಾಗಿದ್ದು ದೇಶದಿಂದ ಬೆಂಬಲವನ್ನು ಪಡೆಯುತ್ತಿರುವುದಾಗಿ ಅವರು ತೃಪ್ತಿ ವ್ಯಕ್ತಪಡಿಸಿದರು. ವಿಕಸಿತ ಭಾರತದ ಬದ್ಧತೆಗೆ ಅಪಾರ ಬೆಂಬಲ ನೀಡಿದ ಒಡಿಶಾ, ಮಹಾರಾಷ್ಟ್ರ, ಹರಿಯಾಣ ಮತ್ತು ನವದೆಹಲಿಯ ಜನರಿಗೆ ಅವರು ಧನ್ಯವಾದ ಅರ್ಪಿಸಿದರು. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಮುಟ್ಟುವಲ್ಲಿ ದೇಶದ ನಾಗರಿಕರು ಹೇಗೆ ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿ ಕೆಲಸ ಮಾಡುತ್ತಿದ್ದಾರೆ ಎಂಬುದಕ್ಕೆ ದೊರೆತ ಮನ್ನಣೆ ಇದು ಎಂದು ಅವರು ಹೇಳಿದರು.

ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ

July 26th, 09:30 am

ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು

July 26th, 09:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್‌ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.

2024-25ರ ಬಜೆಟ್ ಕುರಿತು ಪ್ರಧಾನಮಂತ್ರಿಯವರ ಪ್ರತಿಕ್ರಿಯೆ

July 23rd, 02:57 pm

ಈ ಬಜೆಟ್ ಸಮಾಜದ ಪ್ರತಿಯೊಂದು ವರ್ಗಕ್ಕೂ ಅಧಿಕಾರ ನೀಡುತ್ತದೆ. ಇದು ನಮ್ಮ ಹಳ್ಳಿಗಳಲ್ಲಿ ಮತ್ತು ಬಡವರಿಗೆ ಮತ್ತು ರೈತರಿಗೆ ಸಮೃದ್ಧಿಗೆ ದಾರಿ ಮಾಡಿಕೊಡುತ್ತದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ಬಜೆಟ್ ಮಧ್ಯಮ ವರ್ಗದ ಸಬಲೀಕರಣವನ್ನು ಮುಂದುವರೆಸುತ್ತದೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ನೀಡುತ್ತದೆ. ಇದು ಮಧ್ಯಮ ವರ್ಗಕ್ಕೆ ಹೊಸ ಶಕ್ತಿಯನ್ನು ಒದಗಿಸುತ್ತದೆ ಮತ್ತು ಬುಡಕಟ್ಟು ಸಮಾಜ, ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಸಶಕ್ತಗೊಳಿಸಲು ದೃಢವಾದ ಯೋಜನೆಗಳನ್ನು ಒಳಗೊಂಡಿದೆ. ಇದರ ಜೊತೆಗೆ , ಈ ಬಜೆಟ್ ಆರ್ಥಿಕತೆಯಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುತ್ತದೆ ಮತ್ತು ಸಣ್ಣ ವ್ಯಾಪಾರಿಗಳು , MSME ಗಳು ಅಥವಾ ಸಣ್ಣ ಪ್ರಮಾಣದ ಕೈಗಾರಿಕೆಗಳ ಪ್ರಗತಿಗೆ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಬಜೆಟ್ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುತ್ತದೆ ಮತ್ತು ಉತ್ಪಾದನೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ವಿಶೇಷ ಗಮನವನ್ನು ನೀಡುವ ಮೂಲಕ ಆರ್ಥಿಕ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ.

2024-25ರ ಬಜೆಟ್‌ ಕುರಿತು ಪ್ರಧಾನ ಮಂತ್ರಿ ಹೇಳಿಕೆ

July 23rd, 01:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2024-25 ಅನ್ನು ಶ್ಲಾಘಿಸಿದರು.

ಫೆಬ್ರವರಿ 11 ರಂದು ಪ್ರಧಾನಮಂತ್ರಿಯವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ

February 09th, 05:25 pm

ಪ್ರಧಾನಮಂತ್ರಿಯವರು ಕೈಗೊಂಡ ಅನೇಕ ಉಪಕ್ರಮಗಳಿಗೆ ಅಂತ್ಯೋದಯ ದೃಷ್ಟಿಕೋನವು ಮಾರ್ಗದರ್ಶಿಯಾಗಿದೆ. ಸ್ವಾತಂತ್ರ್ಯದ ಹಲವಾರು ದಶಕಗಳ ನಂತರವೂ ಈ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗದ ಪ್ರಮುಖ ವಿಭಾಗಗಳಿಗೆ, ಬುಡಕಟ್ಟು ಸಮುದಾಯಕ್ಕೆ ಅಭಿವೃದ್ಧಿಯ ಪ್ರಯೋಜನಗಳು ತಲುಪುವುದನ್ನು ಖಾತ್ರಿಪಡಿಸುವುದು ಪ್ರಮುಖ ಕೇಂದ್ರೀಕೃತ ಕ್ಷೇತ್ರಗಳ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೆ ಅನುಗುಣವಾಗಿ, ಈ ಪ್ರದೇಶದ ಗಮನಾರ್ಹ ಬುಡಕಟ್ಟು ಜನಸಂಖ್ಯೆಗೆ ಅನುಕೂಲವಾಗುವಂತಹ ಬಹು ಉಪಕ್ರಮಗಳನ್ನು ಪ್ರಧಾನಮಂತ್ರಿ ಸಮರ್ಪಿಸಲಿದ್ದಾರೆ ಮತ್ತು ಅಡಿಪಾಯ ಹಾಕಲಿದ್ದಾರೆ.

Our connectivity initiatives emerged as a lifeline during the COVID Pandemic: PM Modi

November 01st, 11:00 am

PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಭೇಟಿಯ ಸಂದರ್ಭದಲ್ಲಿ ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

June 01st, 12:00 pm

ಗೌರವಾನ್ವಿತ ಪ್ರಧಾನ ಮಂತ್ರಿ 'ಪ್ರಚಂಡ' ಜೀ, ಎರಡೂ ನಿಯೋಗಗಳ ಸದಸ್ಯರೇ, ಮಾಧ್ಯಮದ ನಮ್ಮ ಸ್ನೇಹಿತರೇ,

ಅಕ್ಟೋಬರ್ 9ರಿಂದ 11ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 08th, 12:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 9 ರಿಂದ 11 ರವರೆಗೆ ಗುಜರಾತ್ ಗೆ ಭೇಟಿ ನೀಡಲಿದ್ದು, ಅಕ್ಟೋಬರ್ 11 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.